ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಬಗ್ಗೆ ಭಯ ಪಡಬೇಕಾದಂತ ಪರಿಸ್ಥಿತಿ ಇಲ್ಲ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಮೂಲಕ ಕೋವಿಡ್ ಆತಂಕದಲ್ಲಿದ್ದಂತ ಜನರಿಗೆ ನೆಮ್ಮದಿಯ ಸುದ್ದಿ ನೀಡಿದ್ದಾರೆ.
ಬೇರೆ ದೇಶಗಳಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ಆದರೆ ನಮ್ಮಲ್ಲಿ ಅಂತಹ ಯಾವುದೇ ಲಕ್ಷಣಗಳು ಪತ್ತೆಯಾಗಿಲ್ಲ. ಹೀಗಾಗಿ ಅನಗತ್ಯವಾಗಿ ಆತಂಕಪಡುವುದು ಬೇಡ. ಕೋವಿಡ್‌ಗೆ ಸಂಬಂಧಿಸಿದಂತೆ ಕೆಂದ್ರ ಸರ್ಕಾರದ ಜತೆಗೆ ಸಂಪರ್ಕದಲ್ಲಿದ್ದೇವೆ ಎಂದು ಹೇಳಿದ್ದಾರೆ.
ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು ಕೂಡ ಚರ್ಚೆ ಮಾಡುತ್ತಿದ್ದಾರೆ. ಈ ಋತುವಿನಲ್ಲಿ ಜ್ವರ ಸಂಬಂಧಿ ಅನಾರೋಗ್ಯ ಸಮಸ್ಯೆಗಳು ಸಹಜವಾಗಿ ಕಾಣಿಸಿಕೊಳ್ಳುತ್ತವೆ. ಇಂತಹ ಸಂದರ್ಭದಲ್ಲಿ ಮಾಸ್ಕ್ ಧರಿಸುವಿಕೆಯಂತಹ ಮುನ್ನೆಚ್ಚರಿಕೆ ವಹಿಸುವುದು ಉತ್ತಮ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.
ಬೇರೆ ದೇಶಗಳಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ಆದರೆ ನಮ್ಮಲ್ಲಿ ಅಂತಹ ಯಾವುದೇ ಲಕ್ಷಣಗಳು ಪತ್ತೆಯಾಗಿಲ್ಲ. ಹೀಗಾಗಿ ಅನಗತ್ಯವಾಗಿ ಆತಂಕಪಡುವುದು ಬೇಡ. ಕೋವಿಡ್‌ಗೆ ಸಂಬಂಧಿಸಿದಂತೆ ಕೆಂದ್ರ ಸರ್ಕಾರದ ಜತೆಗೆ ಸಂಪರ್ಕದಲ್ಲಿದ್ದೇವೆ. ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು ಕೂಡ ಚರ್ಚೆ ಮಾಡುತ್ತಿದ್ದಾರೆ. ಈ ಋತುವಿನಲ್ಲಿ ಜ್ವರ… pic.twitter.com/RnDS7hmYTG
— DIPR Karnataka (@KarnatakaVarthe) May 22, 2025
GOOD NEWS: ರಾಜ್ಯದ ‘ಕ್ಯಾನ್ಸರ್ ರೋಗಿ’ಗಳಿಗೆ ಗುಡ್ ನ್ಯೂಸ್: 16 ಜಿಲ್ಲಾಸ್ಪತ್ರೆಗಳಲ್ಲಿ ‘ಕೀಮೋಥೆರಪಿ ಕೇಂದ್ರ’ ಆರಂಭ