Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾರ್ವಜನಿಕರೇ ಗಮನಿಸಿ : ಮಾರ್ಚ್ 1ರಿಂದ ಬದಲಾಗಲಿದೆ ಈ 8 ಪ್ರಮುಖ ನಿಯಮಗಳು |New Rules from March 1 

24/02/2026 5:30 AM

ಮೊಬೈಲ್ ಕ್ಯಾಂಟೀನ್ ತೆರೆಯಲು ₹5 ಲಕ್ಷ ಸಹಾಯಧನ: SC/ST ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ!

24/02/2026 5:09 AM

ವೈದ್ಯರಾಗುವ ಕನಸು ಕಂಡವರಿಗೆ ಭರ್ಜರಿ ಸುದ್ದಿ: ಪಿಯುಸಿಯಲ್ಲಿ ಗಣಿತ ಓದಿದವರಿಗೂ ಇನ್ಮುಂದೆ `MBBS’ಗೆ ಅವಕಾಶ!

24/02/2026 5:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಈಗಲೂ ದುರ್ಬಲ ವರ್ಗದವರು ಜಾತಿ ತಾರತಮ್ಯ ಅನುಭವಿಸುತ್ತಿದ್ದಾರೆ : CM ಸಿದ್ದರಾಮಯ್ಯ
KARNATAKA

ರಾಜ್ಯದಲ್ಲಿ ಈಗಲೂ ದುರ್ಬಲ ವರ್ಗದವರು ಜಾತಿ ತಾರತಮ್ಯ ಅನುಭವಿಸುತ್ತಿದ್ದಾರೆ : CM ಸಿದ್ದರಾಮಯ್ಯ

By kannadanewsnow5730/08/2025 4:00 PM

ಬೆಂಗಳೂರು : ರಾಜ್ಯದಲ್ಲಿ ಪೊಲೀಸರು ಜಾತಿ ತಾರತಮ್ಯ ಪ್ರಕರಣಗಳನ್ನ ಗಂಭೀರವಾಗಿ ಪರಿಗಣಿಸಿ ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ರಾಜಭವನದಲ್ಲಿ ನಡೆದ ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು. ಸರ್ಕಾರವು ಪ್ರತಿ ಜಿಲ್ಲೆಯಲ್ಲಿ ಡಿಸಿಆರ್ ಇ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ. ನಾನು ಇತ್ತೀಚೆಗೆ ನಡೆಸಿದ ಪರಿಶೀಲನಾ ಸಭೆಯಲ್ಲಿ ಡಿಸಿಆರ್ ಇ ಪೊಲೀಸ್ ಠಾಣೆಗಳ ಕಾರ್ಯ ಮತ್ತು ಪ್ರಗತಿ ತೃಪ್ತಿದಾಯಕವಿಲ್ಲ ಎಂಬುದನ್ನು ಗಮನಿಸಿದ್ದೇನೆ. ಇದನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ದುರ್ಬಲವರ್ಗದವರಿಗೆ ಸುರಕ್ಷತೆ ಒದಗಿಸುವ ಸರ್ಕಾರದ ಉದ್ದೇಶ ಸಫಲವಾಗಬೇಕು. ಇತರೆ ರಾಜ್ಯಗಳಿಗೆ ಹೋಲಿಸಿದರೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಠ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ವಿರುದ್ಧ ಶಿಕ್ಷೆಯ ಪ್ರಮಾಣ ಬಹಳ ಕಡಿಮೆಯಿದೆ. ಈ ಬಗ್ಗೆ ಪೊಲೀಸರು ಗಮನಹರಿಸಬೇಕು ಎಂದರು.

ಇಂದು ವಿಶಿಷ್ಠ ಸೇವೆ ಸಲ್ಲಿಸಿರುವ ಪೊಲೀಸರಿಗೆ ಕೊಡಮಾಡಲಾದ ಸೇವಾಪದಕದ ಹಿಂದೆ ಅವರ ಸೇವಾ ಮನೋಭಾವ, ಪ್ರಮಾಣಿಕತೆ ಹಾಗೂ ಪರಿಶ್ರಮವಿರುತ್ತದೆ. ಸಾಮಾಜಿಕ ಕಳಕಳಿಯೊಂದಿಗೆ ಸೇವೆ ಸಲ್ಲಿಸಿದಾಗ ಮಾತ್ರ ಇಂತಹ ಸಾಧನೆ ಸಾಧ್ಯವಾಗುತ್ತದೆ. ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಜೊತೆಗೆ ಜನರ ಆಸ್ತಿಪಾಸ್ತಿ ಸಂರಕ್ಷಿಸುವುದು ಪೊಲೀಸರ ಜವಾಬ್ದಾರಿ. ದೇಶದಲ್ಲಿ ಶಾಂತಿ ನೆಮ್ಮದಿ ನೆಲೆಸುವಲ್ಲಿ ಪೊಲೀಸರ ಪಾತ್ರ ಅತ್ಯಂತ ಮಹತ್ವವಾದುದು. ಸಮಾಜದಲ್ಲಿ ನಡೆಯುವ ಅಪರಾಧಗಳನ್ನು ತಡೆಗಟ್ಟುವ ಜವಾಬ್ದಾರಿ ಸರ್ಕಾರ ಹಾಗೂ ಪೊಲೀಸಿನವರದ್ದಾಗಿದೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೆ ಬಹಳಷ್ಟು ಅಪರಾಧಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದರು.

ಪೊಲೀಸರಿಗೆ ಸಾಮಾಜಿಕ ಬದ್ದತೆಯಿದ್ದರೆ, ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ. ಸಮಾಜದಲ್ಲಿನ ಅಸಮಾನತೆಗಳನ್ನು ತೊಡೆದು ಸಂವಿಧಾನ ನೀಡುವ ರಕ್ಷಣೆಯನ್ನು ಜಾರಿಗೊಳಿಸುವಲ್ಲಿ ಪೊಲೀಸರ ಪಾತ್ರ ಪ್ರಮುಖವಾಗಿದೆ. ಬಲಾಢ್ಯರ ಕೈಯ್ಯಲ್ಲಿ ಅಧಿಕಾರವಿದ್ದರೆ, ದುರ್ಬಲ ವರ್ಗದವರ ಜೀವನ ದುಸ್ತರವಾಗುತ್ತದೆ ಎಂದು ಡಾ.ಬಿ.ಆರ್. ಅಂಬೇಡ್ಕರ್ ಅವರು ತಿಳಿಸಿದ್ದರು. ದುರ್ಬಲವರ್ಗಗಳ ಮೇಲಾಗುವ ದೌಜರ್ನ್ಯಗಳನ್ನು ಪೊಲೀಸರು ತಡೆಗಟ್ಟಬೇಕಿದೆ. ಸಾಮಾನ್ಯ ಜನರಿಗೆ ನ್ಯಾಯ ದೊರಕಿಸಿಕೊಡಬೇಕು. ಪೊಲೀಸರ ಸಂಖ್ಯೆಯ ಬಗ್ಗೆ ಗಮನಹರಿಸದೇ, ಅವರು ತಡೆಗಟ್ಟಿರುವ ಅಪರಾಧಗಳೆಷ್ಟು ಎಂದು ಪರಿಗಣಿಸಬೇಕಾಗಿದೆ ಎಂದರು.

ಇಂದಿನ ಪ್ರಶಸ್ತಿ ವಿಜೇತರ ಸಾಧನೆ ಶ್ಲಾಘನೀಯವಾಗಿದ್ದು, ಇತರರಿಗೆ ಮಾದರಿಯಾಗಬೇಕು. ಸಮಾಜದಲ್ಲಿನ ನ್ಯೂನ್ಯತೆಗಳಿಗೆ ಪರಿಹಾರ ಕಂಡುಕೊಳ್ಳಬೇಕಿದೆ. ಪೊಲೀಸ್ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಆತ್ಮವಿಮರ್ಶೆ ಮಾಡಿಕೊಂಡು ಉತ್ತಮ ಸೇವೆ ಸಲ್ಲಿಸಬೇಕು ಎಂದರು.

ಇಂದು ರಾಜಭವನದಲ್ಲಿ ನಡೆದ ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ ಹಾಗೂ ಅಗ್ರಗಣ್ಯ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿಗಳಿಗೆ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್ ಅವರಿಂದ "ರಾಷ್ಟ್ರಪತಿಗಳ ಪೊಲೀಸ್ ಪದಕ ಪ್ರದಾನ" ಸಮಾರಂಭದಲ್ಲಿ ಪಾಲ್ಗೊಂಡು, ಪದಕ ವಿಜೇತ ಪೊಲೀಸ್ ಸಿಬ್ಬಂದಿಗಳನ್ನು ಅಭಿನಂದಿಸಿದೆ.
ಗೃಹ ಸಚಿವರಾದ ಡಾ.ಜಿ.ಪರಮೇಶ್ವರ… pic.twitter.com/piX0StHuYN

— Siddaramaiah (@siddaramaiah) August 30, 2025

ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ ಹಾಗೂ ಅಗ್ರಗಣ್ಯ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿಗಳಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್ ಅವರು "ರಾಷ್ಟ್ರಪತಿಗಳ ಪೊಲೀಸ್ ಪದಕ ಪ್ರದಾನ" ನೆರವೇರಿಸಿದರು. ಈ ಸಮಾರಂಭದಲ್ಲಿ ನಾನು ಪಾಲ್ಗೊಂಡು, ಪದಕ ವಿಜೇತ ಪೊಲೀಸ್ ಸಿಬ್ಬಂದಿಗಳನ್ನು ಅಭಿನಂದಿಸಿದೆ. pic.twitter.com/hrYLGn7JGf

— Siddaramaiah (@siddaramaiah) August 30, 2025

 

The weaker sections of the state are still facing caste discrimination: CM Siddaramaiah
Share. Facebook Twitter LinkedIn WhatsApp Email

Related Posts

ಮೊಬೈಲ್ ಕ್ಯಾಂಟೀನ್ ತೆರೆಯಲು ₹5 ಲಕ್ಷ ಸಹಾಯಧನ: SC/ST ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ!

24/02/2026 5:09 AM1 Min Read

ನೀವು ಕೊಟ್ಟ `ಸಾಲ’ ವಾಪಸ್ ಕೊಡಲು ನಿರಾಕರಿಸಿದ್ರೆ ಏನು ಮಾಡಬೇಕು? ಹೀಗಿವೆ ಕಾನೂನು ಮಾರ್ಗಗಳು

24/02/2026 5:00 AM2 Mins Read

‘ಮನರೇಗಾ’ ಹೆಸರು ಬದಲಿಸಿದ್ದು ‘ಮೋದಿ ಸರ್ಕಾರ’ದಿಂದ ಮನೆ ಹಾಳು ನಿರ್ಧಾರ: ಸಚಿವ ಬೈರತಿ ಸುರೇಶ್ ಆಕ್ರೋಶ

23/02/2026 9:38 PM2 Mins Read
Recent News

ಸಾರ್ವಜನಿಕರೇ ಗಮನಿಸಿ : ಮಾರ್ಚ್ 1ರಿಂದ ಬದಲಾಗಲಿದೆ ಈ 8 ಪ್ರಮುಖ ನಿಯಮಗಳು |New Rules from March 1 

24/02/2026 5:30 AM

ಮೊಬೈಲ್ ಕ್ಯಾಂಟೀನ್ ತೆರೆಯಲು ₹5 ಲಕ್ಷ ಸಹಾಯಧನ: SC/ST ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ!

24/02/2026 5:09 AM

ವೈದ್ಯರಾಗುವ ಕನಸು ಕಂಡವರಿಗೆ ಭರ್ಜರಿ ಸುದ್ದಿ: ಪಿಯುಸಿಯಲ್ಲಿ ಗಣಿತ ಓದಿದವರಿಗೂ ಇನ್ಮುಂದೆ `MBBS’ಗೆ ಅವಕಾಶ!

24/02/2026 5:00 AM

ನೀವು ಕೊಟ್ಟ `ಸಾಲ’ ವಾಪಸ್ ಕೊಡಲು ನಿರಾಕರಿಸಿದ್ರೆ ಏನು ಮಾಡಬೇಕು? ಹೀಗಿವೆ ಕಾನೂನು ಮಾರ್ಗಗಳು

24/02/2026 5:00 AM
State News
KARNATAKA

ಮೊಬೈಲ್ ಕ್ಯಾಂಟೀನ್ ತೆರೆಯಲು ₹5 ಲಕ್ಷ ಸಹಾಯಧನ: SC/ST ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ!

By kannadanewsnow5724/02/2026 5:09 AM KARNATAKA 1 Min Read

ಪ್ರವಾಸೋದ್ಯಮ ಇಲಾಖೆಯು 2025-26ನೇ ಸಾಲಿನ ಎಸ್‌ಸಿಎಸ್‌ಪಿ (SCSP) ಮತ್ತು ಟಿಎಸ್‌ಪಿ (TSP) ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ…

ನೀವು ಕೊಟ್ಟ `ಸಾಲ’ ವಾಪಸ್ ಕೊಡಲು ನಿರಾಕರಿಸಿದ್ರೆ ಏನು ಮಾಡಬೇಕು? ಹೀಗಿವೆ ಕಾನೂನು ಮಾರ್ಗಗಳು

24/02/2026 5:00 AM

‘ಮನರೇಗಾ’ ಹೆಸರು ಬದಲಿಸಿದ್ದು ‘ಮೋದಿ ಸರ್ಕಾರ’ದಿಂದ ಮನೆ ಹಾಳು ನಿರ್ಧಾರ: ಸಚಿವ ಬೈರತಿ ಸುರೇಶ್ ಆಕ್ರೋಶ

23/02/2026 9:38 PM

ಬೆಂಗಳೂರಲ್ಲಿ 688 ಕೋಟಿ ರೂಪಾಯಿ ಬಾಕಿ ಆಸ್ತಿ ತೆರಿಗೆ ವಸೂಲಾತಿ ಮಾಡಿದ GBA

23/02/2026 9:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.