ಕಲಬುರಗಿ : ಮುಖ್ಯಮಂತ್ರಿಗಳ ಬಗ್ಗೆ ಆಡಳಿತ ಪಕ್ಷವಾದ ಕಾಂಗ್ರೆಸ್ಸಿನ ಶಾಸಕರಿಗೇ ವಿಶ್ವಾಸ ಇಲ್ಲವಾಗಿದೆ; ರಾಜ್ಯದ ಜನರಿಗೂ ವಿಶ್ವಾಸ ಇಲ್ಲ ಎಂದು ಬಿಜೆಪಿ ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ 15 ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತದಲ್ಲಿ ಹಣಕಾಸು ವ್ಯವಸ್ಥೆ ಸಂಪೂರ್ಣ ಹಾಳಾಗಿದೆ.
ರಾಜ್ಯದಲ್ಲಿ ರಾಜಕೀಯ ಅನಿಶ್ಚಿತತೆ ಕಾಡುತ್ತಿದೆ. ಸುರ್ಜೇವಾಲಾ ಅವರು ಪದೇಪದೇ ಬೆಂಗಳೂರಿಗೆ ಬರುತ್ತಿದ್ದಾರೆ. ಶಾಸಕರ ಅಭಿಪ್ರಾಯ ಪಡೆದುಕೊಳ್ಳುತ್ತಿದ್ದಾರೆ. ಇವತ್ತು ಮತ್ತೆ ಬಂದಿದ್ದಾರೆ. 3 ದಿನಗಳ ಕಾಲ ಇರುತ್ತಾರೆ. ಡಿ.ಕೆ.ಶಿವಕುಮಾರ್ ಜೊತೆ 100 ಶಾಸಕರಿದ್ದಾರೆ. ಅವರಿಗೂ ಅವಕಾಶ ಕೊಡಬೇಕೆಂಬ ನಾನಾ ಹೇಳಿಕೆ ಬರುತ್ತಿದೆ. ಬಿ.ಆರ್.ಪಾಟೀಲರ ಹೇಳಿಕೆ, ರಾಜು ಕಾಗೆಯವರ ಹೇಳಿಕೆಗಳನ್ನು ಗಮನಿಸಿದರೆ ಆಡಳಿತ ಪಕ್ಷದಲ್ಲಿ ಶಾಸಕರು ಮುಖ್ಯಮಂತ್ರಿಗಳ ಮೇಲಿನ ವಿಶ್ವಾಸವನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದಾರೆ ಎಂಬುದು ಸ್ಪಷ್ಟವಾಗಿ ಕಾಣುತ್ತದೆ ಎಂದು ತಿಳಿಸಿದ್ದರು.
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸರಿಯಾಗಿ ಇರಬಾರದು
ಎರಡು ಧರ್ಮಗಳ ನಡುವೆ ಸಂಘರ್ಷ ನಡೆಯುತ್ತಿರಬೇಕೆಂಬ ದುರುದ್ದೇಶದಿಂದ ಅಹಿತಕರ ಘಟನೆಗಳು ನಡೆಯುತ್ತಿವೆ. ರಾಜ್ಯ ಸರಕಾರವು ಇದನ್ನು ಗಂಭೀರವಾಗಿ ತೆಗೆದುಕೊಳ್ಳದೆ ಇರುವುದು ದುರಂತ ಎಂದು ಅವರು ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ನಡೆದಿದೆ. ಮೈಸೂರಿನಲ್ಲಿ ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರನ್ನೇ ಬೆದರಿಸಿದ ಷಡ್ಯಂತ್ರ ನಡೆಯುತ್ತಿದೆ. ಟಿಪ್ಪು ಜಯಂತಿ ಸಂದರ್ಭದಲ್ಲಿ ಸಮಸ್ಯೆ ಆಗಿದೆ. ಗಣೇಶ ಹಬ್ಬದ ಸಂದರ್ಭದಲ್ಲೂ ಸಮಸ್ಯೆಗಳು ಆಗುತ್ತಿವೆ. ಇದು ವ್ಯವಸ್ಥಿತ ಷಡ್ಯಂತ್ರ . ಈ ಷಡ್ಯಂತ್ರದ ವಿರುದ್ಧ ರಾಜ್ಯ ಸರಕಾರವು ಯಾವುದೇ ಕ್ರಮ ಕೈಗೊಳ್ಳದ ಕಾರಣ ಇಂಥ ದೇಶದ್ರೋಹಿಗಳಿಗೂ ಧೈರ್ಯ ಬರುತ್ತಿದೆ ಎಂದು ಆರೋಪಿಸಿದ್ದಾರೆ.
ಯಾರೇನೇ ಮಾಡಿದರೂ ರಾಜ್ಯ ಸರಕಾರ ನಮ್ಮನ್ನು ಬೆಂಬಲಿಸುತ್ತದೆ
ನಮ್ಮನ್ಯಾರೂ ಅಲ್ಲಾಡಿಸಲು ಆಗುವುದಿಲ್ಲ; ಯಾವುದೇ ಶಿಕ್ಷೆ ಕೊಡಲಾಗದು ಎಂಬಂತಿದೆ. ರಾಜ್ಯದಲ್ಲಿ ಬೇಲಿಯೇ ಎದ್ದು ಹೊಲ ಮೇಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ದುಷ್ಕøತ್ಯಗಳು ನಡೆಯುತ್ತಿವೆ. ಬಿಜೆಪಿ ಇದನ್ನು ಬಲವಾಗಿ ಖಂಡಿಸುತ್ತದೆ. ರಾಜ್ಯದ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ಗಮನಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯದ ಆಡಳಿತ ಸಂಪೂರ್ಣ ಕುಸಿದು ಬಿದ್ದಿದೆ. ಆರ್ಥಿಕ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ ಎಂಬುದಕ್ಕೆ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು ರಸ್ತೆಗಳು, ಅಭಿವೃದ್ಧಿ ಕೆಲಸ ಆಗಬೇಕೆಂದಿದ್ದರೆ ಗ್ಯಾರಂಟಿಗಳನ್ನು ನಾವು ನಿಲ್ಲಿಸುತ್ತೇವೆ ಎಂದಿರುವುದೇ ಸ್ಪಷ್ಟ ಪುರಾವೆ ಎಂದು ತಿಳಿಸಿದರು.
ಬಿಜೆಪಿಯವರು ಆರ್ಥಿಕ ಪರಿಸ್ಥಿತಿ ಕುರಿತು ಹೇಳಿದರೆ, ಸರಕಾರಿ ನೌಕರರಿಗೆ ಸಂಬಳ ಕೊಡಲಾಗದ ಸ್ಥಿತಿ ಇದೆ ಎಂದು ಹೇಳಿದರೆ ಎಲ್ಲವೂ ಸರಿ ಇದೆ ಎಂದು ಸಿದ್ದರಾಮಯ್ಯನವರು ಹೇಳುತ್ತಾರೆ. ಅವರದೇ ಆರ್ಥಿಕ ಸಲಹೆಗಾರರು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದರೆ ಇದು ರಾಯರೆಡ್ಡಿ ಅವರ ಹೇಳಿಕೆ ಅಲ್ಲ; ಸ್ವತಃ ಮುಖ್ಯಮಂತ್ರಿಗಳೇ ಗ್ಯಾರಂಟಿ ಅನುಷ್ಠಾನಕ್ಕೆ ಹಣ ಕ್ರೋಡೀಕರಿಸಲು ಸಾಧ್ಯವಾಗದೇ ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ ಎಂಬುದನ್ನು ಹಾಗೂ ಅಭಿವೃದ್ಧಿಗೆ ಹಣ ಕೊಡಲು ಸಾಧ್ಯವಿಲ್ಲ ಎಂಬುದನ್ನು ಅವರ ಮೂಲಕ ಹೇಳಿಸಿದ್ದಾರೆ ಎಂದು ತಿಳಿಸಿದರು.
ರಾಜ್ಯ ಸರಕಾರದ ಬಗ್ಗೆ ಜನರು ಬೇಸತ್ತಿದ್ದಾರೆ. ನಾಡಿನ ಜನರು ಭ್ರಷ್ಟ, ಜನವಿರೋಧಿ, ರೈತವಿರೋಧಿ ಸರಕಾರಕ್ಕೆ ಮತ ಕೊಟ್ಟು ಅಧಿಕಾರಕ್ಕೆ ತಂದಿರುವುದಕ್ಕೆ ಪಶ್ಚಾತ್ತಾಪ ಪಡುತ್ತಿದ್ದಾರೆ ಎಂದು ತೇಲ್ಕೂರ ಹೇಳಿದರು.
ಡಿಸಿಇಟಿ ಪರೀಕ್ಷೆ ಬರೆದಿದ್ದವರ ಗಮನಕ್ಕೆ: ಆಪ್ಷನ್ಸ್ ದಾಖಲಿಸಲು ದಿನಾಂಕ ವಿಸ್ತರಣೆ | DCET Exam 2025
SHOCKING: ರಾಜ್ಯದಲ್ಲೊಂದು ‘ಪೈಶಾಚಿಕ ಕೃತ್ಯ’: ಮಂಡ್ಯದಲ್ಲಿ ವೃದ್ಧನಿಂದ ಅಪ್ರಾಪ್ತೆ ಮೇಲೆ ‘ಲೈಂಗಿಕ ದೌರ್ಜನ್ಯ’