ಬೆಂಗಳೂರು : ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಶತಸಿದ್ದ ಎಂದು ಸಚಿವ ಬಿ.ಸಿ ಪಾಟೀಲ್ ಹೇಳಿದ್ದಾರೆ.
ಹಾವೇರಿ ಜಿಲ್ಲೆಯ ಬ್ಯಾಡಗಿ ಪಟ್ಟಣದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಸಚಿವ ಬಿ.ಸಿ ಪಾಟೀಲ್ ‘ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಶತಸಿದ್ದ, ನಾವು ಬಾರಿ 140 ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಧಾನಿ ಮೋದಿಯವರ ಕಿಸಾನ್ ಸಮ್ಮಾನ್ ಯೋಜನೆಯಿಂದ ರೈತರಿಗೆ ಅನುಕೂಲವಾಗಲಿದೆ. ಅತಿವೃಷ್ಟಿಯಾದಾಗ ಬೆಳಗಳಿಗೆ ಪರಿಹಾರ ನೀಡುತ್ತೇವೆ . ಈ ಮೂಲಕ ರೈತರಿಗೆ ಹಲವು ಯೋಜನೆ ಜಾರಿಗೆ ತಂದಿದ್ದೇವೆ, ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಶತಸಿದ್ದ ಎಂದು ಸಚಿವ ಬಿ.ಸಿ ಪಾಟೀಲ್ ಹೇಳಿದ್ದಾರೆ.