ನವದೆಹಲಿ: ಕರ್ನಾಟಕ ಲೋಕಸಭಾ ಚುನಾವಣೆಯ ದಿನಾಂಕ ಏಪ್ರಿಲ್ 26, 2024 (14 ಸ್ಥಾನಗಳು) ಮತ್ತು ಮೇ 4, 2024 (14 ಸ್ಥಾನಗಳು) ರಂದು ನಿಗದಿಯಾಗಿದೆ. ಕರ್ನಾಟಕದ ಜನರು ಎರಡು ಹಂತಗಳಲ್ಲಿ ಮತ ಚಲಾಯಿಸಲಿದ್ದಾರೆ. 2024 ರ ಲೋಕಸಭಾ ಚುನಾವಣೆ ಏಪ್ರಿಲ್ 19 ರಿಂದ ಜೂನ್ 1 ರವರೆಗೆ 7 ಹಂತಗಳಲ್ಲಿ ನಡೆಯಲಿದೆ. ಏಳು ಹಂತಗಳಲ್ಲಿ ದೇಶದ 543 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.
2023 ರಲ್ಲಿ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಈ ಗೆಲುವು ಕಾಂಗ್ರೆಸ್ ನ ನೈತಿಕ ಸ್ಥೈರ್ಯವನ್ನು ಹೆಚ್ಚಿಸಿದೆ. 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ 26 ಸ್ಥಾನಗಳನ್ನು ಗಳಿಸಿದ್ದರೆ, ಬಿಜೆಪಿ ಮಾತ್ರ 25 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟವು ಕೇವಲ ಎರಡು ಸ್ಥಾನಗಳನ್ನು ಗಳಿಸಿದೆ. ಕರ್ನಾಟಕದ 28 ಕ್ಷೇತ್ರಗಳು ರಾಷ್ಟ್ರ ರಾಜಕಾರಣದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಅಂದ ಹಾಗೇ ಕರ್ನಾಟಕದಲ್ಲಿ ಒಟ್ಟು 2 ಹಂತದಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು ರಾಜ್ಯದಲ್ಲಿ ಒಟ್ಟು 5.42 ಕೋಟಿ ಮತದಾರರಿದ್ದಾರೆ. ಪುರುಷ ಮತದಾರರ ಸಂಖ್ಯೆ 2,71,21,407 ಇದ್ದರೆ ಮಹಿಳಾ ಮತದಾರರ ಸಂಖ್ಯೆ 2,70,81,748 ಇದೆ. 4,933 ತೃತೀಯ ಲಿಂಗಿಗಳು ಸೇರಿ ಒಟ್ಟು 5,42,08,088 ಮತದಾರರು ರಾಜ್ಯದಲ್ಲಿ ಇದ್ದಾರೆ. ಕರ್ನಾಟಕದ ಯಾವ ಕ್ಷೇತ್ರದಲ್ಲಿ ಎಷ್ಟು ಮತದಾರರು ಇದ್ದಾರೆ ಎನ್ನುವುದನ್ನು ನೋಡುವುದಾದರೆ ಅದರ ವಿವರ ಈ ಕೆಳಕಂಡತಿದೆ.