ನವದೆಹಲಿ : ಅಮೆರಿಕಾದ ವಾಷಿಂಗ್ಟನ್ ಹಿಲ್ಟನ್ಸ್ ಹೋಟೆಲ್ ನಲ್ಲಿ ಡೊನಾಲ್ಡ್ ಟ್ರಂಪ್ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಅಪರಿಚಿತ ವ್ಯಕ್ತಿ ಒಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಅದೃಷ್ಟವಶಾತ್ ಡೊನಾಲ್ಡ್ ಟ್ರಂಪ್ ಪ್ರಾಣಪಾಯದಿಂದ ಪಾರಾಗಿದ್ದು ಸದ್ಯ ಭದ್ರತಾ ಸಿಬ್ಬಂದಿಗಳು ಗುಂಡಿನ ದಾಳಿ ನಡೆಸಿದ ವ್ಯಕ್ತಿಯನ್ನು ಅರೆಸ್ಟ್ ಮಾಡಿದ್ದಾರೆ.
ಇನ್ನು ಈ ವಿಚಾರವನ್ನು ಖಂಡಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ, ಪ್ರಥಮ ಮಹಿಳೆ ಮತ್ತು ಉಪಾಧ್ಯಕ್ಷರು ಸುರಕ್ಷಿತವಾಗಿದ್ದಾರೆ. ಯಾವುದೇ ಅನಾಹುತವಾಗಿಲ್ಲ ಎಂದು ತಿಳಿದು ನನಗೆ ಸಮಾಧಾನವಾಯಿತು. ಹಿಂಸಾಚಾರಕ್ಕೆ ಸ್ಥಾನವಿಲ್ಲ ಅದನ್ನು ನಿಸ್ಸಂದಿಗ್ಧವಾಗಿ ಖಂಡಿಸಬೇಕು ಎಂದು ಟ್ವೀಟ್ ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪೋಸ್ಟ್ ಹಂಚಿಕೊಂಡಿದ್ದಾರೆ.
ವಾಷಿಂಗ್ಟನ್ ಡಿಸಿ ಹೋಟೆಲ್‌ನಲ್ಲಿ ಇತ್ತೀಚೆಗೆ ನಡೆದ ಭದ್ರತಾ ಘಟನೆಯ ನಂತರ ಅಧ್ಯಕ್ಷ ಟ್ರಂಪ್, ಪ್ರಥಮ ಮಹಿಳೆ ಮತ್ತು ಉಪಾಧ್ಯಕ್ಷರು ಸುರಕ್ಷಿತವಾಗಿದ್ದಾರೆ ಮತ್ತು ಯಾವುದೇ ಹಾನಿಗೊಳಗಾಗಿಲ್ಲ ಎಂದು ತಿಳಿದು ಸಮಾಧಾನವಾಯಿತು. ಅವರ ನಿರಂತರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನಾನು ನನ್ನ ಶುಭಾಶಯಗಳನ್ನು ಕೋರುತ್ತೇನೆ. ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಸ್ಥಾನವಿಲ್ಲ ಮತ್ತು ಅದನ್ನು ನಿಸ್ಸಂದಿಗ್ಧವಾಗಿ ಖಂಡಿಸಬೇಕು.
Relieved to learn that President Trump, the First Lady and Vice President are safe and unharmed following the recent security incident at a Washington DC hotel. I extend my best wishes for their continued safety and well-being. Violence has no place in a democracy and must be…
— Narendra Modi (@narendramodi) April 26, 2026








