ನವದೆಹಲಿ: ಭಾರತ-ಪಾಕಿಸ್ತಾನ ಕದನ ವಿರಾಮದ ಹಿಂದಿನ ಸೀಕ್ರೆಟ್ ರಿವೀಲ್ ಆಗಿದೆ. ಐಎಂಎಫ್ ಸಾಲಕ್ಕಾಗಿ ತಕ್ಷಣದ ಕದನ ವಿರಾಮವನ್ನು ಒಪ್ಪಿಕೊಳ್ಳುವಂತೆ ಅಮೆರಿಕ ಪಾಕಿಸ್ತಾನದ ಮೇಲೆ ಒತ್ತಡ ಹೇರಿತು ಎಂಬುದಾಗಿ ಹೇಳಲಾಗುತ್ತಿದೆ.
ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡುವಲ್ಲಿ ಅಮೆರಿಕವು ನೇರ ಒತ್ತಡ ಹೇರುವ ಮೂಲಕ ಪ್ರಮುಖ ಪಾತ್ರ ವಹಿಸಿದೆ. ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ನಿಂದ 1 ಬಿಲಿಯನ್ ಡಾಲರ್ ಸಾಲದ ತಾತ್ಕಾಲಿಕ ಬಿಡುಗಡೆಯನ್ನು ಕದನ ವಿರಾಮದ ತಕ್ಷಣದ ಸ್ವೀಕಾರಕ್ಕೆ ಒತ್ತಾಯಿಸಿತ್ತು ಎಂಬುದಾಗಿ ಹೇಳಲಾಗುತ್ತಿದೆ.
ಇನ್ನೂ ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾದರೂ ಸಿಂಧೂ ನದಿ ನೀರು ಒಪ್ಪಂದ ರದ್ದು, ವ್ಯಾಪಾರ ವಹಿವಾಟು ಸ್ಥಗಿತ ಸೇರಿದಂತೆ ಇನ್ನುಳಿದ ಅನುಸರಣೆಯು ಹಾಗೇ ಮುಂದುವರೆಯಲಿದೆ ಎಂಬುದಾಗಿ ಸರ್ಕಾರಿ ಮೂಲಗಳು ತಿಳಿಸಿವೆ.