ಬೆಂಗಳೂರು : ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ರೀತಿಯ ಮ್ಯಾಚ್ ಫಿಕ್ಸಿಂಗ್ ಆಗಿಲ್ಲ , ನಡೆಯುವುದು ಇಲ್ಲ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಡಿಕೆಶಿ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ರೀತಿಯ ಮ್ಯಾಚ್ ಫಿಕ್ಸಿಂಗ್ ಆಗಿಲ್ಲ , ಈ ಬಾರಿ ಚುನಾವಣೆಯಲ್ಲಿ ಶೇ.95 ಮಂದಿ ಹಾಲಿ ಶಾಸಕರಿಗೆ ಟಿಕೆಟ್ ಸಿಗೋದು ಖಚಿತ ಎಂದು ಡಿಕೆಶಿ ಹೇಳಿದರು.
ನನ್ನ ಅಧ್ಯಕ್ಷತೆಯಲ್ಲಿ ಮ್ಯಾಚ್ ಫಿಕ್ಸಿಂಗ್ ಗೆ ಎಲ್ಲಾ ಅವಕಾಶ ನೀಡಲ್ಲ. ಈಗಾಗಲೇ ಪಕ್ಷದ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿ ಬಹುತೇಕ ಸಿದ್ಧಗೊಂಡಿದೆ, ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂಬ ಸುಳಿವು ನೀಡಿದರು. ಈ ಬಾರಿ ಚುನಾವಣೆಯಲ್ಲಿ ಶೇ.95 ಮಂದಿ ಹಾಲಿ ಶಾಸಕರಿಗೆ ಟಿಕೆಟ್ ಸಿಗುತ್ತದೆ, ಈ ಬಗ್ಗೆ ಯಾವುದೇ ಅನುಮಾನವಿಲ್ಲ ಎಂದು ಡಿಕೆಶಿ ಹೇಳಿದರು.
ಮೀಸಲಾತಿ ಮತ್ತು ಕಳಸಾ ಬಂಡೂರಿ ಯೋಜನೆ ಕುರಿತು ಬಿಜೆಪಿ ಸುಳ್ಳು ಹೇಳುತ್ತಿದೆ, ಸಿಎಂ ಸ್ಥಾನ ಹೈಕಮಾಂಡ್ ವರ ಪ್ರಸಾದ್ ಎನ್ನುವ ಮೂಲಕ ಎಲ್ಲವನ್ನೂ ಹೈಕಮಾಂಡ್ ನಾಯಕರಿಗೆ ಬಿಟ್ಟಿದ್ದಾರೆ ಎಂದು ಕಿಡಿಕಾರಿದರು.
ಪುದೀನಾ ನೀರಿನ ಆರೋಗ್ಯ ಪ್ರಯೋಜನಗಳೇನು ಗೊತ್ತಾ? ಈ ವಿಧಾನಗಳನ್ನು ಅನುಸರಿಸಿ | Peppermint water
BIGG NEWS : ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ ವಿಚಾರ: ಜ.12 ಕ್ಕೆ ಹೈಕೋರ್ಟ್ ನಲ್ಲಿ ವಿಚಾರಣೆ