ಹಾವೇರಿ : ರಾಜ್ಯದಲ್ಲಿ 29 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇವೆ ಶಿಕ್ಷಕರ ಖಾಲಿ ಹುದ್ದೆಗಳ ಭರ್ತಿಗೆ ಬಗ್ಗೆ ಸಭೆ ಕರೆಯುತ್ತೆವೆ ಎಂದು ಹಾವೇರಿಯಲ್ಲಿ ಸಭಾಪತಿ ಬಸವರಾಜ್ ಹೊರಟಿ ಹೇಳಿಕೆ ನೀಡಿದರು.ಹಾವೇರಿಯಲ್ಲಿ ಈ ಕುರಿತು ಮಾತನಾಡಿದ ಅವರು, ಮುಂದಿನ ಅಧಿವೇಶನ ಸಂದರ್ಭದಲ್ಲಿ ಸಭೆ ಕರೆಯಬೇಕು.
ತರಗತಿಗೆ ಒಬ್ಬ ಶಿಕ್ಷಕರನ್ನು ಕೊಡುವ ಕೆಲಸ ಆಗಬೇಕು ಈ ವಿಚಾರವಾಗಿ ಶಿಕ್ಷಣ ಇಲಾಖೆಯ ಸಚಿವರಿಗೆ ಕೇಳುತ್ತೇನೆ. ಶಿಕ್ಷಕರ ನೇಮಕ ಮಾಡದಿದ್ದರೆ ಹೇಗೆ ಎಸ್ ಎಸ್ ಎಲ್ ಸಿ ರಿಸಲ್ಟ್ ಕೇಳುತ್ತೀರಿ? ಎಸ್‍ಎಸ್‍ಎಲ್‍ಸಿಯಲ್ಲಿ ಹೇಗೆ ಉತ್ತಮ ಫಲಿತಾಂಶ ನಿರೀಕ್ಷೆ ಮಾಡುತ್ತೀರಿ? ಶಿಕ್ಷಕರ ನೇಮಕಾತಿ ಬಗ್ಗೆ ಮುಖ್ಯಮಂತ್ರಿ ಜೊತೆಗೆ ಮಾತನಾಡುತ್ತೇನೆ. ಸರ್ಕಾರ ಎಲ್ಲಾ ನ್ಯೂನ್ಯತೆ ಸರಿಪಡಿಸಲಿ. ಎಮ್ಮಿಯನ್ನು ನೀರಿನಲ್ಲಿ ಮಲಗಿಸಿ ಬೆಲೆ ಕಟ್ಟುವುದು ಬೇಡ ಎಂದು ಅಸಮಾಧಾನ ಹೊರಹಾಕಿದರು.








