Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : “LPG ಉತ್ಪಾದನೆ 5 ದಿನಗಳಲ್ಲಿ ಶೇ. 28ರಷ್ಟು ಹೆಚ್ಚಾಗಿದೆ, ಪೆಟ್ರೋಲ್, ಡೀಸೆಲ್ ಕೊರತೆಯೂ ಇಲ್ಲ” : ಹರ್ದೀಪ್ ಸಿಂಗ್ ಪುರಿ

12/03/2026 5:00 PM

ಗೃಹಬಳಕೆ ಅಡುಗೆ ಅನಿಲದ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಮಂಡ್ಯ ಡಿಸಿ ಡಾ.ಕುಮಾರ ಸ್ಪಷ್ಟನೆ

12/03/2026 4:56 PM

BREAKING : “ಭಾರತದಲ್ಲಿ ಇಂಧನ ಕೊರತೆ ಇಲ್ಲ, ತೈಲ ಸರಬರಾಜು ಸುರಕ್ಷಿತವಾಗಿದೆ” : ಸಂಸತ್ತಿನಲ್ಲಿ ಹರ್ದೀಪ್ ಸಿಂಗ್ ಪುರಿ

12/03/2026 4:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗೃಹಬಳಕೆ ಅಡುಗೆ ಅನಿಲದ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಮಂಡ್ಯ ಡಿಸಿ ಡಾ.ಕುಮಾರ ಸ್ಪಷ್ಟನೆ
KARNATAKA

ಗೃಹಬಳಕೆ ಅಡುಗೆ ಅನಿಲದ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಮಂಡ್ಯ ಡಿಸಿ ಡಾ.ಕುಮಾರ ಸ್ಪಷ್ಟನೆ

By kannadanewsnow0912/03/2026 4:56 PM

ಮಂಡ್ಯ : ಮಧ್ಯ ಪ್ರಾಚ್ಯ ಪ್ರದೇಶಗಳಲ್ಲಿ ಯುದ್ಧ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾಗಿರುವ ಬಿಕ್ಕಟಿನಿಂದ ಗೃಹಬಳಕೆಯ ಅಡುಗೆ ಅನಿಲದ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂಬ ಆತಂಕ ಇರುವ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತೈಲ ಸರಬರಾಜು ಕಂಪನಿಗಳಾದ ಎಚ್ ಪಿ.ಸಿ.ಎಲ್, ಬಿ.ಪಿ.ಸಿ.ಎಲ್, ಐ.ಓ.ಸಿ.ಎಲ್ ದೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಗೃಹಬಳಕೆಯ ಸಿಲಿಂಡರ್ ಸರಬರಾಜಿನಲ್ಲಿ ಪ್ರಸ್ತುತ ಯಾವುದೇ ಕೊರತೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಗೃಹಬಳಕೆಗಾಗಿ ಪ್ರತಿನಿತ್ಯ 12000 ಸಾವಿರ ಸಿಲಿಂಡರ್ ಗಳ ಅಗತ್ಯವಿದ್ದು ಹಾಗೂ ಮಾಸಿಕ 3 ಲಕ್ಷಕ್ಕೂ ಅಧಿಕ ಸಿಲಿಂಡರ್ ಗಳ ಅಗತ್ಯವಿದೆ. ಇದರಂತೆ ಪ್ರತಿನಿತ್ಯ ಅಗತ್ಯವಿರುವ ಸಿಲಿಂಡರ್ಗಳ ಪೂರೈಕೆಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಹೇಳಿದರು.

ಸಾರ್ವಜನಿಕರು ಗೃಹಬಳಕೆ ಅನಿಲದ ಕೊರತೆ ಉಂಟಾಗುತ್ತದೆ ಎಂದು ಭಾವಿಸಿ ಮುಂಗಡವಾಗಿ ಅನಿಲ ಬುಕ್ಕಿಂಗ್ ಮಾಡಲಾಗುತ್ತಿದೆ. ಸಾರ್ವಜನಿಕರು ಆತಂಕ ಪಡೆದೆ ಮುಂಗಡವಾಗಿ ಸಿಲಿಂಡರ್ ಬುಕ್ಕಿಂಗ್ ಮಾಡುವ ಅವಶ್ಯಕತೆ ಇಲ್ಲ. ಜಿಲ್ಲೆಯಲ್ಲಿ ಸದ್ಯಕ್ಕೆ ಅಡುಗೆ ಅನಿಲದ ಪೂರೈಕೆಯಲ್ಲಿ ಯಾವುದೇ ದಕ್ಕೆ ಇರುವುದಿಲ್ಲ ಎಂದು ಖಚಿತಪಡಿಸಿದರು.

ಜಿಲ್ಲೆಯಲ್ಲಿ ಅಡುಗೆ ಅನಿಲವನ್ನು ಅಕ್ರಮವಾಗಿ ಸಂಗ್ರಹಿಸುವುದು ಅಥವಾ ಕಾಳಸಂತೆಯಲ್ಲಿ ಮಾರಾಟ ಮಾಡುವುದು ಕಂಡುಬಂದರೆ ಅಂಥವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955 ರಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ವಾಣಿಜ್ಯ ಅಡುಗೆ ಅನಿಲ ಬಳಕೆಗೆ ಸಂಬಂಧಿಸಿದಂತೆ ಅಂದರೆ ಹೋಟೆಲ್, ರೆಸ್ಟೋರೆಂಟ್, ಕೈಗಾರಿಕೆಗಳ ಗಳಕೆ ಸಧ್ಯಕ್ಕೆ ಅಡುಗೆ ಅನಿಲದ ಪೂರೈಕೆಯನ್ನು ಸ್ಥಗಿತಗೊಳಿಸಲಾಗಿರುತ್ತದೆ. ಆದರೆ ಗೃಹಬಳಕೆ ಅಡುಗೆ ಅನಿಲದ ಪೂರೈಕೆಗೆ ಸಂಬಂಧಿಸಿದಂತೆ ಯಾವುದೇ ವ್ಯತ್ಯಯ ಇರುವುದಿಲ್ಲ ಎಂದು ಹೇಳಿದರು.

ಆಸ್ಪತ್ರೆಗಳು, ಶಾಲೆಗಳು, ವಸತಿ ಶಾಲೆಗಳು, ವಿದ್ಯಾರ್ಥಿ ನಿಲಯಗಳು ಮತ್ತು ಅಂಗನವಾಡಿಗಳು ಸೇರಿದಂತೆ ಮುಂತಾದ ಅಗತ್ಯ ಸೇವಾ ಸಂಸ್ಥೆಗಳಿಗೆ ಅಡುಗೆ ಅನಿಲದ ಕೊರತೆ ಉಂಟಾಗದಂತೆ ನೋಡಿಕೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು .

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಧಿಕಾರಿ ಕೆ.ಆರ್ ನಂದಿನಿ ಅವರು ಮಾತನಾಡಿ ಮಾರ್ಚ್ ಏಪ್ರಿಲ್ ಮಾಹೆಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗದಂತೆ ಹಾಸ್ಟೆಲ್ ಹಾಗೂ ವಸತಿ ನಿಲಯಗಳು ಶಾಲೆಗಳಿಗೆ ಅಡುಗೆ ಅನಿಲವನ್ನು ಪೂರೈಕೆ ಮಾಡಿ ಎಂದು ಹೇಳಿದರು ‌.

ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಪ್ರತೀಕ್ ಹೆಗ್ಡೆ, ಮಿಮ್ಸ್ ನಿರ್ದೇಶಕ ನರಸಿಂಹ ಸ್ವಾಮಿ, ಸಮಾಜಕಲ್ಯಾಣ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ್ , ತೈಲ ಸರಬರಾಜು ಕಂಪನಿಗಳ ಪ್ರತಿನಿಧಿಗಳು ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ಲೆಕ್ಕ ಕೇಳೋ ಹಕ್ಕಿರೋದು ಜನತೆಗೆ, ಮಂಡ್ಯ ಸಂಸದರಲ್ಲ: ಸಚಿವ ಚಲುವರಾಯಸ್ವಾಮಿ ತಿರುಗೇಟು

Share. Facebook Twitter LinkedIn WhatsApp Email

Related Posts

ಲೆಕ್ಕ ಕೇಳೋ ಹಕ್ಕಿರೋದು ಜನತೆಗೆ, ಮಂಡ್ಯ ಸಂಸದರಲ್ಲ: ಸಚಿವ ಚಲುವರಾಯಸ್ವಾಮಿ ತಿರುಗೇಟು

12/03/2026 4:53 PM3 Mins Read

BIG NEWS: ರಾಜ್ಯದಲ್ಲಿ 50 ವರ್ಷಗಳ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ ಬದಲಾವಣೆ ನಿರ್ಧಾರ: ಡಿ.ಕೆ ಶಿವಕುಮಾರ್ ಘೋಷಣೆ

12/03/2026 4:46 PM2 Mins Read

ರಾಜ್ಯದ ವಿವಿಧ ಇಲಾಖೆಗಳಲ್ಲಿ 56,432 ಹುದ್ದೆಗಳ ಭರ್ತಿಗೆ ಸರ್ಕಾರ ನಿರ್ಧಾರ

12/03/2026 4:38 PM1 Min Read
Recent News

BREAKING : “LPG ಉತ್ಪಾದನೆ 5 ದಿನಗಳಲ್ಲಿ ಶೇ. 28ರಷ್ಟು ಹೆಚ್ಚಾಗಿದೆ, ಪೆಟ್ರೋಲ್, ಡೀಸೆಲ್ ಕೊರತೆಯೂ ಇಲ್ಲ” : ಹರ್ದೀಪ್ ಸಿಂಗ್ ಪುರಿ

12/03/2026 5:00 PM

ಗೃಹಬಳಕೆ ಅಡುಗೆ ಅನಿಲದ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಮಂಡ್ಯ ಡಿಸಿ ಡಾ.ಕುಮಾರ ಸ್ಪಷ್ಟನೆ

12/03/2026 4:56 PM

BREAKING : “ಭಾರತದಲ್ಲಿ ಇಂಧನ ಕೊರತೆ ಇಲ್ಲ, ತೈಲ ಸರಬರಾಜು ಸುರಕ್ಷಿತವಾಗಿದೆ” : ಸಂಸತ್ತಿನಲ್ಲಿ ಹರ್ದೀಪ್ ಸಿಂಗ್ ಪುರಿ

12/03/2026 4:55 PM

ಲೆಕ್ಕ ಕೇಳೋ ಹಕ್ಕಿರೋದು ಜನತೆಗೆ, ಮಂಡ್ಯ ಸಂಸದರಲ್ಲ: ಸಚಿವ ಚಲುವರಾಯಸ್ವಾಮಿ ತಿರುಗೇಟು

12/03/2026 4:53 PM
State News
KARNATAKA

ಗೃಹಬಳಕೆ ಅಡುಗೆ ಅನಿಲದ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಮಂಡ್ಯ ಡಿಸಿ ಡಾ.ಕುಮಾರ ಸ್ಪಷ್ಟನೆ

By kannadanewsnow0912/03/2026 4:56 PM KARNATAKA 2 Mins Read

ಮಂಡ್ಯ : ಮಧ್ಯ ಪ್ರಾಚ್ಯ ಪ್ರದೇಶಗಳಲ್ಲಿ ಯುದ್ಧ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾಗಿರುವ ಬಿಕ್ಕಟಿನಿಂದ ಗೃಹಬಳಕೆಯ ಅಡುಗೆ ಅನಿಲದ ಸರಬರಾಜಿನಲ್ಲಿ ವ್ಯತ್ಯಯ…

ಲೆಕ್ಕ ಕೇಳೋ ಹಕ್ಕಿರೋದು ಜನತೆಗೆ, ಮಂಡ್ಯ ಸಂಸದರಲ್ಲ: ಸಚಿವ ಚಲುವರಾಯಸ್ವಾಮಿ ತಿರುಗೇಟು

12/03/2026 4:53 PM

BIG NEWS: ರಾಜ್ಯದಲ್ಲಿ 50 ವರ್ಷಗಳ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ ಬದಲಾವಣೆ ನಿರ್ಧಾರ: ಡಿ.ಕೆ ಶಿವಕುಮಾರ್ ಘೋಷಣೆ

12/03/2026 4:46 PM

ರಾಜ್ಯದ ವಿವಿಧ ಇಲಾಖೆಗಳಲ್ಲಿ 56,432 ಹುದ್ದೆಗಳ ಭರ್ತಿಗೆ ಸರ್ಕಾರ ನಿರ್ಧಾರ

12/03/2026 4:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.