ಬೆಳಗಾವಿ : ಮಾಜಿ ಸಚಿವ ಆರ್ ವಿ ದೇಶಪಾಂಡೆ ಜನ್ಮ ದಿನಾಂಕದ ಬಗ್ಗೆ ಅನುಮಾನವಿದೆ, ಇದರ ತನಿಖೆ ನಡೆಸಲು ಸದನ ಸಮಿತಿ ರಚನೆ ಮಾಡಬೇಕು ಎಂದು ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಹಾಸ್ಯ ಚಟಾಕಿ ಹಾರಿಸಿದ್ದಾರೆ.
ಹೌದು, ಸಿದ್ದರಾಮಯ್ಯ ಮಾಡಿದ ಗಂಭೀರ ಆರೋಪವೇನು ಅಲ್ಲ, ಸುಮ್ಮನೆ ಸದನದಲ್ಲಿ ದೇಶಪಾಂಡೆ ಹುಟ್ಟಿದ ದಿನಾಂಕದ ಬಗ್ಗೆ ಹಾಸ್ಯ ಚಟಾಕಿ ಹಾರಿಸಿದ್ದಾರೆ ಅಷ್ಟೇ..
2022 ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು, ಹಳಿಯಾಳ ಕ್ಷೇತ್ರದ ಶಾಸಕ ಆರ್.ವಿ. ದೇಶಪಾಂಡೆಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಲಾಗಿದೆ. ಪ್ರಶಸ್ತಿ ಪ್ರದಾನದ ನಂತರ ಸಿದ್ದರಾಮಯ್ಯ ಮಾತನಾಡುತ್ತಿದ್ದ ವೇಳೆ ಮಧ್ಯ ಪ್ರವೇಶಿಸಿದ ಕಾಂಗ್ರೆಸ್ ಕೃಷ್ಣಭೈರೇಗೌಡ ‘ಆರ್ ವಿ ದೇಶಪಾಂಡೆ ಬರ್ತ್ ಸರ್ಟಿಫಿಕೇಟ್ ಬಗ್ಗೆ ಅನುಮಾನವಿದೆ’ ಎಂದಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ‘ಮಾಜಿ ಸಚಿವ ಆರ್ ವಿ ದೇಶಪಾಂಡೆ ಜನ್ಮ ದಿನಾಂಕದ ಬಗ್ಗೆ ಅನುಮಾನವಿದೆ, ಇದರ ತನಿಖೆ ನಡೆಸಲು ಸದನ ಸಮಿತಿ ರಚನೆ ಮಾಡಬೇಕು ‘ಎಂದು ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಹಾಸ್ಯ ಚಟಾಕಿ ಹಾರಿಸಿದ್ದಾರೆ.
2022 ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು, ಹಳಿಯಾಳ ಕ್ಷೇತ್ರದ ಶಾಸಕ ಆರ್.ವಿ. ದೇಶಪಾಂಡೆಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಲಾಗಿದೆ.ಬೆಳಗಾವಿ ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಹಿರಿಯ ಶಾಸಕ ಆರ್. ವಿ. ದೇಶಪಾಂಡೆ ಅವರಿಗೆ 2022ರ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಇಂದು ವಿಧಾನಸಭೆಯಲ್ಲಿ ಆರ್.ವಿ. ದೇಶಪಾಂಡೆಗೆ 2022 ನೇ ಸಾಲಿನ ಅತ್ಯುತ್ತಮ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಕ್ಷೇತ್ರದ ಶಾಸಕರಾಗಿರುವ ಆರ್.ವಿ. ದೇಶಪಾಂಡೆಗೆ 2022 ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಕಳೆದ ವರ್ಷದಿಂದ ಆರಂಭಗೊಂಡಿದ್ದು, ಮೊದಲ ಪ್ರಶಸ್ತಿಯನ್ನು ಶಿಕಾರಿಪುರ ಶಾಸಕ ಬಿ.ಎಸ್. ಯಡಿಯೂರಪ್ಪಗೆ ನೀಡಲಾಗಿತ್ತು.
BREAKING NEWS : ತುಮಕೂರಿನಲ್ಲಿ ಪೂರ್ವಭಾವಿ ಸಭೆಯಲ್ಲಿ ಕುಸಿದು ಬಿದ್ದು ‘ಕೈ’ ಕಾರ್ಯಕರ್ತ ಸಾವು
Weather Update : ಮುಂದಿನ ಎರಡು ದಿನ ಈ ರಾಜ್ಯಗಳಲ್ಲಿ ಶೀತ ವಾತಾವರಣ ಹೆಚ್ಚಾಗಲಿದೆ : ಹವಾಮಾನ ಇಲಾಖೆ