ನಾಗ್ಪುರ : ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.
BIGG NEWS : ದೇಶದ ಮೊದಲ ‘ಬೃಹತ್ ಡ್ರೋನ್’ ಪ್ರದರ್ಶನ ; ಅಮರ ವೀರರ ವೀರೋಚಿತ ಕಥೆ ಅನಾವರಣ |Drone Show
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಮಹಾಮೇಳಾವ್ ಗೆ ಅವಕಾಶ ಕೊಡದಿರುವುದು ಸರಿಯಲ್ಲ. ಗಡಿ ಭಾಗದ ಮರಾಠಿ ಭಾಷಿಕರ ಜೊತೆಗೆ ಮಹಾರಾಷ್ಟ್ರ ಸರ್ಕಾರವಿದೆ. ಮರಾಠಿ ಭಾಷಿಕರಿಗೆ ಅನ್ಯಾಯವಾಗದಂತೆ ಮಹಾರಾಷ್ಟ್ರ ಸರ್ಕಾರ ನೋಡಿಕೊಳ್ಳುತ್ತದೆ ಎಂದು ತಿಳಿಸಿದ್ದಾರೆ.
ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಸಿಎಂ ಶಿಂಧೆ ಈಗಾಗಲೇ 2 ಸಾವಿರ ಕೋಟಿ ರೂ. ಘೋಷಿಸಿದ್ದಾರೆ. ಗಡಿ ಭಾಗದ ನೀರಾವರಿ ಯೋಜನೆಗೆ 2 ಸಾವಿರ ರೂ. ಘೋಷಣೆ ಮಾಡಲಾಗಿದೆ ಎಂದು ಹೇಳಿದ್ದಾರೆ.
BREAKING NEWS : ಬೆಂಗಳೂರಿನಲ್ಲಿ ಘೋರ ದುರಂತ : ಒಂದೇ ಕುಟುಂಬದ ಮೂವರು ಆತ್ಮಹತ್ಯೆ