ಬೆಂಗಳೂರು: ರಾಜ್ಯಾಧ್ಯಂತ ದೀಪಾವಳಿ ಹಬ್ಬದ ಪ್ರಯುಕ್ತ ತೆರೆಯುವ ಪಟಾಕಿ ಮಾರಾಟ ಮಳಿಗೆಗಳು, ಪಟಾಕಿ ತಯಾರಿಕೆ ಸೇರಿದಂತೆ ಇತರೆ ಪ್ರಕ್ರಿಯೆಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ನಿಷೇಧಿಸಿ ಕಾರ್ಮಿಕ ಇಲಾಖೆ ಆದೇಶಿಸಿದೆ. ಒಂದು ವೇಳೆ ಕಾನೂನು ಮೀರಿದ್ರೇ, ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.
ಈ ಕುರಿತಂತೆ ರಾಜ್ಯದ ಆಯಾ ಜಿಲ್ಲೆಯ ಕಾರ್ಮಿಕ ಅಧಿಕಾರಿ ಹಾಗೂ ಜಿಲ್ಲಾ ಕಾರ್ಮಿಕ ಯೋಜನಾ ಸೊಸೈಟಿಯ ಸದಸ್ಯ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.
ಆದೇಶದಲ್ಲಿ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016 ರನ್ವಯ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಸಿಕೊಳ್ಳುವುದು ಹಾಗೂ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಯಲ್ಲಿ ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ತಪ್ಪಿದಲ್ಲಿ ಕಾಯ್ದೆಯಡಿ ಕಾನೂನು ಕ್ರಮವನ್ನು ಜರುಗಿಸಲಾಗುತ್ತದೆ ಎಂಬುದಾಗಿ ಎಚ್ಚರಿಸಿದ್ದಾರೆ.
ವರ್ಷ ಪೂರ್ತಿ ಭತ್ತ, ರಾಗಿ ಖರೀದಿ ಕೇಂದ್ರ ತೆರೆಯಿರಿ; ಮಂಡ್ಯ ಜಿಲ್ಲಾಡಳಿತಕ್ಕೆ ಮದ್ದೂರು ರೈತ ಸಂಘ ಆಗ್ರಹ