ನವದೆಹಲಿ: ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಸಂಸತ್ತಿನಲ್ಲಿ ಯಾವುದೇ ಪದವನ್ನು ಬಳಸದಂತೆ ನಿರ್ಬಂಧಿಸಲಾಗಿಲ್ಲ ಎಂದು ಅವರು ಹೇಳಿದ್ದರೆ. ಅವರು ಸಂಸತ್ತಿನ ಮಾನ್ಸೂನ್ ಅಧಿವೇಶನಕ್ಕೂ ಮುನ್ನ ಭಾನುವಾರ ನಡೆದ ಸರ್ವಪಕ್ಷಗಳ ಸಭೆಯ ನಂತರ ಮಾತನಾಡಿದ ಜೋಶಿ, “ಲೋಕಸಭೆಯು 1954 ರಿಂದ ಅಸಂಸದೀಯ ಪದಗಳ ಪಟ್ಟಿಯನ್ನು ಹೊರತರುತ್ತಿದೆ ಅಂತ ತಿಳಿಸಿದರು.
ಸಂಸತ್ತಿನ ನಿಯಮಗಳು ಮತ್ತು ಕಾರ್ಯವಿಧಾನಗಳ ಅಡಿಯಲ್ಲಿ ಎಲ್ಲಾ ವಿಷಯಗಳನ್ನು ಚರ್ಚಿಸಲು ಸರ್ಕಾರ ಮುಕ್ತವಾಗಿದೆ ಎಂದು ಅವರು ಇದೇ ವೇಳೆ ಹೇಳಿದರು. ಅವರು ಪ್ರತಿಪಕ್ಷಗಳು ಸಮಸ್ಯೆಗಳಲ್ಲದ ವಿಷಯಗಳಿಂದ ವಿವಾದಗಳನ್ನು ಸೃಷ್ಟಿಸುತ್ತಿದ್ದಾರೆ ಮತ್ತು ಸಂಸತ್ತಿನ ವರ್ಚಸ್ಸನ್ನು ಕೀಳಾಗಿ ಕಾಣಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಟೀಕಿಸಿದರು.
ಸರ್ಕಾರವು “ಉತ್ತಮ ಕೆಲಸ ಮಾಡುತ್ತಿದೆ” ಎಂದು ಹೇಳಿದ ಜೋಶಿ, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಕೇವಲ ಭಾರತದೊಳಗಿನ ಜನರು ಮಾತ್ರವಲ್ಲ, ವಿದೇಶದ ಜನರು ಸಹ ಗುರುತಿಸುತ್ತಾರೆ ಎಂದು ಹೇಳಿದರು.