ಹಾಸನ : ಮೈಸೂರು ನಗರದ ಉದಯಗಿರಿ ಠಾಣೆಯ ಮೇಲೆ ಕಿಡಿಗೇಡಿಗಳಿಂದ ಕಲ್ಲುತೂರಾಟ ನಡೆಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ಹಲವಾರು ಸಮಸ್ಯೆಗಳಿವೆ ಅದನ್ನು ಬಿಟ್ಟು ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲುತೂರಾಟ ನಡೆಸಿದ ಪ್ರಕರಣಕ್ಕೆ ಹೆಚ್ಚಿನ ಪ್ರಚಾರ ಕೊಡುವ ಅಗತ್ಯ ಇಲ್ಲ ಎಂದು ತಿಳಿಸಿದರು.
ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ವಿಚಾರಕ್ಕೆ ಹೆಚ್ಚಿನ ಪ್ರಚಾರ ಕೊಡುವ ಅಗತ್ಯವಿಲ್ಲ. ರಾಜ್ಯದಲ್ಲಿ ಹಲವಾರು ಸಮಸ್ಯೆಗಳಿವೆ. ಗಲಭೆ ಆರಂಭವಾಗಿದ್ದು ಸಾಮಾಜಿಕ ಜಾಲತಾಣದ ಹರಿಬಿಡಲಗಿದ್ದ ಪೋಸ್ಟ್ ನಿಂದ ಈ ಒಂದು ಗಲಭೆ ನಡೆದಿದೆ ಎಂದು ತಿಳಿಸಿದರು.
ದೊಡ್ಡ ಮಟ್ಟದ ಕಲಹ ಉಂಟು ಮಾಡಿ ಅಶಾಂತಿ ನಿರ್ಮಿಸಲು ಯತ್ನಿಸಲಾಗಿದೆ. ಇದರ ಹಿನ್ನೆಲೆಯಲ್ಲಿ ರಾಜಕೀಯ ಶುರುವಾಗಿದೆ ರಾಜ್ಯ ಯಾವ ಸ್ಥಿತಿಯಲ್ಲಿ ಹೋಗುತ್ತಿದೆ ಅದಕ್ಕೆ ಗಮನಹರಿಸುವುದು ಸೂಕ್ತ ಎಂದು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿಕೆ ನೀಡಿದರು.