ಧಾರವಾಡ: ರಾಜ್ಯದ ವಿವಿಧ ಇಲಾಖೆಯಲ್ಲಿ ಖಾಲಿ ಇರುವಂತ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಯುವಜನತೆ ಬೀದಿಗೆ ಇಳಿದಿದ್ದಾರೆ. ಪೊಲೀಸರ ವಿರೋಧದ ನಡುವೆಯೂ ಯುವಕರು ಪ್ರತಿಭಟನೆಗೆ ಇಳಿದಿದ್ದು, ಬ್ಯಾರಿಕೇಡ್ ಲೆಕ್ಕಿಸದೇ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ.
ಧಾರವಾಡದಲ್ಲಿ ಖಾಲಿ ಸರ್ಕಾರಿ ಹುದ್ದೆ ಭರ್ತಿ ಮಾಡುವಂತೆ ಆಗ್ರಹಿಸಿ ಯುವಕರು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ. ಜಯನಗರ ವೃತ್ತದ ಕಡೆಗೆ ಖಾಲಿ ಹುದ್ದೆ ಭರ್ತಿಗೆ ಆಗ್ರಹಿಸಿ ಯುವಕರು ಪ್ರತಿಭಟನಾ ರ್ಯಾಲಿಯಲ್ಲಿ ಸಾಗುತ್ತಿದ್ದಾರೆ. ಎಕೆಎಸ್ಎ, ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘಟನೆಯಿಂದ ಈ ಪ್ರತಿಭಟನೆಯನ್ನು ನಡೆಸಲಾಗುತ್ತಿದೆ.
ಪ್ರತಿಭಟನಾ ನಿರತ ಯುವಕರನ್ನು ತಡೆಯೋದಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಬ್ಯಾರಿಕೇಡ್ ಹಾಕಿ ಯುವಕರನ್ನು ತಡೆಯೋದಕ್ಕೆ ಮುಂದಾದ ಪೊಲೀಸರ ಪ್ರಯತ್ನ ವಿಫಲವಾಗಿದೆ. ಬ್ಯಾರಿಕೇಡ್ ತಳ್ಳಿಕೊಂಡು ಯುವಕರು ಧಾರವಾಡದ ಜಯನಗರ ವೃತ್ತದ ಕಡೆಗೆ ತಮ್ಮ ಪ್ರತಿಭಟನಾ ರ್ಯಾಲಿಯನ್ನು ಮುಂದುವರೆಸಿದ್ದಾರೆ.
ಬ್ಯಾರಿಕೇಡ್ ಹಾಕಿದಂತ ವೇಳೆಯಲ್ಲಿ ಪೊಲೀಸರು ಹಾಗೂ ಯುವಕರ ನಡುವೆ ವಾಗ್ವಾದಕ್ಕೂ ಕಾರಣವಾಯಿತು. ಮಾತಿನ ಚಕಮಕಿ ನಡೆದು ಉದ್ರಿಕ್ತತೆಯೂ ಉಂಟಾಯಿತು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಿಗಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
ಇರಾನ್ ನಲ್ಲಿ ಭುಗಿಲೆದ್ದ ಹಿಂಸಾಚಾರ: ದೇಶ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಕೇಂದ್ರ ಸರ್ಕಾರ ಸೂಚನೆ








