Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಂಗಾಂಗ ಕಸಿ ಮಾಡಲು ಕೋವಿಡ್ ಪರೀಕ್ಷೆ ಕಡ್ಡಾಯವಲ್ಲ: ರಾಜ್ಯಗಳಿಗೆ ಆರೋಗ್ಯ ಸಚಿವಾಲಯ ಸೂಚನೆ

14/11/2025 1:19 PM

‘ಮರಗಳೇ ನನ್ನ ಮಕ್ಕಳು’ ಎಂದು ಪೋಷಿಸಿದ್ದ ವೃಕ್ಷಮಾತೆ `ಸಾಲು ಮರದ ತಿಮ್ಮಕ್ಕ’ ಕನ್ನಡಿಗರ ಹೆಮ್ಮೆ.!

14/11/2025 1:19 PM

BREAKING: ಬಿಹಾರದಲ್ಲಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿ | Bihar election Results

14/11/2025 1:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಮರಗಳೇ ನನ್ನ ಮಕ್ಕಳು’ ಎಂದು ಪೋಷಿಸಿದ್ದ ವೃಕ್ಷಮಾತೆ `ಸಾಲು ಮರದ ತಿಮ್ಮಕ್ಕ’ ಕನ್ನಡಿಗರ ಹೆಮ್ಮೆ.!
KARNATAKA

‘ಮರಗಳೇ ನನ್ನ ಮಕ್ಕಳು’ ಎಂದು ಪೋಷಿಸಿದ್ದ ವೃಕ್ಷಮಾತೆ `ಸಾಲು ಮರದ ತಿಮ್ಮಕ್ಕ’ ಕನ್ನಡಿಗರ ಹೆಮ್ಮೆ.!

By kannadanewsnow5714/11/2025 1:19 PM

ಬೆಂಗಳೂರು : ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ (114)ಅವರು ತೀವ್ರ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾಲುಮರದ ತಿಮ್ಮಕ್ಕ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾಲುಮರದ ತಿಮ್ಮಕ್ಕ ಇಂದು ನಿಧನರಾಗಿದ್ದಾರೆ.

ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಸಾಲುಮರದ ತಿಮ್ಮಕ್ಕ ಅವರು ದಾಖಲಾಗಿದ್ದರು. ಕಳೆದ ಕೆಲವು ದಿನಗಳ ಹಿಂದೆ ಮನೆಯಲ್ಲಿ ತಿಮ್ಮಕ್ಕ ಜಾರಿ ಬಿದ್ದಿದ್ದರು. ಅಲ್ಲದೆ ತೀವ್ರ ಉಸಿರಾಟದ ಸಮಸ್ಯೆಯಿಂದ ತಿಮ್ಮಕ್ಕ ಬಳಲುತ್ತಿದ್ದರು. ಈ ಹಿನ್ನಲೆಯಲ್ಲಿ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ.

8,000 ಕ್ಕೂ ಅಧಿಕ ಸಸಿಗಳನ್ನು ನೆಟ್ಟು ಪೋಷಿಸಿ ಬೆಳೆಸಿದ್ದಾರೆ. ಪರಿಸರದ ಉಳಿವಿಗೆ ಅವರ ನೀಡಿರುವ ಮಹತ್ತರ ಕೊಡುಗೆಯನ್ನು ಗೌರವಿಸಿ ಭಾರತ ಸರ್ಕಾರ 2019ರಲ್ಲಿ ಅವರಿಗೆ ಪದ್ಮಶ್ರೀ ಪ್ರಶಸ್ತಿಯಿಂದ ಪುರಸ್ಕರಿಸಿದೆ. ಪತಿ ಚಿಕ್ಕರಂಗಯ್ಯ ಕೂಡ ಸಸಿನೆಡುವಲ್ಲಿ ತಿಮ್ಮಕ್ಕನಿಗೆ ನೆರವಾಗುತ್ತಿದ್ದರು. ದಂಪತಿಗೆ ಸಂತಾನ ಭಾಗ್ಯವಿರಲಿಲ್ಲ. ಆ ಕೊರತೆ, ದುಃಖ ಮತ್ತು ನೋವನ್ನು ಸಸಿ ನೆಟ್ಟು ಪೋಷಿಸುವ ಮೂಲಕ ನೀಗಿಸಿಕೊಳ್ಳುತ್ತಿದ್ದರು.

ಸಾಲುಮರದ ತಿಮ್ಮಕ್ಕ ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದ್ದಾಳೆ.[೧] ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್‌ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.

ಜೀವನ
ತಿಮ್ಮಕ್ಕ ಅವರು ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ಜನಿಸಿದರು. ತಂದೆ ಚಿಕ್ಕರಂಗಯ್ಯ; ತಾಯಿ ವಿಜಯಮ್ಮ. ಇವರಿಗೆ ಯಾವುದೇ ಔಪಚಾರಿಕ ಶಿಕ್ಷಣ ಲಭ್ಯವಾಗದೆ ಹತ್ತಿರದ ಒಂದು ಕಲ್ಲು ಗಣಿಯಲ್ಲಿ ದಿನಗೂಲಿ ನೌಕರರಾಗಿ ಕೆಲಸ ಮಾಡಿದರು. ಇವರು ಚಿಕ್ಕಯ್ಯ ಎಂಬ ಒಬ್ಬ ದನಕಾಯುವವರನ್ನು ಮದುವೆಯಾಗಿದ್ದು, ಅವರು ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಹುಲಿಕಲ್ ಗ್ರಾಮದವರು. ದುರದೃಷ್ಟವಶಾತ್, ಇವರಿಗೆ ಮಕ್ಕಳಿರಲಿಲ್ಲ. ತಿಮ್ಮಕ್ಕ ಅವರು ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ಆಲದ ಮರಗಳನ್ನು ನೆಡಲಾರಂಭಿಸಿದರು ಎಂದು ಹೇಳಲಾಗಿದೆ.

ಕುದೂರಿನಿಂದ ಹುಲಿಕಲ್ ತನಕವಿರುವ ರಾಜ್ಯ ಹೆದ್ದಾರಿ ೯೪ರಲ್ಲಿ ತಿಮ್ಮಕ್ಕರವರು ಬೆಳಸಿದ ಆಲದ ಮರಗಳು. ತಿಮ್ಮಕ್ಕ ಅವರ ಹಳ್ಳಿಯ ಬಳಿ ಆಲದ ಮರಗಳು ಹೇರಳವಾಗಿದ್ದವು. ತಿಮ್ಮಕ್ಕ ಮತ್ತು ಅವರ ಪತಿ ಈ ಮರಗಳಿಂದ ಸಸಿಗಳನ್ನು ಕಸಿಮಾಡಲು ಆರಂಭಿಸಿದರು. ಮೊದಲ ವರ್ಷದಲ್ಲಿ ಹತ್ತು ಸಸಿಗಳನ್ನು ನೆರೆಯ ಕುದೂರು ಹಳ್ಳಿಯ ಬಳಿ ೪ ಕಿ.ಮೀ. ಉದ್ದಳತೆಯ ದೂರ ನೆಡಲಾಯಿತು. ಹೀಗೆಯೇ ಎರಡನೇ ವರ್ಷ ಹದಿನೈದು ಮತ್ತು ಮೂರನೇ ವರ್ಷ ೨೦ ಸಸಿಗಳನ್ನು ನೆಡಲಾಯಿತು.

ಇವರು ಈ ಸಸಿಗಳನ್ನು ನೆಡಲು ತಮ್ಮ ಅತ್ಯಲ್ಪ ಆದಾಯವನ್ನೇ ಬಳಸಿದರು.[೩] ಈ ಗಂಡ-ಹೆಂಡಿರು ಸಸಿಗಳಿಗೆ ನೀರುಣಿಸಲು ಬಿಂದಿಗೆ ಕೊಳಗಗಳಲ್ಲಿ ನೀರನ್ನು ನಾಲ್ಕು ಕಿ.ಮೀ. ದೂರ ಸಾಗಿಸುತ್ತಿದ್ದರು. ಹಾಗೂ ಸಸಿಗಳನ್ನು ಮೇವಿನ ಜಾನುವಾರುಗಳ ಕಾಟದಿಂದ ತಪ್ಪಿಸಲು ಅವುಗಳ ಸುತ್ತ ಮುಳ್ಳು ಪೊದೆಗಳನ್ನು ಹೊದಿಸಿ ಕಾಪಾಡಿದರು. ಸಸಿಗಳು ಬೆಳೆಯಲು ನೀರಿನ ಅವಶ್ಯಕತೆಯಿರುವುದರಿಂದ, ಅವಗಳನ್ನು ಹೆಚ್ಚಾಗಿ ಮುಂಗಾರು ಮಳೆಯ ಕಾಲದಲ್ಲಿ ನೆಡಲಾಯಿತು.

ತಿಮ್ಮಕ್ಕನವರ ಸಾಧನೆಯ ಪಲಕ

ಮುಂದಿನ ಮುಂಗಾರಿನಷ್ಟು ಹೊತ್ತಿಗೆ ಈ ಎಲ್ಲ ಸಸಿಗಳು ಚೆನ್ನಾಗಿ ಬೇರು ಬಿಟ್ಟಿದ್ದವು.[೪] ಒಟ್ಟಾರೆ ೨೮೪ ಸಸಿಗಳನ್ನು ನೆಡಲಾಗಿ, ಇಂದಿಗೆ ಅವುಗಳ ಮೌಲ್ಯವು ಸುಮಾರು ೧೫ ಲಕ್ಷ ರೂಪಾಯಿಗಳೆಂದು ಅಂದಾಜು ಮಾಡಲಾಗಿದೆ.[೧] ಈ ಮರಗಳ ನಿರ್ವಹಣೆಯನ್ನು ಈಗ ಕರ್ನಾಟಕ ಸರ್ಕಾರವು ವಹಿಸಿಕೊಂಡಿದೆ.

ಪ್ರಶಸ್ತಿ, ಗೌರವ
ತಮ್ಮ ಸಾಧನೆಗಾಗಿ ತಿಮ್ಮಕ್ಕ ಅವರಿಗೆ ಈ ಕೆಳಗಿನ ಸನ್ಮಾನಗಳು ಮತ್ತು ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿದೆ.

ರಾಷ್ಟ್ರೀಯ ಪೌರ ಪ್ರಶಸ್ತಿ – ೧೯೯೫[೪]
ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ – ೧೯೯೭[೪]
ವೀರಚಕ್ರ ಪ್ರಶಸ್ತಿ – ೧೯೯೭
ಮಹಿಳಾ ಮತ್ತು ಶಿಶು ಕಲ್ಯಾಣ ಇಲಾಖೆ, ಕರ್ನಾಟಕ ಸರ್ಕಾರ – ಇವರಿಂದ ಮಾನ್ಯತೆಯ ಪ್ರಮಾಣ ಪತ್ರ
ಭಾರತೀಯ ವೃಕ್ಷ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ, ಬೆಂಗಳೂರು – ಇವರಿಂದ ಶ್ಲಾಘನೆಯ ಪ್ರಮಾಣ ಪತ್ರ.
ಕರ್ನಾಟಕ ಕಲ್ಪವಲ್ಲಿ ಪ್ರಶಸ್ತಿ – ೨೦೦೦
ಗಾಡ್‌ಫ್ರಿ ಫಿಲಿಪ್ಸ್ ಧೀರತೆ ಪ್ರಶಸ್ತಿ – ೨೦೦೬
ಪಂಪಾಪತಿ ಪರಿಸರ ಪ್ರಶಸ್ತಿ
ಬಾಬಾಸಾಹೇಬ್ ಅಂಬೇಡ್ಕರ್ ಪ್ರಶಸ್ತಿ
ವನಮಾತೆ ಪ್ರಶಸ್ತಿ
ಮಾಗಡಿ ವ್ಯಕ್ತಿ ಪ್ರಶಸ್ತಿ
ಶ್ರೀಮಾತಾ ಪ್ರಶಸ್ತಿ
ಎಚ್.ಹೊನ್ನಯ್ಯ ಸಮಾಜ ಸೇವಾ ಪ್ರಶಸ್ತಿ
ಕರ್ನಾಟಕ ಪರಿಸರ ಪ್ರಶಸ್ತಿ
ಮಹಿಳಾರತ್ನ ಪ್ರಶಸ್ತಿ
ನ್ಯಾಷನಲ್ ಸಿಟಿಜನ್ ಪ್ರಶಸ್ತಿ
ರಾಜ್ಯೋತ್ಸವ ಪ್ರಶಸ್ತಿ
ಹೂವಿನಹೊಳೆ ಪ್ರತಿಷ್ಠಾನ Archived 2021-05-18 ವೇಬ್ಯಾಕ್ ಮೆಷಿನ್ ನಲ್ಲಿ.ದ ವಿಶ್ವಾತ್ಮ ಪುರಸ್ಕಾರ ೨೦೧೫
ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ವಿಶಾಲಾಕ್ಷಿ ಪ್ರಶಸ್ತಿ.
೨೦೧೦ರ ಸಾಲಿನ ಪ್ರತಿಷ್ಠಿತ ‘ನಾಡೋಜ’ ಪ್ರಶಸ್ತಿ ಲಭಿಸಿದೆ.
೨೦೧೯ ರ ಗಣರಾಜ್ಯೋತ್ಸವ ಸಂದರ್ಭದಲ್ಲಿ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.
೨೦೨೦ರಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್.

`Saalu Marad Thimmakka' 'Trees are my children' is the pride of Kannadigas! The tree mother who nurtured the trees saying
Share. Facebook Twitter LinkedIn WhatsApp Email

Related Posts

BREAKING : ವೃಕ್ಷಮಾತೆ `ಸಾಲುಮರದ ತಿಮ್ಮಕ್ಕ ನಿಧನ’ : ಸಚಿವ ಈಶ್ವರ ಖಂಡ್ರೆ ಶೋಕ

14/11/2025 12:46 PM1 Min Read

BREAKING : ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ‘ಸಾಲು ಮರದ ತಿಮ್ಮಕ್ಕ’ ನಿಧನ |Saalumarada Thimmakka Passed Away

14/11/2025 12:36 PM3 Mins Read

BREAKING : ಪದ್ಮಶ್ರೀ ಪುರಸ್ಕೃತೆ ‘ಸಾಲು ಮರದ ತಿಮ್ಮಕ್ಕ’ ಇನ್ನಿಲ್ಲ | saluMarada timmakka Passed away

14/11/2025 12:32 PM1 Min Read
Recent News

ಅಂಗಾಂಗ ಕಸಿ ಮಾಡಲು ಕೋವಿಡ್ ಪರೀಕ್ಷೆ ಕಡ್ಡಾಯವಲ್ಲ: ರಾಜ್ಯಗಳಿಗೆ ಆರೋಗ್ಯ ಸಚಿವಾಲಯ ಸೂಚನೆ

14/11/2025 1:19 PM

‘ಮರಗಳೇ ನನ್ನ ಮಕ್ಕಳು’ ಎಂದು ಪೋಷಿಸಿದ್ದ ವೃಕ್ಷಮಾತೆ `ಸಾಲು ಮರದ ತಿಮ್ಮಕ್ಕ’ ಕನ್ನಡಿಗರ ಹೆಮ್ಮೆ.!

14/11/2025 1:19 PM

BREAKING: ಬಿಹಾರದಲ್ಲಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿ | Bihar election Results

14/11/2025 1:05 PM

BREAKING: ಬಿಹಾರದಲ್ಲಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿ | Bihar election Results

14/11/2025 1:00 PM
State News
KARNATAKA

‘ಮರಗಳೇ ನನ್ನ ಮಕ್ಕಳು’ ಎಂದು ಪೋಷಿಸಿದ್ದ ವೃಕ್ಷಮಾತೆ `ಸಾಲು ಮರದ ತಿಮ್ಮಕ್ಕ’ ಕನ್ನಡಿಗರ ಹೆಮ್ಮೆ.!

By kannadanewsnow5714/11/2025 1:19 PM KARNATAKA 3 Mins Read

ಬೆಂಗಳೂರು : ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ (114)ಅವರು ತೀವ್ರ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾಲುಮರದ…

BREAKING : ವೃಕ್ಷಮಾತೆ `ಸಾಲುಮರದ ತಿಮ್ಮಕ್ಕ ನಿಧನ’ : ಸಚಿವ ಈಶ್ವರ ಖಂಡ್ರೆ ಶೋಕ

14/11/2025 12:46 PM

BREAKING : ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ‘ಸಾಲು ಮರದ ತಿಮ್ಮಕ್ಕ’ ನಿಧನ |Saalumarada Thimmakka Passed Away

14/11/2025 12:36 PM

BREAKING : ಪದ್ಮಶ್ರೀ ಪುರಸ್ಕೃತೆ ‘ಸಾಲು ಮರದ ತಿಮ್ಮಕ್ಕ’ ಇನ್ನಿಲ್ಲ | saluMarada timmakka Passed away

14/11/2025 12:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.