Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಆನ್‌ಲೈನ್ ವಂಚನೆಗೆ ಬ್ರೇಕ್: ಡಿಜಿಟಲ್ ಪಾವತಿ ಸುರಕ್ಷತೆಗೆ ಆರ್‌ಬಿಐನಿಂದ 6 ಮಾಸ್ಟರ್ ಪ್ಲಾನ್!

11/04/2026 7:31 AM

ಬೆಂಗಳೂರಿಗರೇ ಗಮನಿಸಿ : ಪೀಣ್ಯ ಫ್ಲೈಓವರ್‌ನಲ್ಲಿ ಲೋಡ್ ಟೆಸ್ಟಿಂಗ್, ಹಿನ್ನಲೆ, ಇಂದಿನಿಂದ 5 ದಿನ ವಾಹನ ಸಂಚಾರ ಬಂದ್!

11/04/2026 7:31 AM

ಭಾರತೀಯರ ಔದಾರ್ಯಕ್ಕೆ ಇರಾನ್ ಸಲಾಂ: ದೇಣಿಗೆ ಸಂಗ್ರಹ ಖಾತೆಗಳನ್ನು ಸ್ಥಗಿತಗೊಳಿಸಿದ ರಾಯಭಾರ ಕಚೇರಿ!

11/04/2026 7:28 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮುಖ್ಯಮಂತ್ರಿಗಳ ಬಗ್ಗೆ ಆಡಳಿತ ಪಕ್ಷವಾದ ಕಾಂಗ್ರೆಸ್ಸಿನ ಶಾಸಕರಿಗೇ ವಿಶ್ವಾಸ ಇಲ್ಲವಾಗಿದೆ: ಬಿವೈ ವಿಜಯೇಂದ್ರ
KARNATAKA

ಮುಖ್ಯಮಂತ್ರಿಗಳ ಬಗ್ಗೆ ಆಡಳಿತ ಪಕ್ಷವಾದ ಕಾಂಗ್ರೆಸ್ಸಿನ ಶಾಸಕರಿಗೇ ವಿಶ್ವಾಸ ಇಲ್ಲವಾಗಿದೆ: ಬಿವೈ ವಿಜಯೇಂದ್ರ

By kannadanewsnow0907/07/2025 3:56 PM

ಶಿವಮೊಗ್ಗ: ಮುಖ್ಯಮಂತ್ರಿಗಳ ಬಗ್ಗೆ ಆಡಳಿತ ಪಕ್ಷವಾದ ಕಾಂಗ್ರೆಸ್ಸಿನ ಶಾಸಕರಿಗೇ ವಿಶ್ವಾಸ ಇಲ್ಲವಾಗಿದೆ; ರಾಜ್ಯದ ಜನರಿಗೂ ವಿಶ್ವಾಸ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.

ಇಂದು ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ರಾಜಕೀಯ ವಿದ್ಯಮಾನಗಳು ಯಾವ ರೀತಿ ಆಗಲಿದೆ. ಸ್ಥಾನಪಲ್ಲಟ ಯಾವ ರೀತಿ ಆಗಲಿದೆ ಎಂಬುದನ್ನು ನಾವು ಕಾದು ನೋಡುತ್ತೇವೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು. ಸ್ಥಾನಪಲ್ಲಟ ಆದರೆ ನಮಗೇನೂ ವ್ಯತ್ಯಾಸ ಆಗುವುದಿಲ್ಲ; ರಾಜ್ಯದ ಜನರಿಗೂ ವ್ಯತ್ಯಾಸ ಆಗುವುದಿಲ್ಲ; 15 ಬಜೆಟ್ ಮಂಡಿಸಿದ ಅನುಭವಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತದಲ್ಲಿ ಹಣಕಾಸು ವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಯಾರೇ ಮುಖ್ಯಮಂತ್ರಿ ಆದರೂ ರಾಜ್ಯವು ಅಭಿವೃದ್ಧಿ ಕಾಣಲು ಸಾಧ್ಯವಾಗದು ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.

ರಾಜ್ಯದಲ್ಲಿ ರಾಜಕೀಯ ಅನಿಶ್ಚಿತತೆ ಕಾಡುತ್ತಿದೆ. ಸುರ್ಜೇವಾಲಾ ಅವರು ಪದೇಪದೇ ಬೆಂಗಳೂರಿಗೆ ಬರುತ್ತಿದ್ದಾರೆ. ಶಾಸಕರ ಅಭಿಪ್ರಾಯ ಪಡೆದುಕೊಳ್ಳುತ್ತಿದ್ದಾರೆ. ಇವತ್ತು ಮತ್ತೆ ಬಂದಿದ್ದಾರೆ. 3 ದಿನಗಳ ಕಾಲ ಇರುತ್ತಾರೆ. ಡಿ.ಕೆ.ಶಿವಕುಮಾರ್ ಜೊತೆ 100 ಶಾಸಕರಿದ್ದಾರೆ. ಅವರಿಗೂ ಅವಕಾಶ ಕೊಡಬೇಕೆಂಬ ನಾನಾ ಹೇಳಿಕೆ ಬರುತ್ತಿದೆ. ಬಿ.ಆರ್.ಪಾಟೀಲರ ಹೇಳಿಕೆ, ರಾಜು ಕಾಗೆಯವರ ಹೇಳಿಕೆಗಳನ್ನು ಗಮನಿಸಿದರೆ ಆಡಳಿತ ಪಕ್ಷದಲ್ಲಿ ಶಾಸಕರು ಮುಖ್ಯಮಂತ್ರಿಗಳ ಮೇಲಿನ ವಿಶ್ವಾಸವನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದಾರೆ ಎಂಬುದು ಸ್ಪಷ್ಟ ಎಂದು ವಿಶ್ಲೇಷಿಸಿದರು.

ಸುರ್ಜೇವಾಲಾ ಭೇಟಿ ಹಿಂದೆ ನಿಗದಿತ ಕಾರ್ಯಸೂಚಿ..

ಸಿದ್ದರಾಮಯ್ಯನವರು ಮುಂದುವರೆಯುತ್ತಾರಾ? ಅವರ ಸ್ಥಾನಕ್ಕೆ ಬರುವವರು ಯಾರು? ಎಂಬುದು ಮುಖ್ಯವಲ್ಲ; ಆದರೆ, ಒಂದಂತೂ ಸತ್ಯ. ಸುರ್ಜೇವಾಲಾ ಅವರು ಸುಮ್ಮನೆ ಬರುತ್ತಿಲ್ಲ; ಒಂದು ನಿಗದಿತ ಕಾರ್ಯಸೂಚಿ ಇಟ್ಟುಕೊಂಡೇ ಕರ್ನಾಟಕಕ್ಕೆ ಪದೇಪದೇ ಬರುತ್ತಿದ್ದಾರೆ. ಅದು ಮುಖ್ಯಮಂತ್ರಿಗಳು ಮಾತ್ರವಲ್ಲದೇ ಆಡಳಿತ ಪಕ್ಷದ ಎಲ್ಲರಿಗೂ ಗೊತ್ತಿದೆ ಎಂದು ವಿಜಯೇಂದ್ರ ಅವರು ನುಡಿದರು.

ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸರಿಯಾಗಿ ಇರಬಾರದು; ಎರಡು ಧರ್ಮಗಳ ನಡುವೆ ಸಂಘರ್ಷ ನಡೆಯುತ್ತಿರಬೇಕೆಂಬ ದುರುದ್ದೇಶದಿಂದ ಅಹಿತಕರ ಘಟನೆಗಳು ನಡೆಯುತ್ತಿವೆ. ರಾಜ್ಯ ಸರಕಾರವು ಇದನ್ನು ಗಂಭೀರವಾಗಿ ತೆಗೆದುಕೊಳ್ಳದೆ ಇರುವುದು ದುರಂತ ಎಂದು ಅವರು ಶಿವಮೊಗ್ಗದಲ್ಲಿ ವಿಗ್ರಹಗಳಿಗೆ ಅವಮಾನ ಕುರಿತ ಪ್ರಶ್ನೆಗೆ ಉತ್ತರಿಸಿದರು.

ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ನಡೆದಿದೆ. ಮೈಸೂರಿನಲ್ಲಿ ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರನ್ನೇ ಬೆದರಿಸಿದ ಷಡ್ಯಂತ್ರ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಪದೇಪದೇ ಇಂಥ ಅಹಿತಕರ ಘಟನೆ ನಡೆಯುತ್ತಿದೆ. ಟಿಪ್ಪು ಜಯಂತಿ ಸಂದರ್ಭದಲ್ಲಿ ಸಮಸ್ಯೆ ಆಗಿದೆ. ಗಣೇಶ ಹಬ್ಬದ ಸಂದರ್ಭದಲ್ಲೂ ಸಮಸ್ಯೆಗಳು ಆಗುತ್ತಿವೆ. ಇದು ವ್ಯವಸ್ಥಿತ ಷಡ್ಯಂತ್ರ ಎಂದು ಆರೋಪಿಸಿದರು. ಈ ಷಡ್ಯಂತ್ರದ ವಿರುದ್ಧ ರಾಜ್ಯ ಸರಕಾರವು ಯಾವುದೇ ಕ್ರಮ ಕೈಗೊಳ್ಳದ ಕಾರಣ ಇಂಥ ದೇಶದ್ರೋಹಿಗಳಿಗೂ ಧೈರ್ಯ ಬರುತ್ತಿದೆ ಎಂದು ತಿಳಿಸಿದರು.

ಯಾರೇನೇ ಮಾಡಿದರೂ ರಾಜ್ಯ ಸರಕಾರ ನಮ್ಮನ್ನು ಬೆಂಬಲಿಸುತ್ತದೆ; ನಮ್ಮನ್ಯಾರೂ ಅಲ್ಲಾಡಿಸಲು ಆಗುವುದಿಲ್ಲ; ಯಾವುದೇ ಶಿಕ್ಷೆ ಕೊಡಲಾಗದು ಎಂಬಂತಿದೆ. ರಾಜ್ಯದಲ್ಲಿ ಬೇಲಿಯೇ ಎದ್ದು ಹೊಲ ಮೇಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ದುಷ್ಕøತ್ಯಗಳು ನಡೆಯುತ್ತಿವೆ. ಬಿಜೆಪಿ ಇದನ್ನು ಬಲವಾಗಿ ಖಂಡಿಸುತ್ತದೆ. ರಾಜ್ಯದ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ಗಮನಿಸಬೇಕು ಎಂದು ಒತ್ತಾಯಿಸಿದರು.

ಹಾಸನ- ಸರಕಾರದ ಬೇಜವಾಬ್ದಾರಿ

ಹಾಸನ ಜಿಲ್ಲೆಯಲ್ಲಿ ಸರಣಿ ಸಾವುಗಳು ಸಂಭವಿಸುತ್ತಿವೆ. ಯುವಜನರು ಪ್ರಾಣ ಕಳಕೊಳ್ಳುತ್ತಿದ್ದಾರೆ. ಅಲ್ಲಿನ ಉಸ್ತುವಾರಿ ಸಚಿವರು ಕಳೆದ 3 ತಿಂಗಳುಗಳಿಂದ ಭೇಟಿ ಕೊಟ್ಟಿಲ್ಲ; ಇದು ಅವರ ಬೇಜವಾಬ್ದಾರಿಯನ್ನು ತೋರಿಸುತ್ತದೆ ಎಂದು ವಿಜಯೇಂದ್ರ ಅವರು ಆಕ್ಷೇಪಿಸಿದರು.

ರಾಜ್ಯ ಸರಕಾರ ಎಷ್ಟು ಬೇಜವಾಬ್ದಾರಿಯಿಂದ ವರ್ತಿಸುತ್ತದೆ ಎಂಬುದಕ್ಕೆ ಇದಕ್ಕಿಂತ ಬೇರೆ ಪುರಾವೆ ಬೇಡ ಎಂದು ಗಮನ ಸೆಳೆದರು.

ರಾಜ್ಯದ ಆಡಳಿತ ಸಂಪೂರ್ಣ ಕುಸಿದು ಬಿದ್ದಿದೆ. ಆರ್ಥಿಕ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ ಎಂಬುದಕ್ಕೆ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು ರಸ್ತೆಗಳು, ಅಭಿವೃದ್ಧಿ ಕೆಲಸ ಆಗಬೇಕೆಂದಿದ್ದರೆ ಗ್ಯಾರಂಟಿಗಳನ್ನು ನಾವು ನಿಲ್ಲಿಸುತ್ತೇವೆ ಎಂದಿರುವುದೇ ಸ್ಪಷ್ಟ ಪುರಾವೆ ಎಂದು ತಿಳಿಸಿದರು.

ಬಿಜೆಪಿಯವರು ಆರ್ಥಿಕ ಪರಿಸ್ಥಿತಿ ಕುರಿತು ಹೇಳಿದರೆ, ಸರಕಾರಿ ನೌಕರರಿಗೆ ಸಂಬಳ ಕೊಡಲಾಗದ ಸ್ಥಿತಿ ಇದೆ ಎಂದು ಹೇಳಿದರೆ ಎಲ್ಲವೂ ಸರಿ ಇದೆ ಎಂದು ಸಿದ್ದರಾಮಯ್ಯನವರು ಹೇಳುತ್ತಾರೆ. ಅವರದೇ ಆರ್ಥಿಕ ಸಲಹೆಗಾರರು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದರೆ ಇದು ರಾಯರೆಡ್ಡಿ ಅವರ ಹೇಳಿಕೆ ಅಲ್ಲ; ಸ್ವತಃ ಮುಖ್ಯಮಂತ್ರಿಗಳೇ ಗ್ಯಾರಂಟಿ ಅನುಷ್ಠಾನಕ್ಕೆ ಹಣ ಕ್ರೋಡೀಕರಿಸಲು ಸಾಧ್ಯವಾಗದೇ ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ ಎಂಬುದನ್ನು ಹಾಗೂ ಅಭಿವೃದ್ಧಿಗೆ ಹಣ ಕೊಡಲು ಸಾಧ್ಯವಿಲ್ಲ ಎಂಬುದನ್ನು ಅವರ ಮೂಲಕ ಹೇಳಿಸಿದ್ದಾರೆ ಎಂದು ತಿಳಿಸಿದರು.

ರಾಜ್ಯ ಸರಕಾರದ ಬಗ್ಗೆ ಜನರು ಬೇಸತ್ತಿದ್ದಾರೆ. ನಾಡಿನ ಜನರು ಭ್ರಷ್ಟ, ಜನವಿರೋಧಿ, ರೈತವಿರೋಧಿ ಸರಕಾರಕ್ಕೆ ಮತ ಕೊಟ್ಟು ಅಧಿಕಾರಕ್ಕೆ ತಂದಿರುವುದಕ್ಕೆ ಪಶ್ಚಾತ್ತಾಪ ಪಡುತ್ತಿದ್ದಾರೆ ಎಂದು ಹೇಳಿದರು.

BREAKING: ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ: ಕೋರ್ಟ್ ಆವರಣದಲ್ಲೇ ವಕೀಲನ ಮೇಲೆ ಮಾರಣಾಂತಿಕ ಹಲ್ಲೆ

BREAKING: ಐಸಿಸಿ ನೂತನ CEO ಆಗಿ ಸಂಜೋಗ್ ಗುಪ್ತಾ ನೇಮಕ

Share. Facebook Twitter LinkedIn WhatsApp Email

Related Posts

ಬೆಂಗಳೂರಿಗರೇ ಗಮನಿಸಿ : ಪೀಣ್ಯ ಫ್ಲೈಓವರ್‌ನಲ್ಲಿ ಲೋಡ್ ಟೆಸ್ಟಿಂಗ್, ಹಿನ್ನಲೆ, ಇಂದಿನಿಂದ 5 ದಿನ ವಾಹನ ಸಂಚಾರ ಬಂದ್!

11/04/2026 7:31 AM1 Min Read

BREAKING : ಹಾಸನದಲ್ಲಿ ಲಾರಿಗೆ ಹಿಂಬದಿಯಿಂದ ‘KSRTC’ ಬಸ್ ಡಿಕ್ಕಿ : ಪ್ರಯಾಣಿಕರಿಗೆ ಗಂಭೀರ ಗಾಯ!

11/04/2026 7:28 AM1 Min Read

ಅಪಘಾತ ಪರಿಹಾರ ಕಡಿತ ಸಲ್ಲದು: ಕೆಎಸ್‌ಆರ್‌ಟಿಸಿ ಪ್ರಯಾಣಿಕರ ಹಿತ ಕಾಯ್ದ ಹೈಕೋರ್ಟ್

11/04/2026 7:27 AM1 Min Read
Recent News

ಆನ್‌ಲೈನ್ ವಂಚನೆಗೆ ಬ್ರೇಕ್: ಡಿಜಿಟಲ್ ಪಾವತಿ ಸುರಕ್ಷತೆಗೆ ಆರ್‌ಬಿಐನಿಂದ 6 ಮಾಸ್ಟರ್ ಪ್ಲಾನ್!

11/04/2026 7:31 AM

ಬೆಂಗಳೂರಿಗರೇ ಗಮನಿಸಿ : ಪೀಣ್ಯ ಫ್ಲೈಓವರ್‌ನಲ್ಲಿ ಲೋಡ್ ಟೆಸ್ಟಿಂಗ್, ಹಿನ್ನಲೆ, ಇಂದಿನಿಂದ 5 ದಿನ ವಾಹನ ಸಂಚಾರ ಬಂದ್!

11/04/2026 7:31 AM

ಭಾರತೀಯರ ಔದಾರ್ಯಕ್ಕೆ ಇರಾನ್ ಸಲಾಂ: ದೇಣಿಗೆ ಸಂಗ್ರಹ ಖಾತೆಗಳನ್ನು ಸ್ಥಗಿತಗೊಳಿಸಿದ ರಾಯಭಾರ ಕಚೇರಿ!

11/04/2026 7:28 AM

BREAKING : ಹಾಸನದಲ್ಲಿ ಲಾರಿಗೆ ಹಿಂಬದಿಯಿಂದ ‘KSRTC’ ಬಸ್ ಡಿಕ್ಕಿ : ಪ್ರಯಾಣಿಕರಿಗೆ ಗಂಭೀರ ಗಾಯ!

11/04/2026 7:28 AM
State News
KARNATAKA

ಬೆಂಗಳೂರಿಗರೇ ಗಮನಿಸಿ : ಪೀಣ್ಯ ಫ್ಲೈಓವರ್‌ನಲ್ಲಿ ಲೋಡ್ ಟೆಸ್ಟಿಂಗ್, ಹಿನ್ನಲೆ, ಇಂದಿನಿಂದ 5 ದಿನ ವಾಹನ ಸಂಚಾರ ಬಂದ್!

By kannadanewsnow0511/04/2026 7:31 AM KARNATAKA 1 Min Read

ಬೆಂಗಳೂರು : ಪೀಣ್ಯ ಎಲಿವೇಟೆಡ್ ಫ್ಲೈಓವರ್ ಮೇಲೆ ಲೋಡ್ ಟೆಸ್ಟಿಂಗ್ ನಡೆಯಲಿರುವ ಹಿನ್ನೆಲೆಯಲ್ಲಿ ಏ.13ರಿಂದ ಏ.17ರವರೆಗೆ ಫ್ಲೈಓವರ್ ಮೇಲೆ ಎಲ್ಲಾ…

BREAKING : ಹಾಸನದಲ್ಲಿ ಲಾರಿಗೆ ಹಿಂಬದಿಯಿಂದ ‘KSRTC’ ಬಸ್ ಡಿಕ್ಕಿ : ಪ್ರಯಾಣಿಕರಿಗೆ ಗಂಭೀರ ಗಾಯ!

11/04/2026 7:28 AM

ಅಪಘಾತ ಪರಿಹಾರ ಕಡಿತ ಸಲ್ಲದು: ಕೆಎಸ್‌ಆರ್‌ಟಿಸಿ ಪ್ರಯಾಣಿಕರ ಹಿತ ಕಾಯ್ದ ಹೈಕೋರ್ಟ್

11/04/2026 7:27 AM

BREAKING : ಧಾರವಾಡದಲ್ಲಿ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹತ್ಯೆ : 15 ದಿನದಲ್ಲಿ ಹಸೆಮಣೆ ಏರಬೇಕಿದ್ದವ ಮಸಣಕ್ಕೆ!

11/04/2026 7:23 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.