ಬೆಂಗಳೂರು : ನಾಯಿಯಷ್ಟು ನಿಯತ್ತಿನ ಪ್ರಾಣಿ ಮತ್ತೊಂದು ಇಲ್ಲ ಎಂದು ಸಚಿವ ವಿ.ಸೋಮಣ್ಣ ಕಿಡಿಕಾರಿದ್ದಾರೆ.
ವಿಧಾನಸೌಧದಲ್ಲಿ ವಸತಿ ಸಚಿವ ವಿ. ಸೋಮಣ್ಣ ಮಾತನಾಡಿದ್ದು, ಸಿಎಂ ಬೊಮ್ಮಾಯಿಯನ್ನು ನಾಯಿಗೆ ಹೋಲಿಸಿರುವ ಸಿದ್ದರಾಮಯ್ಯ ನಡೆಗೆ ಸಚಿವ ವಿ.ಸೋಮಣ್ಣ ತಿರುಗೇಟು ನೀಡಿದ್ದಾರೆ. ನಾಯಿಯಷ್ಟು ನಿಯತ್ತಿನ ಪ್ರಾಣಿ ಮತ್ತೊಂದು ಇಲ್ಲ, ಮನುಷ್ಯರಿಗೆ ಕೂಡ ಅಷ್ಟು ನಿಯತ್ತಿರುವುದಿಲ್ಲ ಎಂದು ಸಚಿವ ಸೋಮಣ್ಣ ಕಿಡಿಕಾರಿದ್ದಾರೆ.
ಬೊಮ್ಮಾಯಿ ಬಿಜೆಪಿಗೆ ಮಾತ್ರ ಅಲ್ಲ ಇಡೀ ರಾಜ್ಯಕ್ಕೆ ಸಿಎಂ, ಬೊಮ್ಮಾಯಿ ರಾಜ್ಯದ ಆರೂವರೆ ಕೋಟಿ ಜನರ ಮುಖ್ಯಮಂತ್ರಿ, ಸಿಎಂ ಬಗ್ಗೆ ಇಂತಹ ನೀಡುವುದು ಸರಿಯಲ್ಲ, ಸಿದ್ದರಾಮಯ್ಯ ತಮ್ಮ ಭಾಷೆಯನ್ನು ಕಂಟ್ರೋಲ್ ಮಾಡಲಿ, 2023 ಕ್ಕೆ ಮತ್ತೆ ಬೊಮ್ಮಾಯಿ ಸಿಎಂ ಆಗಲಿದ್ದಾರೆ , ಈ ಹಿಂದೆ ಸಿಎಂ ಆಗಿದ್ದ ಸಿದ್ದರಾಮಯ್ಯ ಇನ್ನೊಬ್ಬ ಸಿಎಂ ಬಗ್ಗೆ ಹೀಗೆ ಮಾತನಾಡುವುದು ಎಷ್ಟು ಸರಿ ಎಂದು ಕಿಡಿಕಾರಿದ್ದಾರೆ.
BIG NEWS: ಈ ತಿಂಗಳ ಅಂತ್ಯಕ್ಕೆ 150 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ – ಸಿದ್ಧರಾಮಯ್ಯ ಘೋಷಣೆ | 2023 Election
BIGG NEWS : ದೆಹಲಿಯ ಇಂಡಿಯಾ ಗೇಟ್ನಲ್ಲಿ ಬೀದಿಬದಿ ವ್ಯಾಪಾರಿಗಳ ನಡುವೆ ಗಲಾಟೆ : 5 ಭದ್ರತಾ ಸಿಬ್ಬಂದಿಗಳಿಗೆ ಗಾಯ