ಬೆಂಗಳೂರು : ರಾಜ್ಯದಲ್ಲಿ ಕಳೆದ ಐದಾರು ವರ್ಷಗಳ ಅಂಕಿ-ಅಂಶಗಳನ್ನು ಹೋಲಿಸಿದರೆ ಹೃದಯಾಘಾತದಿಂದ ಮರಣ ಹೊಂದಿದವರ ಪ್ರಮಾಣ ಗಣನೀಯ ಸಂಖ್ಯೆಯಲ್ಲಿ ಹೆಚ್ಚಾಗಿಲ್ಲ. ಶೇ. 5ರಿಂದ 6 ರಷ್ಟು ಇದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು.
ಕಾಂಗ್ರೆಸ್ಸಿನ ದಿನೇಶ್ ಗೂಳಿಗೌಡ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದ ವಿವಿಧ ಕಡೆಗಳಲ್ಲಿ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಡಿ ಉಪಘಟಕಗಳ ಶಾಖೆಗಳನ್ನು ತೆರೆಯಲಾಗಿದೆ. ಹುಬ್ಬಳ್ಳಿಆಸ್ಪತ್ರೆ ಕಾಮಗಾರಿ ಶೇ.80 ರಷ್ಟು ಮುಗಿದಿದ್ದು, ಇನ್ನೆಂಟು ತಿಂಗಳಲ್ಲಿ ಪ್ರಾರಂಭಿಸಲು ಉದ್ದೇಶಿಸಲಾಗಿದೆ.
ಕೊಪ್ಪಳ, ಬಳ್ಳಾರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಲು ಉದ್ದೇಶಿಸಿದ್ದು, ಬಳ್ಳಾರಿಯಲ್ಲಿ ಮೂರು ತಿಂಗಳಲ್ಲಿ ಉದ್ಘಾಟನೆಯಾಗಲಿದೆ, 5 ವರ್ಷಗಳಲ್ಲಿ ಪ್ರತಿ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಕ್ಯಾನರ್‌ಚಿಕಿತ್ಸಾ ಆಸ್ಪತ್ರೆ ಸ್ಥಾಪಿಸುವ ಉದ್ದೇಶ ಹೊಂದಲಾಗಿದೆ ಎಂದರು.
ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಏರಿಕೆಯಾಗಿಲ್ಲ.
ಜನರು ಭಯಭೀತರಾಗುವ ಅಗತ್ಯವಿಲ್ಲ.
– @S_PrakashPatil , ವೈದ್ಯಕೀಯ ಶಿಕ್ಷಣ ಸಚಿವರು pic.twitter.com/gJyq8HGGg3
— DIPR Karnataka (@KarnatakaVarthe) August 18, 2025