Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

ಸೇನಾ ಕ್ಯಾಪ್ಟನ್ ಪ್ರೇಯಸಿಗೆ ಮಾಡಿದ ಪ್ರಪೋಸ್ ಪುಲ್ ವೈರಲ್; ನೆಟ್ಟಿಗರ ಕಾಮೆಂಟ್ ಸುರಿಮಳೆ

​ನಾರ್ವೆ ಚೆಸ್: ಗುಕೇಶ್ ವಿರುದ್ಧ ರೋಚಕ ಜಯ ಸಾಧಿಸಿದ ಪ್ರಜ್ಞಾನಂದ; ಪ್ರಶಸ್ತಿ ರೇಸ್‌ನಲ್ಲಿ ಮುನ್ನಡೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಆಗ ಗವರ್ನರ್ ಫೋಟೋಗೆ ಚಪ್ಪಲಿ ಹಾರ ಹಾಕಿದ್ದೀರಿ, ಈಗ ಸಿಎಂ ಸಿದ್ದರಾಮಯ್ಯಗೂ ಹಾಕುತ್ತೀರಾ? : HD ಕುಮಾರಸ್ವಾಮಿ
KARNATAKA

ಆಗ ಗವರ್ನರ್ ಫೋಟೋಗೆ ಚಪ್ಪಲಿ ಹಾರ ಹಾಕಿದ್ದೀರಿ, ಈಗ ಸಿಎಂ ಸಿದ್ದರಾಮಯ್ಯಗೂ ಹಾಕುತ್ತೀರಾ? : HD ಕುಮಾರಸ್ವಾಮಿ

By ಸುರೇಶ್‌

ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಗವರ್ನರ್ ಪ್ರಾಸಿಕ್ಯೂಶನ್ ಗೆ ಅನುಮತಿ ಕೊಟ್ಟಾಗ ಕಾಂಗ್ರೆಸ್ ಕಾರ್ಯಕರ್ತರು ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಪ್ರತಿಭಟಿಸಿದ್ದರು. ಈ ವಿಚಾರವಾಗಿ ಇಂದು ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ, ಅಂದು ಅನುಮತಿ ಕೊಟ್ಟ ರಾಜ್ಯಪಾಲರಿಗೆ ಆಗ ಚಪ್ಪಲಿ ಹಾರ ಹಾಕಿದ್ದೀರಿ. ಈಗ ಹೈಕೋರ್ಟ್ ಸಿಎಂ ಸಿದ್ದರಾಮಯ್ಯಗೆ ತನಿಖೆಗೆ ಆದೇಶ ನೀಡಿದೆ. ಈಗ ಅವರಿಗೂ ಚಪ್ಪಲಿ ಹಾರ ಹಾಕುತ್ತೀರಾ? ಎಂದು ಆಕ್ರೋಶ ಹೊರಹಾಕಿದ್ದಾರೆ.

ಇಂದು ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ರಾಜೀನಾಮೆ ಕೊಟ್ಟರಾ? ಎಂದು ಕೇಳಿದ ಸಿಎಂ ಸಿದ್ದರಾಮಯ್ಯ ಅವರಿಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ನನ್ನ ಮೇಲಿನ ಪ್ರಕರಣಗಳಿಗೂ ನಿಮ್ಮ ಹಗರಣಕ್ಕೂ ವ್ಯತ್ಯಾಸ ಇದೆ. ನನ್ನ ಮೇಲಿನ ಆರೋಪಗಳ ಮಾತು ಆಮೇಲೆ. ನಿಮ್ಮ ವಿರುದ್ಧ ಹೈಕೋರ್ಟ್, ಜನಪ್ರತಿನಿಧಿಗಳ ನ್ಯಾಯಾಲಯಗಳಿಂದ ಆದೇಶಗಳು ಬಂದಿವೆ. ಅದಕ್ಕೇನು ಹೇಳುತ್ತೀರಿ? ಎಂದು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದರು.

ಹೈಕೋರ್ಟ್ ನಲ್ಲಿ ವಾದ ಮಾಡುವಾಗ ವಕೀಲರು ಮೂಡಾ ಹಗರಣದ ಅಕ್ರಮಗಳನ್ನು ಎಳೆ ಎಳೆಯಾಗಿ ಇಂಚಿಚು ಮಾಹಿತಿ ಕೋರ್ಟ್ ಕಲಾಪದಲ್ಲಿ ಬಿಚ್ಚಿಡಲಾಗಿದೆ. ನ್ಯಾಯಾಲಯಗಳ ಆದೇಶವೂ ಬಂದಿದೆ. ಹೇಳಿಕೊಳ್ಳುವುದಕ್ಕೆ ನಿಮಗೆ ಏನಿದೆ? ಎಂದು ಕೇಂದ್ರ ಸಚಿವರು ಟಾಂಗ್ ನೀಡಿದ್ದಾರೆ. ಕುಮಾರಸ್ವಾಮಿ ಸರ್ಕಾರಿ ಭೂಮಿ ತೆಗೆದುಕೊಂಡಿದ್ದಾರೆ ಎಂದು ಆರೋಪ ಮಾಡುತ್ತಿದ್ದಾರೆ. ಸಾಯಿ ವೆಂಕಟೇಶ್ವರ ಮಿನರಲ್ಸ್ ಬಗ್ಗೆಯೂ ಅವರು ಮಾತನಾಡುತ್ತಿದ್ದಾರೆ.

ಈ ಬಗ್ಗೆ ನಾನು ಹಿಂದೆಯೆ ಹೇಳಿದೇನೆ. ಅರ್ಜಿ ಹಾಕದಿರುವ ಕಂಪನಿಗೆ ಗಣಿ ಗುತ್ತಿಗೆ ಕೊಡಲಾಗಿದೆ ಎನ್ನುತ್ತಿದ್ದಾರೆ. ಅವರು ಅರ್ಜಿ ಹಾಕಿದ್ದಾರೆ, ಆದರೆ ಅವರಿಗೆ ಗಣಿ ಗುತ್ತಿಗೆ ನೀಡಲಾಗಿಲ್ಲ. ಅವರಿಗೆ ಒಂದು ಇಂಚು ಭೂಮಿಯನ್ನು ಕೊಡಲಾಗಿಲ್ಲ, ರಾಜ್ಯ ಬೊಕ್ಕಸಕ್ಕೆ ನಯಾಪೈಸೆ ನಷ್ಟ ಆಗಿಲ್ಲ. ಹೀಗಿದ್ದ ಮೇಲೆ ಅದು ಹಗರಣ ಹೇಗೆ ಆಗುತ್ತದೆ ಎಂದು ಕೇಂದ್ರ ಸಚಿವರು ಕೇಳಿದರು.

ರಾಜ್ಯ ಸರ್ಕಾರ 2009ರಲ್ಲೇ ಭೂಮಿ ಯಾರಿಗೂ ಕೊಡಲಾಗಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಯಾರೋ ಒಬ್ಬ ಅಧಿಕಾರಿ ಮಾಡಿದ ತಪ್ಪಿಗೆ ಕುಮಾರಸ್ವಾಮಿ ಮೇಲೆ ಆರೋಪ ಮಾಡುತ್ತಿದ್ದಾರೆ ಇವರು. ಜಂತಕಲ್ ಮೈನಿಂಗ್ ವಿಚಾರದಲ್ಲಿ ಆಗಿನ ಸಿಎಂ ಆದೇಶ ಮಿಸ್ ಕಂಡಕ್ಟ್ ಆಗಿದೆ ಎಂದು ಲೋಕಾಯುಕ್ತ ವರದಿಯಲ್ಲಿ ಹೇಳಲಾಗಿದೆ. ನ್ಯಾ.ಸಂತೋಷ ಹೆಗಡೆ ಅವರು ಹಾಗೆಂದು ಉಲ್ಲೇಖ ಮಾಡಿದ್ದಾರೆ. ಅದರ ಹೊರತಾಗಿ ಹಣ ಪಡೆದುಕೊಂಡೊ ಅಥವಾ ಭೂಮಿಗಾಗಿ, ಲಾಭಕ್ಕಾಗಿ ಮಾಡಿಲ್ಲ ಎಂದು ವರದಿಯಲ್ಲಿ ಸ್ಪಷ್ಟವಾಗಿ ಬರೆಯಲಾಗಿದೆ. ಸಾಯಿ ವೆಂಕಟೇಶ್ವರ ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿ 2012ರಿಂದ ಇದೆ ಎಂದು ಅವರು ಮಾಹಿತಿ ನೀಡಿದರು.

ಮೂಡಾ ಹಗರಣ ಬಗ್ಗೆ ಚರ್ಚೆ ನಡೆಯುತ್ತಿದೆ. ಹೈಕೋರ್ಟ್ ಪೀಠದಲ್ಲಿ ಸಿಎಂ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ಕೋರ್ಟ್ ಆದೇಶದ ಪ್ರತಿ ಎಲ್ಲರಿಗೂ ಸಿಕ್ಕಿದೆ. ಹಲವಾರು ಕಾನೂನು ತಜ್ಞರು ತೀರ್ಪಿನ ಬಗ್ಗೆ ವಿಶ್ಲೇಷಣೆ ಮಾಡಿದ್ದಾರೆ. ಆದೇಶದ ಬಗ್ಗೆ ಮಾಧ್ಯಮಗಳಲ್ಲಿಯೂ ದೊಡ್ಡ ಪ್ರಮಾಣದಲ್ಲಿ ಸುದ್ದಿ ಪ್ರಸಾರವಾಗಿದೆ. ಆದರೆ, ಸಿಎಂ ಸಾಹೇಬರಿಗೆ ಕೋರ್ಟ್ ಆದೇಶದ ಪ್ರತಿಯೇ ಸಿಕ್ಕಿಲ್ಲವಂತೆ. ನಿಮ್ಮ ವಿರುದ್ಧ ಬಂದಿರುವ ಆದೇಶದ ಬಗ್ಗೆ ಮಾತನಾಡಿ ಎಂದರೆ, ಜೆಡಿಎಸ್ ಬಿಜೆಪಿ ಒಳಸಂಚು ಮಾಡಿವೆ, ಕುಮಾರಸ್ವಾಮಿ ಯಾವಾಗ ರಾಜೀನಾಮೆ ಕೊಡುತ್ತಾರೆ ಎಂದು ಕೇಳುತ್ತಾರೆ ಸಿದ್ದರಾಮಯ್ಯ ಅವರು. ಇದು ನಮ್ಮ ಸಿಎಂ ವರಸೆ ಎಂದು ಕುಮಾರಸ್ವಾಮಿ ಅವರು ಲೇವಡಿ ಮಾಡಿದರು.

ನನ್ನ ರಾಜಿನಾಮೆಯನ್ನು ಸಿಎಂ, ಡಿಸಿಎಂ ಆದಿಯಾಗಿ ಎಲ್ಲರು ರಾಜಿನಾಮೆ ಕೇಳಿದ್ದಾರೆ. ನನ್ನ ಮೇಲಿನ ಆರೋಪ ಮುಕ್ತವಾದ ಮೇಲೆ ನಾನು ಮಾತನಾಡುತ್ತೇನೆ ಎಂದು ಹೇಳಿದ್ದೇನೆ. ಮೂಡಾ‌ ವಿಚಾರದಲ್ಲಿ ನಿಮ್ಮ ಭಂಡತನ ಎಷ್ಟು ಎಂಬುದನ್ನು ಇವರೇ ತೋರಿಸುತ್ತಿದ್ದಾರೆ. ಜನ ಇವರ ನಾಟಕ ನೋಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಹಿಂದೆ ಇದೇ ಸಿದ್ದರಾಮಯ್ಯ ಐದು ವರ್ಷಗಳ ಸರ್ಕಾರ ಮಾಡಿದ್ದಾಗ ದಿನವೂ ಇಂಥವೇ ಅಕ್ರಮಗಳನ್ನು ನಡೆಸಿದ್ದರು. ಅದನ್ನು ದಿನವೂ ನಾನು ಪ್ರಶ್ನೆ ಮಾಡುತ್ತಿದ್ದೆ. ಇವನೊಬ್ಬನಿಂದ ನನಗೆ ಮುಜುಗರ ಇಲ್ಲದೆ ಆಡಳಿತ ನಡೆಸೋಕೆ ಆಗುತ್ತಿಲ್ಲ, ಇವನನ್ನು ಮಟ್ಟ ಹಾಕಿದರೆ ನನಗೆ ಅಡ್ಡ ಯಾರೂ ಇರುವುದಿಲ್ಲ ಎಂದು ಅವತ್ತೇ ನನ್ನ ವಿರುದ್ಧ ಕುತಂತ್ರ ಮಾಡಿದರು. ಜನರ ಪರವಾಗಿ ಹೋರಾಟ ಮಾಡಿದ್ದಕ್ಕೆ ಪ್ರತಿಯಾಗಿ ನಾನು ಇವತ್ತು ಇದೆಲ್ಲಾ ಎದುರಿಸಬೇಕಿದೆ. ಧೈರ್ಯವಾಗಿ ಎದುರಿಸುತ್ತೇನೆ ಎಂದು ಕೇಂದ್ರ ಸಚಿವರು ಸವಾಲು ಹಾಕಿದರು.

ಹೆದರಿಸಿ ಕುಮಾರಸ್ವಾಮಿ ಬಾಯಿ ಮುಚ್ಚಿಸಿಸಬಹುದು ಎಂದು ಕಾಂಗ್ರೆಸ್ ನವರು ಭಾರೀ ಸಂಚು ಮಾಡಿದರು. ಆದರೂ ಇವರಿಗೆ ನನ್ನ ಬಾಯಿ ಮುಚ್ಚಿಸಲು ಸಾಧ್ಯವಾಯಿತಾ? ಯಾರಿಂದಲೂ ನನ್ನ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ ಎಂದರು ಅವರು.ಡಿನೋಟಿಫಿಕೇಶನ್ ವಿಚಾರಕ್ಕೆ ಬರುವುದಾರೆ, ರಾಜಶೇಖರಯ್ಯ ಅನಾಮಿಕ ಎಂದು ಸಚಿವರು ಹೇಳಿದ್ದಾರೆ. 2007ರ ವಿಳಾಸವನ್ನು ಈಗ ಹುಡುಕಿಕೊಂಡು ಹೋದರೆ ಏನು ಪ್ರಯೋಜನ?

ಐದು ವರ್ಷ ಅಧಿಕಾರದಲ್ಲಿ ಇದ್ದಾಗ ಹುಡುಕಿಕೊಂಡು ಯಾಕೆ ಹೋಗಲಿಲ್ಲ? ಇವರು ನನ್ನ ನೈತಿಕತೆ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ನನ್ನ ನೈತಿಕತೆಯನ್ನು ಸಾಬೀತು ಮಾಡಿ ಉತ್ತರ ಕೊಡುತ್ತೇನೆ ಎಂದು ಅವರು ಸವಾಲು ಹಾಕಿದರು.ಗಂಗೇನಹಳ್ಳಿ ಭೂಮಿ ಸರ್ಕಾರಿ ಭೂಮಿ ಎಂದು ಸುಳ್ಳು ಹೇಳಿದ್ದಾರೆ. ಸ್ವಾಧೀನ ಮಾಡಿಕೊಂಡ ಭೂಮಿಗೆ ಬಿಡಿಎ ಪರಿಹಾರ ನೀಡಿದ್ದಾರೆಯೇ? ಅಲ್ಲಿ ಬಡಾವಣೆ ಮಾಡಲಾಗಿದೆಯೇ? ಯಾರಿಗಾದರೂ ನಿವೇಶನ ಹಂಚಿಕೆ ಆಗಿದೆಯಾ? 1975-7 6ರಲ್ಲಿ ಅದಕ್ಕೆ ಅಧಿಸೂಚನೆ ಹೊರಡಿಸ…

Share. Facebook Twitter LinkedIn WhatsApp Email

Related Posts

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

1 Min Read

BREAKING: ಕಲಬುರ್ಗಿಯಲ್ಲಿ ಪ್ರೀತಿ ನಿರಾಕರಣೆಯ ಭೀತಿಯಲ್ಲಿ ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ!

1 Min Read

BREAKING: ವಿಧಾನ ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ ಇಳಿಸಿದ ಕಾಂಗ್ರೆಸ್

1 Min Read
Recent News

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

ಸೇನಾ ಕ್ಯಾಪ್ಟನ್ ಪ್ರೇಯಸಿಗೆ ಮಾಡಿದ ಪ್ರಪೋಸ್ ಪುಲ್ ವೈರಲ್; ನೆಟ್ಟಿಗರ ಕಾಮೆಂಟ್ ಸುರಿಮಳೆ

​ನಾರ್ವೆ ಚೆಸ್: ಗುಕೇಶ್ ವಿರುದ್ಧ ರೋಚಕ ಜಯ ಸಾಧಿಸಿದ ಪ್ರಜ್ಞಾನಂದ; ಪ್ರಶಸ್ತಿ ರೇಸ್‌ನಲ್ಲಿ ಮುನ್ನಡೆ!

BREAKING: ಕಲಬುರ್ಗಿಯಲ್ಲಿ ಪ್ರೀತಿ ನಿರಾಕರಣೆಯ ಭೀತಿಯಲ್ಲಿ ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ!

State News
KARNATAKA

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು : ಇಂಧನ ಇಲಾಖೆಯಲ್ಲಿ ಹಿರಿಯ ಅಧಿಕಾರಿಗಳ ನೇಮಕ ಹಾಗೂ ಖಾತೆ ಹಂಚಿಕೆ ಕುರಿತು ಅಸಮಾಧಾನ ಇಲ್ಲ ಎಂದಿರುವ ಇಂಧನ…

BREAKING: ಕಲಬುರ್ಗಿಯಲ್ಲಿ ಪ್ರೀತಿ ನಿರಾಕರಣೆಯ ಭೀತಿಯಲ್ಲಿ ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ!

BREAKING: ವಿಧಾನ ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ ಇಳಿಸಿದ ಕಾಂಗ್ರೆಸ್

BREAKING: ಧಾರವಾಡ ವಿವಿಯಲ್ಲಿ ಸಂಶೋಧನಾ ವಿದ್ಯಾರ್ಥಿಗೆ ಪ್ರಾಧ್ಯಾಪಕನಿಂದಲೇ ಕಿರುಕುಳ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.