ನವದೆಹಲಿ : ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮಂಗಳವಾರ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ಪತ್ರ ಬರೆದ ಬೆನ್ನಲ್ಲೆ” ಭಾರತ್ ಜೋಡೊ ಯಾತ್ರೆ ಕೈ ಬಿಡುವ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್ ಸ್ಪಷ್ಟನೆ ನೀಡಿದೆ
ಕೋವಿಡ್ ಮುನ್ನೆಚ್ಚರಿಕೆ ವಹಿಸಕೊಂಡೇ ಭಾರತ್ ಜೋಡೊ ಯಾತ್ರೆ ಮಾಡುತ್ತಿದ್ದೇವೆ ಯಾವುದೇ ಕಾರಣಕ್ಕೂ ಭಾರತ್ ಜೋಡೊ ಯಾತ್ರೆ ಕೈ ಬಿಡುವ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್ ಸ್ಪಷ್ಟಿಕರಿಸಿದ್ದಾರೆ
ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಪತ್ರದಲ್ಲಿ ಏನಿದೆ?
ಚೀನಾ ಮತ್ತು ಪೂರ್ವ ಏಷ್ಯಾದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳದ ಬೆನ್ನಲ್ಲೆ ರಾಹುಲ್ ಗಾಂಧಿ ಮತ್ತು ಅಶೋಕ್ ಗೆಹ್ಲೋಟ್ ಅವರಿಗೆ ಬರೆದ ಪತ್ರದಲ್ಲಿ, ಮಾಂಡವಿಯಾ ಅವರು ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಮತ್ತು ಮಾಸ್ಕ್, ಸ್ಯಾನಿಟೈಸರ್ ಬಳಕೆಯನ್ನು ಜಾರಿಗೆ ತರಬೇಕು, ಭಾರತ್ ಜೋಡೋ ಯಾತ್ರೆಯಲ್ಲಿ ಲಸಿಕೆ ಪಡೆದ ಜನರು ಮಾತ್ರ ಭಾಗವಹಿಸಬೇಕು. ಕೋವಿಡ್ ನಿಯಮಗಳನ್ನ ಅನುಸರಿಸಿ ಅಥವಾ ಯಾತ್ರೆಯನ್ನ ಸ್ಥಗಿತಗೊಳಿಸಿ”
ಕೋವಿಡ್ ಶಿಷ್ಟಾಚಾರವನ್ನು ಅನುಸರಿಸಲು ಸಾಧ್ಯವಾಗದಿದ್ದರೆ, ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿಯನ್ನ ಗಮನದಲ್ಲಿಟ್ಟುಕೊಂಡು ರಾಷ್ಟ್ರೀಯ ಹಿತದೃಷ್ಟಿಯಿಂದ ಭಾರತ್ ಜೋಡೋ ಯಾತ್ರೆಯನ್ನ ಮುಂದೂಡಬೇಕೆಂದು ಕೇಂದ್ರ ಆರೋಗ್ಯ ಸಚಿವರು ಪತ್ರದಲ್ಲಿ ವಿನಂತಿಸಿಕೊಂಡಿದ್ದಾರೆ
Union Health Minister Mansukh Mandaviya y'day wrote to Congress MP Rahul Gandhi & Rajasthan CM Ashok Gehlot.
Letter reads that COVID guidelines be strictly followed during Bharat Jodo Yatra & use of masks-sanitiser be implemented; mentions that only vaccinated people participate pic.twitter.com/cRIyZz0DLY
— ANI (@ANI) December 21, 2022