ಬೆಂಗಳೂರು: ಈ ಜನವಿರೋಧಿ ಕಾಂಗ್ರೆಸ್ ಸರ್ಕಾರ ತೊಲಗುವವರೆಗೂ ಕನ್ನಡಿಗರಿಗೆ ನೆಮ್ಮದಿ ಇಲ್ಲ, ಕರ್ನಾಟಕ್ಕೆ ಉಳಿಗಾಲವಿಲ್ಲ. ಆಸ್ತಿ ನೋಂದಣಿ ಶುಲ್ಕವನ್ನು ಏಕಾಏಕಿ ಶೇ.100 ರಷ್ಟು ಏರಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ತನ್ನ ಜನವಿರೋಧಿ ನೀತಿಯನ್ನು ನಿರ್ಲಜ್ಜವಾಗಿ ಪ್ರದರ್ಶಿಸಿದೆ ಎಂಬುದಾಗಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಆಡು ಮುಟ್ಟದ ಸೊಪ್ಪಿಲ್ಲ. ಕಾಂಗ್ರೆಸ್ ಸರ್ಕಾರ ಜನರ ಜೇಬಿಗೆ ಕನ್ನ ಹಾಕದ ದಿನವಿಲ್ಲ. ನೀರು, ಹಾಲು, ಪೆಟ್ರೋಲ್, ಡಿಸೇಲ್, ಕರೆಂಟು, ಬಸ್ಸು, ಮೆಟ್ರೋ, ಆಸ್ತಿ ತೆರಿಗೆ, ಜನನ ಮರಣ ಪ್ರಮಾಣ ಪತ್ರದ ಶುಲ್ಕ ಸೇರಿ ಎಲ್ಲಾ ವಸ್ತು/ಸೇವೆಗಳ ಬೆಲೆಯನ್ನು ಈಗಾಗಲೇ ಮನಬಂದಂತೆ ಏರಿಸಿರುವ ಕಾಂಗ್ರೆಸ್ ಸರ್ಕಾರದ ವಕ್ರ ದೃಷ್ಟಿ ಈಗ ಆಸ್ತಿ ನೋಂದಣಿ ಶುಲ್ಕದ ಮೇಲೆ ಬಿದ್ದಿದೆ ಎಂದಿದ್ದಾರೆ.
ಆಸ್ತಿ ನೋಂದಣಿ ಶುಲ್ಕವನ್ನು ಏಕಾಏಕಿ ಶೇ.100 ರಷ್ಟು ಏರಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ತನ್ನ ಜನವಿರೋಧಿ ನೀತಿಯನ್ನು ನಿರ್ಲಜ್ಜವಾಗಿ ಪ್ರದರ್ಶಿಸಿದೆ ಎಂದು ವಾಗ್ಧಾಳಿ ನಡೆಸಿದ್ದಾರೆ.
ಸಿಎಂ ಸಿದ್ಧರಾಮಯ್ಯನವರೇ, ಬೆಲೆಯೇರಿಕೆಯೇ ನಿಮ್ಮ ಅಸಲಿ ಗ್ಯಾರೆಂಟಿ ಆಗಿದೆಯಾ? ಜೀವನವೆಲ್ಲ ಕಷ್ಟಪಟ್ಟು ಸಾಲ ಸೋಲ ಮಾಡಿ ಕುಟುಂಬಕ್ಕೆ ಒಂದು ಸ್ವಂತ ಗೂಡು ಮಾಡಿಕೊಳ್ಳಲು ಚಿಕ್ಕ ನಿವೇಶವವನ್ನೋ, ಫ್ಲಾಟ್ ಅನ್ನೋ ಖರೀದಿ ಮಾಡಲು ಹೊರಟರೆ ಅದಕ್ಕೆ 7.6% ನೋಂದಣಿ ಮತ್ತು ಮುದ್ರಾಂಕ ಶುಲ್ಕ ಭರಿಸಬೇಕು ಅಂದರೆ ಬಡವರು, ಮಧ್ಯಮ ವರ್ಗದ ಜನ ಸ್ವಂತ ಸೂರು ಮಾಡಿಕೊಳ್ಳುವಾದರೂ ಹೇಗೆ? ಎಂದು ಪ್ರಶ್ನಿಸಿದ್ದಾರೆ.
ಈ ಜನವಿರೋಧಿ ಕಾಂಗ್ರೆಸ್ ಸರ್ಕಾರ ತೊಲಗುವವರೆಗೂ ಕನ್ನಡಿಗರಿಗೆ ನೆಮ್ಮದಿ ಇಲ್ಲ, ಕರ್ನಾಟಕ್ಕೆ ಉಳಿಗಾಲವಿಲ್ಲ ಎಂದು ಗುಡುಗಿದ್ದಾರೆ.
ಆಡು ಮುಟ್ಟದ ಸೊಪ್ಪಿಲ್ಲ – @INCKarnataka ಸರ್ಕಾರ ಜನರ ಜೇಬಿಗೆ ಕನ್ನ ಹಾಕದ ದಿನವಿಲ್ಲ.
ನೀರು, ಹಾಲು, ಪೆಟ್ರೋಲ್, ಡಿಸೇಲ್, ಕರೆಂಟು, ಬಸ್ಸು, ಮೆಟ್ರೋ, ಆಸ್ತಿ ತೆರಿಗೆ, ಜನನ ಮರಣ ಪ್ರಮಾಣ ಪತ್ರದ ಶುಲ್ಕ ಸೇರಿ ಎಲ್ಲಾ ವಸ್ತು/ಸೇವೆಗಳ ಬೆಲೆಯನ್ನು ಈಗಾಗಲೇ ಮನಬಂದಂತೆ ಏರಿಸಿರುವ @INCKarnataka ಸರ್ಕಾರದ ವಕ್ರ ದೃಷ್ಟಿ ಈಗ ಆಸ್ತಿ ನೋಂದಣಿ… pic.twitter.com/3I1M1AKHcJ
— R. Ashoka (@RAshokaBJP) August 30, 2025