Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Rain Alert : ರಾಜ್ಯದ ಈ 18 ಜಿಲ್ಲೆಗಳಲ್ಲಿ ಮುಂದಿನ 3 ದಿನ ಗುಡುಗು ಸಹಿತ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

04/04/2026 8:11 AM

ಹೋರ್ಮುಜ್ ಜಲಸಂಧಿ ದಾಟಿದ ಭಾರತದ 7ನೇ ಎಲ್‌ಪಿಜಿ ನೌಕೆ ‘ಗ್ರೀನ್ ಸಾನ್ವಿ’; ಇನ್ನೂ 17 ಹಡಗುಗಳು ಬಾಕಿ!

04/04/2026 8:06 AM

ಮಣ್ಣಿನ ಘಮಲಿಗೆ ಮನಸೋಲದವರಿಲ್ಲ : ಮಳೆಯ ಸುಗಂಧದ ಹಿಂದೆ ಅಡಗಿದೆ ರೋಚಕ ವಿಜ್ಞಾನ! ಏನಿದು ‘ಪೆಟ್ರಿಕೋರ್’ ರಹಸ್ಯ?

04/04/2026 8:05 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮದುವೆ ಮಂಟಪದವರು ವಧು-ವರರ ವಯಸ್ಸಿನ ದಾಖಲೆ ಪರಿಶೀಲಿಸಬೇಕೆಂಬ ನಿಯಮಗಳಿಲ್ಲ : ಹೈಕೋರ್ಟ್
KARNATAKA

ಮದುವೆ ಮಂಟಪದವರು ವಧು-ವರರ ವಯಸ್ಸಿನ ದಾಖಲೆ ಪರಿಶೀಲಿಸಬೇಕೆಂಬ ನಿಯಮಗಳಿಲ್ಲ : ಹೈಕೋರ್ಟ್

By kannadanewsnow0518/02/2026 3:20 PM

ಬೆಂಗಳೂರು : ಮದುವೆ ಸಮಾರಂಭಕ್ಕೆ ಕಲ್ಯಾಣ ಮಂಟಪ ಬಾಡಿಗೆಗೆ ನೀಡುವ ಸಂದರ್ಭದಲ್ಲಿ ಮಂಟಪದ ಮಾಲೀಕರು ವಧು-ವರರ ವಯಸ್ಸಿನ ಕುರಿತ ದಾಖಲೆಗಳನ್ನು ಪರಿಶೀಲಿಸಬೇಕು ಎಂಬ ಕಠಿಣ ನಿಯಮಗಳಿಲ್ಲ ಎಂದು ಹೈ ಕೋರ್ಟ್ ಅಭಿಪ್ರಾಯಪಟ್ಟಿದೆ. ಅಪ್ರಾಪ್ತೆ ಹಾಗೂ ಗರ್ಭಿಣಿಯ ಮದುವೆಗಾಗಿ ಮಂಟಪವನ್ನು ಬಾಡಿಗೆಗೆ ನೀಡಿದ ಮಾಲೀಕರ ವಿರುದ್ಧ ದಾಖಲಾಗಿದ್ದ ಪ್ರಕರಣ ಮತ್ತು ಆ ಸಂಬಂಧ ವಿಚಾರಣಾ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಯನ್ನು ರದ್ದುಪಡಿಸಿ ಆದೇಶಿಸಿದೆ.

ಅಪ್ರಾಪ್ತೆಯ ಮದುವೆ ಮಾಡಿಕೊಡಲು ಮಂಟಪವನ್ನು ಬಾಡಿಗೆಗೆ ನೀಡುವ ಮೂಲಕ ಬಾಲ್ಯ ವಿವಾಹ ಮಾಡಿದ್ದ ಆರೋಪದಲ್ಲಿ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಕೋರಿ ಹುಸೈನ್‌ ಪ್ಯಾಲೇಸ್‌ನ ಮಾಲೀಕ ಅಬ್ದುಲ್‌ ಅಮೀದ್‌ ಎಂಬವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ರಾಜೇಶ್‌ ರೈ ಅವರಿದ್ದ ಕಲಬುರಗಿ ಹೈಕೋರ್ಟ್​​ ಪೀಠ ಈ ಆದೇಶ ನೀಡಿದೆ

ಪ್ರಕರಣದ ಹಿನ್ನೆಲೆ?

ಧಾರವಾಡ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 17 ವರ್ಷ 8 ತಿಂಗಳ ವಯಸ್ಸಿನ ಅಪ್ರಾಪ್ತೆಯೊಬ್ಬರು 2024ರ ಮೇ 27ರಂದು ಮಗುವಿಗೆ ಜನ್ಮ ನೀಡಿದ್ದರು. ಈ ಸಂಬಂಧ ಪರಿಶೀಲಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಗೋಲಗುಂಬಜ್‌ ಮಹಿಳಾ ಪೊಲೀಸ್‌ ಠಾಣೆಗೆ ದೂರು ನೀಡಿ, ತಪ್ಪಿತಸ್ಥರ ವಿರುದ್ಧ ಬಾಲ್ಯ ವಿವಾಹ ನಿಷೇಧ ಕಾಯಿದೆಯಡಿ ಕ್ರಮ ಕೈಗೊಳ್ಳುವಂತೆ ಕೋರಿದ್ದರು.

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು 6 ಮಂದಿಯನ್ನು ಆರೋಪಿಗಳನ್ನಾಗಿ ಅರ್ಜಿದಾರ ಮದುವೆ ನಡೆದ ಸಭಾಂಗಣದ ಮಾಲೀಕರನ್ನು ಆರನೇ ಆರೋಪಿಯನ್ನಾಗಿಸಿ ಆರೋಪ ಪಟ್ಟಿಯನ್ನು ಸಲ್ಲಿಸಿದ್ದರು. ಇದನ್ನು ಪರಿಗಣಿಸಿದ್ದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಕಾಗ್ನಿಜೆನ್ಸ್‌ ಪಡೆದುಕೊಂಡಿತ್ತು. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಸಂತ್ರಸ್ತೆ ಮತ್ತು ಆರೋಪಿಯ ಪೋಷಕರು ವಿವಾಹ ಕಾರ್ಯಕ್ರಮ ನಡೆಸುವುದಕ್ಕೆ ಹಾಲ್‌ ಕಾಯ್ದಿರಿಸಿದ್ದರು. ಆ ಸಂದರ್ಭದಲ್ಲಿ ಮಂಟಪದ ಮಾಲೀಕರು ವಧು-ವರರ ವಯಸ್ಸನ್ನು ಪರಿಶೀಲಿಸಬೇಕು ಎಂಬುದರ ಕುರಿತ ಕಠಿಣ ನಿಯಮವಿಲ್ಲ. ಆದ ಕಾರಣ ಆರೋಪಿ ಅಪ್ರಾಪ್ತೆಯೊಂದಿಗೆ ಮದುವೆಯಾಗಲು ಕಲ್ಯಾಣ ಮಂಟಪದ ಮಾಲೀಕರ ಗಮನಕ್ಕಿತ್ತು ಎಂದು ಹೇಳಲಾಗುವುದಿಲ್ಲ. ಅಲ್ಲದೆ, ಅರ್ಜಿದಾರರು ಸಭಾಂಗಣದ ಮಾಲೀಕರು ಮಾತ್ರ ಆಗಿದ್ದಾರೆ. ಆದ್ದರಿಂದ ಅರ್ಜಿದಾರರನ್ನು ಆರೋಪಿಯನ್ನಾಗಿಸಲಾಗದು. ಹೀಗಾಗಿ, ಅವರ ವಿರುದ್ಧದ ಆರೋಪ ಪಟ್ಟಿಯನ್ನು ರದ್ದು ಮಾಡಬೇಕು ಎಂದು ಕೋರಿದ್ದರು.

Share. Facebook Twitter LinkedIn WhatsApp Email

Related Posts

Rain Alert : ರಾಜ್ಯದ ಈ 18 ಜಿಲ್ಲೆಗಳಲ್ಲಿ ಮುಂದಿನ 3 ದಿನ ಗುಡುಗು ಸಹಿತ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

04/04/2026 8:11 AM1 Min Read

BIG NEWS : ವೀರಶೈವ ಜಂಗಮರು `SC’ ಪಟ್ಟಿಗೆ ಸೇರಲ್ಲ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು

04/04/2026 8:03 AM1 Min Read

BIG NEWS : ರಾಜ್ಯದಲ್ಲಿ ಏ.16ರಿಂದ `ಜನಗಣತಿ’ಗೆ 1 ಲಕ್ಷ ಶಾಲಾ ಶಿಕ್ಷಕರ ನಿಯೋಜನೆ.!

04/04/2026 7:49 AM1 Min Read
Recent News

Rain Alert : ರಾಜ್ಯದ ಈ 18 ಜಿಲ್ಲೆಗಳಲ್ಲಿ ಮುಂದಿನ 3 ದಿನ ಗುಡುಗು ಸಹಿತ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

04/04/2026 8:11 AM

ಹೋರ್ಮುಜ್ ಜಲಸಂಧಿ ದಾಟಿದ ಭಾರತದ 7ನೇ ಎಲ್‌ಪಿಜಿ ನೌಕೆ ‘ಗ್ರೀನ್ ಸಾನ್ವಿ’; ಇನ್ನೂ 17 ಹಡಗುಗಳು ಬಾಕಿ!

04/04/2026 8:06 AM

ಮಣ್ಣಿನ ಘಮಲಿಗೆ ಮನಸೋಲದವರಿಲ್ಲ : ಮಳೆಯ ಸುಗಂಧದ ಹಿಂದೆ ಅಡಗಿದೆ ರೋಚಕ ವಿಜ್ಞಾನ! ಏನಿದು ‘ಪೆಟ್ರಿಕೋರ್’ ರಹಸ್ಯ?

04/04/2026 8:05 AM

BIG NEWS : ವೀರಶೈವ ಜಂಗಮರು `SC’ ಪಟ್ಟಿಗೆ ಸೇರಲ್ಲ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು

04/04/2026 8:03 AM
State News
KARNATAKA

Rain Alert : ರಾಜ್ಯದ ಈ 18 ಜಿಲ್ಲೆಗಳಲ್ಲಿ ಮುಂದಿನ 3 ದಿನ ಗುಡುಗು ಸಹಿತ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

By kannadanewsnow5704/04/2026 8:11 AM KARNATAKA 1 Min Read

ಬೆಂಗಳೂರು: ರಾಜ್ಯದ ಜನತೆಗೆ ಹವಾಮಾನ ಇಲಾಖೆಯು ಮಳೆಯ ಮುನ್ಸೂಚನೆಯನ್ನು ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಒಟ್ಟು 18 ಜಿಲ್ಲೆಗಳಲ್ಲಿ ಏಪ್ರಿಲ್…

BIG NEWS : ವೀರಶೈವ ಜಂಗಮರು `SC’ ಪಟ್ಟಿಗೆ ಸೇರಲ್ಲ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು

04/04/2026 8:03 AM

BIG NEWS : ರಾಜ್ಯದಲ್ಲಿ ಏ.16ರಿಂದ `ಜನಗಣತಿ’ಗೆ 1 ಲಕ್ಷ ಶಾಲಾ ಶಿಕ್ಷಕರ ನಿಯೋಜನೆ.!

04/04/2026 7:49 AM

ಸಮಾಜದ ಸ್ವಾಸ್ಥ್ಯ ಕೆಡಿಸುವ ಯೂಟ್ಯೂಬ್ ಚಾನಲ್ ಗಳ ಮೇಲೆ ಸರ್ಕಾರದ ಹದ್ದಿನ ಕಣ್ಣು: ಸಿಎಂ ಕಠಿಣ ಕ್ರಮದ ಎಚ್ಚರಿಕೆ

04/04/2026 7:27 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.