ವಿಜಯನಗರ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ಕ್ಷೇತ್ರದ ಶಾಸಕಿ ಲತಾ ಮಲ್ಲಿಕಾರ್ಜುನ ಕಚೇರಿಯ ಬೀಗ ಮುರಿದು ಕಳ್ಳತನ ನಡೆಸಲಾಗಿದೆ. ಹರಪನಹಳ್ಳಿಯ ಕಾಶಿ ಸಂಗಮೇಶ್ವರ ಬಡಾವಣೆಯಲ್ಲಿರುವ ಶಾಸಕಿ ಲತಾ ಮಲ್ಲಿಕಾರ್ಜುನ್ ಕಚೇರಿ ಬೀಗ ಮುರಿದು ದರೋಡೆ ನಡೆಸಲಾಗಿದೆ.
ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ಕಾಫಿ ಚೆನ್ನಮೇಶ್ವರ ಬಡಾವಣೆಯಲ್ಲಿ ಈ ಒಂದು ಘಟನೆ ನಡೆದಿದ್ದು ನಿನ್ನೆ ನಸುಕಿನ ಜಾವ ನಾಲ್ಕು ಗಂಟೆಯ ಸುಮಾರಿಗೆ ಕಚೇರಿಯ ಬೀಗ ಮುರಿದು ಕಳ್ಳತನ ನಡೆಸಿದ್ದಾರೆ. ಕಚೇರಿಯಲ್ಲಿದ್ದ 2.5 ಲಕ್ಷ ನಗದು ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಖದೀಮರು ಕದ್ದಿದ್ದಾರೆ.