ನವದೆಹಲಿ: ಕರ್ನಾಟಕದಲ್ಲಿ ರಸಗೊಬ್ಬರ ಕೊರತೆ ಇದೆ. ಯೂರಿಯಾ ಸರಬರಾಜು ಇಲ್ಲ ಎಂಬುದು ರೈತರ ಆಕ್ರೋಶಕ್ಕೆ ಕಾರಣವಾಗಿತ್ತು. ಆದರೇ ಕರ್ನಾಟಕದಲ್ಲಿ ರೈತರಿಗೆ ಬೇಕಿರುವಷ್ಟು ರಸಗೊಬ್ಬರ ದಾಸ್ತಾನು ಇದೆ. ಯಾವುದೇ ಸಮಸ್ಯೆ ಇಲ್ಲ ಎಂಬುದಾಗಿ ಲೋಕಸಭೆಯಲ್ಲೇ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ಉತ್ತರ ನೀಡಿದ್ದಾರೆ.
ಇಂದು ಲೋಕಸಭೆಯಲ್ಲಿ ಕರ್ನಾಟಕದಲ್ಲಿ ರಸಗೊಬ್ಬರ ಸಮಸ್ಯೆ ವಿಚಾರವಾಗಿ ಪ್ರಶ್ನೋತ್ತರ ಕಲಾಪದಲ್ಲಿ ಸಂಸದರಾದಂತ ಗೋವಿಂದ ಕಾರಜೋಳ, ಡಾ.ಪ್ರಭಾ ಮಲ್ಲಿಕಾರ್ಜುನ್ ಪ್ರಸ್ತಾಪಿಸಿದರು. ಈ ವೇಳೆ ಉತ್ತರಿಸಿದಂತ ಸಚಿವೆ ಅನುಪ್ರಿಯಾ ಪಟೇಲ್ ಅವರು, ಕರ್ನಾಟಕದಲ್ಲಿ ರೈತರಿಗೆ ಬೇಕಿರುವಷ್ಟು ರಸಗೊಬ್ಬರ ದಾಸ್ತಾನಿದೆ. ಕಳಪೆ ರಸಗೊಬ್ಬರ ವಿತರಣೆ ಸಂಬಂಧ ಐದು ಎಫ್ಐಆರ್ ದಾಖಲಾಗಿದೆ ಎಂದರು.
ನಕಲಿ ರಸಗೊಬ್ಬರ ಮಾರಾಟ ವಿಚಾರ ಕೇಂದ್ರ ಸರ್ಕಾರದ ಗಮನಕ್ಕೆ ಬಂದಿದೆ. ರೈತರಿಗೆ ನಕಲಿ ರಸಗೊಬ್ಬರ ಮಾರಾಟ ಸಂಬಂಧ ಐದು ಕೇಸ್ ದಾಖಲಾಗಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಎರಡು, ಹಾವೇರಿ ಜಿಲ್ಲೆಯಲ್ಲಿ ಎರಡು ಕೇಸ್ ದಾಖಲಾಗಿದೆ. ಮಳೆ ಆರಂಭಕ್ಕೂ ಮುನ್ನ ರಸಗೊಬ್ಬರ ಹಂಚಿಕೆ ಮಾಡುತ್ತದೆ. ಕರ್ನಾಟಕದಲ್ಲಿ ರಸಗೊಬ್ಬರ ದಾಸ್ತಾನು ಇದೆ ಎಂಬುದಾಗಿ ಮಾಹಿತಿ ನೀಡಿದರು.
ಯಾರದ್ದೋ ಮಾತು ಕೇಳಿ ಕುಟುಂಬದ ವಿರುದ್ಧ ಮಾತನಾಡಬೇಡಿ: ಫ್ಯಾನ್ಸ್‌ಗೆ ‘ನಟ ಅನಿರುದ್ಧ್’ ಮನವಿ
ಬೆಂಗಳೂರಲ್ಲಿ ಮರದ ಕೊಂಬೆ ಮುರಿದು ವೃದ್ಧನ ಸೊಂಟದ ಮೂಳೆ ಮುರಿತ : ‘BBMP’ ಸಿಬ್ಬಂದಿ ವಿರುದ್ಧ ‘FIR’ ದಾಖಲು