ಶಿವಮೊಗ್ಗ: ನಾನು ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಇದನ್ನು ಬಿಜೆಪಿ ವರಿಷ್ಠರಿಗೆ ತಿಳಿಸಿದ್ದೇನೆ. ನನ್ನ ಸ್ಪರ್ಧೆ ಏನಿದ್ದರೂ ಪಕ್ಷದ ಉಳಿಸೋದಕ್ಕಾಗಿ ಆಗಿದೆ. ಹಿಂದುತ್ವ, ಕುಟುಂಬ ರಾಜಕಾರಣ ದೂರವಾಗಿಸೋ ನಿರ್ಧಾರವಾಗಿದೆ ಎಂಬುದಾಗಿ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಸ್ಪಷ್ಟ ಪಡಿಸಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಇಂದು ಬೆಳಿಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ಅಗರ್ವಾಲ್, ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ರಾಜೇಶ್ ಮನೆಗೆ ಬಂದಿದ್ದರು. ನನ್ನ ಬಂಡಾಯ ಸ್ಪರ್ಧೆಯ ಬಗ್ಗೆ ಚರ್ಚೆ ನಡೆಸಿದರು. ಜೊತೆಗೆ ನನ್ನ ಪುತ್ರ ಕಾಂತೇಶ್ ನನ್ನು ಎಂಎಲ್ಸಿ ಮಾಡುವುದಾಗಿ ತಿಳಿಸಿದರು ಎಂದರು.
ನಾನು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರೋದು ಮಗನನ್ನು ಎಂಎಲ್ಎ, ಎಂಪಿಯಾಗಿಸೋದಕ್ಕೆ ಅಲ್ಲ. ಬದಲಾಗಿ ಪಕ್ಷ ಶುದ್ದೀಕರಣವಾಗಬೇಕು. ರಾಜ್ಯದ ಕಾರ್ಯಕರ್ತರ ನೋವು ಕಡಿಮೆಯಾಗಬೇಕು. ಹಿಂದುತ್ವವಾದಿಗಳನ್ನು ತುಳಿಯುತ್ತಿದ್ದಾರೆ. ಅದು ಸರಿಯಾಗಬೇಕು. ಮೋದಿ ಆಶಯದಂತೆ ಕರ್ನಾಟಕದಲ್ಲಿ ಬಿಜೆಪಿಯಲ್ಲಿ ಬದಲಾವಣೆ ಆಗಬೇಕು ಎಂದು ಗುಡುಗಿದರು.
ನಾಳೆ ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಬರುತ್ತಿದ್ದಾರೆ. ನನ್ನನ್ನು ಆ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ಆದ್ರೇ ನಾನು ಬರುವುದಿಲ್ಲ. ಚುನಾವಣೆಯಲ್ಲಿ ಗೆದ್ದು ಮೋದಿಗೆ ಬೆಂಬಲಿಸುವುದಾಗಿ ತಿಳಿಸಿದ್ದೇನೆ ಅಂತ ಇದೇ ಸಂದರ್ಭದಲ್ಲಿ ತಿಳಿಸಿದರು.
‘ವೋಟರ್ ಲೀಸ್ಟ್’ನಲ್ಲಿ ನಿಮ್ಮ ಹೆಸರು ತೆಗೆದು ಹಾಕಲಾಗಿದೆಯೇ? ಜಸ್ಟ್ ಹೀಗೆ ಮಾಡಿ, ಮತ್ತೆ ಸೇರಿಸಿ
‘ಚುನಾವಣಾ ಬಾಂಡ್’ ಅಂಕಿಅಂಶ ಬಹಿರಂಗ: ಯಾವ ಪಕ್ಷ? ಎಷ್ಟು ‘ದೇಣಿ’ಗೆ ಸ್ವೀಕಾರ? ಇಲ್ಲಿದೆ ಮಾಹಿತಿ | Electoral bonds