ಮೈಸೂರು: ಶಿವಮೊಗ್ಗದಲ್ಲಿ ಐಸಿಸ್ ಸಂಪರ್ಕದಲ್ಲಿದ್ದ ಯುವಕರ ಬಂಧನ ವಿಚಾರವಾಗಿ ಮೈಸೂರಿನಲ್ಲಿ ಕೆಪಿಸಿಸಿ ಯೂತ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್ ಪ್ರತಿಕ್ರಿಯೆ ನೀಡಿದ್ದಾರೆ. ಡಿಗ್ರಿ ಪಡೆದ ಯುವಕರಿಗೆ ಉದ್ಯೋಗದ ಸಿಗುತ್ತಿಲ್ಲ. ಹೀಗಾಗಿ ಯುವಕರು ಕ್ರೈಂ ಹಾದಿ ಹಿಡಿಯುತ್ತಿದ್ದಾರೆ ಎಂದು ಹೇಳಿದ್ದಾರೆ.
BIGG NEWS : ಮಂಗಳೂರಿನಲ್ಲಿ ಹಾಸ್ಟೆಲ್ ಕಿಟಕಿ ಮುರಿದು ಮೂವರು ವಿದ್ಯಾರ್ಥಿನಿಯರು ಎಸ್ಕೇಪ್ : ಪೊಲೀಸರ ಹುಡುಕಾಟ
ನಗರದಲ್ಲಿ ಮಾತನಾಡಿದ ಅವರು, ಯವಕರು ಉದ್ಯೋಗದ ಸಿಗದ ಕಾರಣಕ್ಕೆ ತಪ್ಪಾದ ದಾರಿಯಲ್ಲಿ ಹೋಗುತ್ತಿದ್ದಾರೆ. ಇದೇ ರಾಜ್ಯದಲ್ಲಿ ನಡೆಯುತ್ತಿರುವುದು. ಐಸಿಸ್ ಸಂಘಟನೆ ಅಂತಲ್ಲ. ಯುವಕರು ತಪ್ಪಾದ ದಾರಿ ಹಿಡಿಯುತ್ತಿರುವುದು ಸತ್ಯ. ನಿರುದ್ಯೋಗ ಇರುವ ಕಾರಣ ಯುವಕರು ತಪ್ಪು ದಾರಿ ಹಿಡಿದಿದ್ದಾರೆ. ಇದಕ್ಕೆ ಬಿಜೆಪಿಯೇ ಹೊಣೆಗಾರರಾಗಿದ್ದಾರೆ. ಕೆಲಸ ಇದ್ದರೆ ಯುವಕರಿಗೆ ತಪ್ಪು ದಾರಿಗೆ ತುಳಿಯುವ ಯೋಚನೆ ಬರಲ್ಲ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.
2023ರ ವರೆಗೆ ಯುವಕರು ತಾಳ್ಮೆಯಿಂದ ಇರಿ. ಆ ದಿನಕ್ಕೆ ಸುವರ್ಣ ಕಾಲ ಬರುತ್ತೆ. ತಪ್ಪು ದಾರಿಗೆ ಹೋಗಬೇಡಿ. ಐಸಿಸ್ ಸಂಪರ್ಕದಲ್ಲಿ ಇರುವವರನ್ನು ಭಾರತದಲ್ಲಿ ಇಟ್ಟುಕೊಳ್ಳಬೇಡಿ. ಅವರಿಗೆ ಗಲ್ಲು ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು.
BIGG NEWS : ಮಂಗಳೂರಿನಲ್ಲಿ ಹಾಸ್ಟೆಲ್ ಕಿಟಕಿ ಮುರಿದು ಮೂವರು ವಿದ್ಯಾರ್ಥಿನಿಯರು ಎಸ್ಕೇಪ್ : ಪೊಲೀಸರ ಹುಡುಕಾಟ
ಇನ್ನು ಬೆಂಗಳೂರಿನಲ್ಲಿ ಒತ್ತುವರಿ ತೆರವಿಗೆ ಕಾಂಗ್ರೆಸ್ ವಿರೋಧವಿದೆ ಎಂಬ ಬಿಜೆಪಿ ಹೇಳಿಕೆ ವಿಚಾರವಾಗಿ ಮಾತನಾಡಿ, ಕಾಂಗ್ರೆಸ್ಗೂ ಒತ್ತುವರಿ ತೆರವಿಗೂ ಸಂಬಂಧವಿಲ್ಲ. ಬಿಜೆಪಿ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಿ. ಒತ್ತುವರಿ ತೆರವು ಮಾಡುವ ಮುನ್ನಾ ವೈಜ್ಞಾನಿಕವಾಗಿ ವರದಿ ತಯಾರಿಸಿ. ವೈಜ್ಞಾನಿಕವಾಗಿ ವರದಿ ತಯಾರು ಮಾಡದೆ ಸಿಕ್ಕ ಸಿಕ್ಕವರ ಮನೆ ಹೊಡೆದರೆ ಹೇಗೆ ಹೇಳಿ ಎಂದು ಕಿಡಿಕಾರಿದರು.