Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

“ರಷ್ಯಾ ತೈಲವನ್ನ ಭಾರತ ಮರು ಮಾರಾಟ ಮಾಡಿ ದೊಡ್ಡ ಲಾಭ ಪಡೆಯುತ್ತಿದೆ” : ಭಾರತ ಮೇಲೆ ‘ಟ್ರಂಪ್’ ಮತ್ತಷ್ಟು ಸುಂಕ ಏರಿಕೆ ಪ್ರತಿಜ್ಞೆ

04/08/2025 9:17 PM

‘ಭಗವಂತ ಶ್ರೀಕೃಷ್ಣ ಮೊದಲ ಮಧ್ಯವರ್ತಿ’ ; ದೇವಸ್ಥಾನ ಪ್ರಕರಣದ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಹೇಳಿಕೆ

04/08/2025 8:44 PM

ಮತ್ತಷ್ಟು ಭಾರತದ ಸರಕುಗಳ ಮೇಲೆ ಸುಂಕ ಹೆಚ್ಚಿಸುವುದಾಗಿ US ಅಧ್ಯಕ್ಷ ಟ್ರಂಪ್ ಘೋಷಣೆ

04/08/2025 8:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ರಾಜ್ಯಪಾಲರ ಭಾಷಣ’ದಲ್ಲಿ ಉಪ್ಪು ಹುಳಿ ಖಾರ ಏನೂ ಇಲ್ಲ- ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ಧಾಳಿ
KARNATAKA

‘ರಾಜ್ಯಪಾಲರ ಭಾಷಣ’ದಲ್ಲಿ ಉಪ್ಪು ಹುಳಿ ಖಾರ ಏನೂ ಇಲ್ಲ- ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ಧಾಳಿ

By kannadanewsnow0912/02/2024 4:10 PM

ಬೆಂಗಳೂರು: ರಾಜ್ಯಪಾಲರ ಭಾಷಣದಲ್ಲಿ ಉಪ್ಪು ಹುಳಿ ಖಾರ ಏನೂ ಇಲ್ಲ. ಇದೊಂದು ಜಾಹೀರಾತುಗಳಿಂದ ನಡೆಯುತ್ತಿರುವ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ.

ಅಲ್ಲದೆ; ಒಂದು ಕಡೆ ಬರಗಾಲ, ಕೇಂದ್ರ ಸರ್ಕಾರದಿಂದ ಹಣ ಬರುತ್ತಿಲ್ಲ ಎನ್ನುವ ಸರ್ಕಾರ ಇಲ್ಲಿ ನೋಡಿದರೆ ಗಂಜಿ ಕೇಂದ್ರಗಳನ್ನು ಸೃಷ್ಟಿ ಮಾಡಿ 90 ಮಂದಿಗೆ ಸಂಪುಟ ದರ್ಜೆ ನೀಡಿದೆ. ಅದರಲ್ಲಿ 77 ಶಾಸಕರಿಗೆ ಸಂಪುಟ ದರ್ಜೆ ಭಾಗ್ಯ ನೀಡಿದ್ದರೆ, ಸಿಎಂ ಕಚೇರಿಯಲ್ಲಿ 9 ಜನರಿಗೆ ಸಂಪುಟ ಭಾಗ್ಯ ಕರುಣಿಸಲಾಗಿದೆ. ರಾಜ್ಯದ ಆಡಳಿತಾತ್ಮಕ ಇತಿಹಾಸದಲ್ಲಿಯೂ ಇಷ್ಟು ಬೇಕಾಬಿಟ್ಟಿಯಾಗಿ ಅಧಿಕಾರ ಹಂಚಿಕೆ ಮಾಡಿ ಖಜಾನೆಗೆ ನಷ್ಟ ಉಂಟು ಮಾಡಲಾಗಿದೆ ಎಂದು ಅವರು ದೂರಿದರು.

ವಿಧಾನಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ಮಾಡಲಾದ ರಾಜ್ಯಪಾಲರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು; ಕ್ಯಾಬಿನೆಟ್ ದರ್ಜೆ ಅದಕ್ಕೊಂದು ಲೆಕ್ಕ ಬೇಡವೇ? ಉಪ ಮುಖ್ಯಮಂತ್ರಿ ಅವರ ಆರೋಗ್ಯ ತಪಾಸಣೆ ಮಾಡುವ ವೈದ್ಯರಿಗೂ ಕ್ಯಾಬಿನೆಟ್ ದರ್ಜೆ! ಕಲೆಕ್ಷನ್ ಮಾಡಿಕೊಡುವ ಅಸಾಮಿಗೂ ಕ್ಯಾಬಿನೆಟ್ ದರ್ಜೆ!! ಕರ್ನಾಟಕ ಹಣಕಾಸು ಸಂಸ್ಥೆ (KSFC) ಅಧ್ಯಕ್ಷರನ್ನಾಗಿ ಶಾಸಕರನ್ನು ನೇಮಕ ಮಾಡುತ್ತಿರುವುದು ಉಂಟಾ? ಎಂದು ಸರಕಾರವನ್ನು ಮಾಜಿ ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ಬರಕ್ಕೆ ತುತ್ತಾದ ರೈತರಿಗೆ ಪರಿಹಾರ ಕೊಡಲು ಇವರಲ್ಲಿ ಹಣವಿಲ್ಲ. ಆದರೆ, ಸಂಪುಟ ದರ್ಜೆ ಭಾಗ್ಯಕ್ಕೆ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿದ್ದಾರೆ. ಇದನ್ನು ಏನೆಂದು ಕರೆಯಬೇಕು? ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಪ್ರತೀ ವರ್ಷ ನಡೆಯುವ ಶಾಸ್ತ್ರವಷ್ಟೇ. ಪ್ರತಿ ವರ್ಷದ ಸಂಪ್ರದಾಯದಂತೆ ವಿಧಾನಸಭೆ ಕಲಾಪಗಳು ನಡೆಯುತ್ತವೆ. ಸರಕಾರದ ಮುಂದಿನ ವರ್ಷದ ನೀಲನಕ್ಷೆ ಹಾಗೂ ಸಾಧನೆಗಳ ನೋಟವನ್ನು ಕೊಡಬೇಕು. ಅದನ್ನು ಮಾಡದ ಕೆಲಸಗಳ ಬಗ್ಗೆ ಡಂಗುರ ಹೊಡೆಯುವ ಕೆಲಸ ಅಷ್ಟೇ ಆಯಿತು. ಸರ್ಕಾರದ ಸಾಧನೆಗಳ ಬಗ್ಗೆ ರಾಜ್ಯಪಾಲರಿಂದ ಭಾಷಣ ಕೇಳಿದ್ದೇವೆ. ಆದರೆ, ಈ ಭಾಷಣ ಹಾಡಿದ್ದೇ ಹಾಡೋ ಕಿಸಬಾಯಿ ದಾಸ ಎನ್ನುವ ರೀತಿಯಲ್ಲಿದೆ ಎಂದು ಅವರು ಟೀಕಿಸಿದರು.

ಇವರಿಗೆ ಸ್ಪಷ್ಟ ಬಹುಮಯದ ಸರಕಾರ ಕೊಟ್ಟಿದ್ದಾರೆ ಜನ. ಆದರೆ, ಇವರು ಅಸ್ಪಷ್ಟವಾಗಿ ಆಡಳಿತ ನಡೆಸುತ್ತಿದ್ದಾರೆ. ಗ್ಯಾರಂಟಿಗಳ ಬಗ್ಗೆ ಪ್ರತಿದಿನವೂ ಮಾಧ್ಯಮಗಳಲ್ಲಿ ನುಡಿದಂತೆ ನಡೆದಿದ್ದೇವೆ ಎಂದು ಹೇಳಿಕೊಂಡು ಹೋಗುತ್ತಿದ್ದಾರೆ. ಆದರೆ, ಕೇವಲ ಜನರಿಗೆ ಸರಿಯಾಗಿ ತಲುಪದ ಗ್ಯಾರೆಂಟಿಗಳ ಬಗ್ಗೆ ಗೌರವಾನ್ವಿತ ರಾಜ್ಯಪಾಲರಿಂದ ಸುಳ್ಳು ಭಾಷಣ ಮಾಡಿಸಿದ್ದಾರೆ.

ವಿಶೇಷವಾಗಿ ಬೆಂಗಳೂರಿನಲ್ಲಿ ಬ್ರ್ಯಾಂಡ್ ಬೆಂಗಳೂರು ಮಾಡುತ್ತೇವೆಂದು ದೊಡ್ಡ ದೊಡ್ಡ ಹೇಳಿಕೆಗಳನ್ನು ಕೊಟ್ಟಿದ್ದನ್ನು ನೋಡಿದ್ದೇವೆ. ಸಂಗಮದಿಂದ ಮೇಕೆದಾಟು ಪಾದಾಯಾತ್ರೆ ಮಾಡಿದ್ದನ್ನೂ ನೋಡಿದ್ದೇವೆ. ಆ ಮೇಕೆದಾಟು ಕಳೆದ 8 ತಿಂಗಳಲ್ಲಿ ಎಲ್ಲಿ ಶುರುವಾಯಿತೋ ಈಗಲೂ ಅಲ್ಲಿಯೇ ನಿಂತಿದೆ. ಕೃಷ್ಣಾ ಮೇಲ್ದಂಡೆ ಯೋಜನೆ ಏನಾಯಿತು, ಎಲ್ಲಿಗೆ ಬಂತು? ಅಭಿವೃದ್ಧಿ ಯೋಜನೆಗಳಿಗೆ ಹಣ ಕೇಳಲೇಬೇಡಿ ಎನ್ನುವಂತೆ ಇದೆ ಪರಿಸ್ಥಿತಿ ಎಂದು ಕುಮಾರಸ್ವಾಮಿ ಅವರು ಅಸಮಾಧಾನ ವ್ಯಕ್ತಪಡಿಸಿದರು.

ಈ ಸರಕಾರ ನುಡಿದಂತೆ ನಡೆದಿದ್ದರೆ ನಾನು ಖಂಡಿತಾ ಮೆಚ್ಚುತ್ತಿದ್ದೆ. ಆದರೆ ಇವರು ಎಲ್ಲಿಯೂ ನುಡಿದಂತೆ ನಡೆದಿಲ್ಲ. ಅದಕ್ಕೆ ನಾನು ಹೇಳಿದ್ದು, ರಾಜ್ಯಪಾಲರ ಭಾಷಣದಲ್ಲಿ ಉಪ್ಪು ಖಾರ ಉಳಿ ಇಲ್ಲಾ ಎಂದು. ಇದರ ನಾನು ಏನು ಮಾತಾಡಲಿ? ಹದಿನೈದು ಬಜೆಟ್ ಮಂಡನೆ ಮಾಡಿದ ಸಿದ್ದರಾಮಯ್ಯನವರು, ಎರಡನೇ ಮುಖ್ಯಮಂತ್ರಿ ಆದವರು ರಾಜ್ಯಪಾಲರಿಂದ ಮಾಡಿಸುವ ಭಾಷಣವೇ ಇದು? ಇದು ಅತ್ಯಂತ ಕಳಪೆ ಭಾಷಣ ಎಂದು ಮಾಜಿ ಮುಖ್ಯಮಂತ್ರಿಗಳು ಪ್ರತಿಪಾದಿಸಿದರು.

ಗ್ಯಾರಂಟಿಗಳ ಬಗ್ಗೆ ಅಧ್ಯಯನವಂತೆ

ಗ್ಯಾರಂಟಿಗಳ ಬಗ್ಗೆ ದೇಶ ವಿದೇಶದಲ್ಲಿ ಅಧ್ಯಯನ ಮಾಡುತ್ತಿದ್ದಾರಂತೆ. ಅಧ್ಯಯನ ಮಾಡುವವರಿಗೆ ವಾಸ್ತವ ಚಿತ್ರಣ ಗೊತ್ತಿದ್ದಂತೆ ಇಲ್ಲ. ಹಾವೇರಿ ಜಿಲ್ಲೆಯ ತಾಯಿ ಮಗ ಕೆಲಸಕ್ಕಾಗಿ ಗೋವಾಕ್ಕೆ ಗುಳೆ ಹೋದರು. ಅಲ್ಲಿಯೂ ಕೆಲಸ ಸಿಗಲಿಲ್ಲ ಎಂದು ರೈಲಿನಲ್ಲಿ ಊರಿಗೆ ವಾಪಸ್ ಬರುವಾಗ ಟಿಕೆಟ್ ಇರಲಿಲ್ಲ ರೈಲಿನ ಟಿಕೆಟ್ ತಪಾಸಣೆ ಮಾಡುವವನು ಅವರಿಬ್ಬರನ್ನು ಧಾರವಾಡ ಜಿಲ್ಲೆಯ ಆಳ್ನಾವರದಲ್ಲಿ ರೈಲಿನಿಂದ ಇಳಿಸಿಬಿಟ್ಟ. ಮೂರು ದಿನ ಉಪವಾಸ ಬಿದ್ದ ಆ ತಾಯಿಮಗ ಸುಸ್ತಾಗಿದ್ದರು. ತಾಯಿಗಾಗಿ ಅನ್ನ ಹುಡುಕಲು ಹೊರಟ ಮಗನಿಗೆ ಅನ್ನವೂ ಸಿಗಲಿಲ್ಲ, ಕೆಲಸವೂ ಧಕ್ಕಲಿಲ್ಲ. ಕೊನೆಗೆ ಅದೇ ಊರಿನಲ್ಲಿ ಆ ಯುವಕ ಆತ್ಮಹತ್ಯೆ ಮಾಡಿಕೊಂಡ. ಗ್ಯಾರಂಟಿಗಳು ಪರಿಣಾಮಕಾರಿಯಾಗಿ ಜಾರಿ ಆಗಿ ಅವು ಎಲ್ಲರಿಗೂ ತಲುಪಿದ್ದಿದ್ದರೆ ಆ ತಾಯಿ ಮಗ ಗೋವಾಕ್ಕೆ ಯಾಕೆ ಹೋಗುತ್ತಿದ್ದರು? ಆ ಯುವಕ ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದ? ಎಂದು ಮಾಜಿ ಮುಖ್ಯಮಂತ್ರಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಆ ತಾಯಿ ಇವತ್ತು ಅನಾಥೆಯಾಗಿದ್ದಾರೆ. ಆದರೆ ಇವರ ಗ್ಯಾರಂಟಿ ಜಾಹೀರಾತುಗಳು ಮಾತ್ರ ಹಾಗೆಯೇ ಬರುತ್ತಿವೆ. ಈ ಸರಕಾರ ಜಾಹೀರಾತು ಮೇಲೆ ನಡೆಯುತ್ತಿದೆ. ಜನಸ್ಪಂದನಕ್ಕೆ ಬಂದಿದ್ದ ಮಹಿಳೆಯರು ಗೃಹಲಕ್ಷಿ ಯೋಜನೆಯಲ್ಲಿ ಹಣ ಬಂದಿಲ್ಲಾ ಅಂತಾ ಸಿಎಂ ಅವರಿಗೆ ದೂರು ನೀಡಿದರು ಎಂದು ಗ್ಯಾರಂಟಿ ವೈಫಲ್ಯಗಳನ್ನು ಕುಮಾರಸ್ವಾಮಿ ಅವರು ಎಳೆಎಳೆಯಾಗಿ ಬಿಡಿಸಿಟ್ಟರು.

ಬಸ್ಸಿನಲ್ಲಿ ಜನರನ್ನು ಕರೆತಂದು ಜನತಾದರ್ಶನ ಮಾಡಿಲ್ಲ

ನಾನು ಸಿಎಂ ಆಗಿದ್ದಾಗ ಜನತಾದರ್ಶನ ಮಾಡಿದ್ದೆ. ಅದಕ್ಕೆ ಬಸ್ ನಲ್ಲಿ ಜನರನ್ನು ಕರೆತಂದಿರಲಿಲ್ಲ. ರಾತ್ರಿ ಮೂರು ಗಂಟೆಗೆ ಬಂದು ಜನ ಕಾಯುತ್ತಿದ್ದರು. ಬೆಳಗ್ಗೆ 9 ಗಂಟೆಯಿಂದ ಮಧ್ಯರಾತ್ರಿವರೆಗೂ ಆ ಜನರ ಅಹವಾಲು ಕೇಳಿ ಸ್ಥಳದಲ್ಲಿಯೇ ಅವರ ಸಂಕಷ್ಟ ನಿವಾರಣೆ ಮಾಡಿದ್ದೇನೆ. ಆದರೆ, ನಾನೆಂದೂ ಜಾಹೀರಾತು ಕೊಟ್ಟುಕೊಂಡು ಪ್ರಚಾರ ಪಡೆದುಕೊಳ್ಳಲಿಲ್ಲ. ದಿನಕ್ಕೆ 100 ಸುಳ್ಳು ಹೇಳಿಕೊಂಡು ಓಡಾಡುವ ಇವರು, ರಾಜ್ಯಪಾಲರಿಂದಲು ಸುಳ್ಳು ಭಾಷಣ ಮಾಡಿಸಿದ್ದಾರೆ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ನಾನು‌ ಯಾವ ಗ್ಯಾರಂಟಿಗಳನ್ನು ತಪ್ಪು ಎಂದು ಹೇಳುವುದಿಲ್ಲ. ಗ್ಯಾರಂಟಿಗಳ ವಿಚಾರದಲ್ಲಿ ನನಗೆ ಯಾವ ತಕಾರಾರೂ ಇಲ್ಲ. ಬೇಕಾದರೆ ಇನ್ನು ಐದು ಗ್ಯಾರಂಟಿ ಜಾರಿ ಮಾಡಿ, ಅಭಿನಂದಿಸ್ತಿನಿ. ಆದರೆ, ಈಗಾಗಲೇ ಜಾರಿ ಮಾಡಿರುವ ಗ್ಯಾರಂಟಿಗಳು ಏನಾಗಿವೆ? ಬೆಂಗಳೂರಿನ ಭಾಗವೇ ಆಗಿರುವ ದೇವನಹಳ್ಳಿಯಲ್ಲಿ ಶಾಲಾ ಮಕ್ಕಳಿಗೆ ಬಸ್ ಇಲ್ಲ. ಮಕ್ಕಳು ಶಾಲೆಗೆ ದಿನವೂ ನಡೆದುಕೊಂಡು ಹೋಗುವ ಪರಿಸ್ಥಿತಿ ಇದೆ. ಉದ್ಯೋಗ ಕೊಡುತ್ತೇವೆ ಎಂದು ಜಾಹೀರಾತು ಕೊಡುತ್ತಲೇ ಇದ್ದಾರೆ. ಅಷ್ಟು ಜನ ನೇಮಕ, ಇಷ್ಟು ಜನ ನೇಮಕಕ್ಕೆ ಪ್ರಸ್ತಾವನೆ ಸಲ್ಲಿಸುತ್ತೇವೆ ಎನ್ನುತ್ತಿದ್ದಾರೆ. ಬರೀ ಪ್ರಸ್ತಾವನೆ ಸಲ್ಲಿಸುವುದರಲ್ಲಿಯೇ ಸರ್ಕಾರ ಕಾಲಹರಣ ಮಾಡುತ್ತಿದೆ ಎಂದು ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.

ರಾಜ್ಯಪಾಲರ ಭಾಷಣದಲ್ಲಿ ಕಾಂತರಾಜು ವರದಿ ಸದ್ದೇ ಇಲ್ಲ

ಸಂವಿಧಾನವನ್ನು ರಕ್ಷಣೆ ಮಾಡಿದರೆ, ಸಂವಿಧಾನ ನಮ್ಮನ್ನು ರಕ್ಷಣೆ ಮಾಡುತ್ತದೆ. ಸ್ಲೋಗನ್ ಚೆನ್ನಾಗಿದೆ. ಆದರೆ, ನಾನು ಜಾತ್ಯತೀತ, ಧರ್ಮಾತೀತ ಎಂದು ಡಂಗುರ ಹೊಡೆದುಕೊಂಡು ತಿರುಗಾಡುವ ಈ ಮುಖ್ಯಮಂತ್ರಿ, ಧರ್ಮ – ಜಾತಿಗಳ ಹೆಸರಿನಲ್ಲಿ ಎಷ್ಟು ಸಮಾವೇಶಗಳನ್ನು ಮಾಡಿಲ್ಲ? ಬೇಕಾದರೆ ದಾಖಲೆ ತೆಗೆಯೋಣ ಎಂದ ಅವರು; ಕಾಂತರಾಜ್ ವರದಿಯ ಸದ್ದೇ ಇಲ್ಲವಲ್ಲ ಈ ಭಾಷಣದಲ್ಲಿ? ವರದಿ ಸ್ವೀಕಾರ ಮಾಡಿ ಜಾರಿ ಮಾಡುತ್ತೇನೆ ಎಂದು ಚಿತ್ರದುರ್ಗದಲ್ಲಿ ಅಬ್ಬರ ಮಾಡಿದ್ದರಲ್ಲ.. ಈ ಬಗ್ಗೆ ರಾಜ್ಯಪಾಲರ ಭಾಷಣದಲ್ಲಿ ಚಕಾರವೇ ಇಲ್ಲ.ಜಯಪ್ರಕಾಶ್ ಹೆಗ್ಡೆ ಅವರ ಹತ್ತಿರ ಏನ್ ಬರುಸ್ತಿದ್ದಿರಾ ಎಂದು ನೇರವಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಕುಟುಕಿದರು ಕುಮಾರಸ್ವಾಮಿ ಅವರು.

ಪ್ರೀತಂಗೌಡ ಹೇಳಿಕೆಯ ಬಗ್ಗೆ

ಹಾಸನದಲ್ಲಿ ತಾವು ನೀಡಿದ ಹೇಳಿಕೆಯ ಬಗ್ಗೆ ಮಾಜಿ ಶಾಸಕ ಪ್ರೀತಂಗೌಡ ಕೊಟ್ಟಿರುವ ಪ್ರತಿಕ್ರಿಯೆ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಕುಮಾರಸ್ವಾಮಿ ಅವರು; ದ್ವೇಷದ ಇತಿಹಾಸವೇ ಹೌದು. ಈ ಮಣ್ಣಿನ ಗುಣವೇ ಹಾಗೆ. ದಾಯಾದಿ ಕಲಹ ನಡೆಯುತ್ತಿರುತ್ತದೆ. ಅವರು ನಡೆದಿರುವ ಘಟನೆ ಹೇಳಿದ್ದಾರೆ. ಮುಂದಿನ ಭವಿಷ್ಯವನ್ನೂ ಅವರು ಹೇಳಿದ್ದಾರೆ, ನೊಡೊಣಾ.. ಎಂದರು.

ಮೈಸೂರಿನಲ್ಲಿ ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗದ ಬಗ್ಗೆ ಮಾಹಿತಿ ನೀಡಿದ ಮಾಜಿ ಮುಖ್ಯಮಂತ್ರಿಗಳು, ನಾನು ಈ ಬಗ್ಗೆ ಅಮಿತ್ ಶಾ ಅವರಿಗೆ ಮಾಹಿತಿ ಕೊಟ್ಟಿದ್ದೆ. ಬೇರೆ ಕಾರಣದಿಂದ ಹೋಗಲು ಆಗಲಿಲ್ಲ. ಇದರಲ್ಲಿ ಯಾವುದೇ ಅನುಮಾನ, ಗೊಂದಲ ಬೇಡ ಎಂದರು.

ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡರು, ಶಾಸಕಾಂಗ ಪಕ್ಷದ ಉಪ ನಾಯಕಿ ಶಾರದಾ ಪೂರ್ಯಾ ನಾಯಕ್, ಶಾಸಕರಾದ ಕೆ.ಎ.ತಿಪ್ಪೇಸ್ವಾಮಿ, ಎ.ಮಂಜು, ನೆಮಿರಾಜ್ ನಾಯಕ್, ಮೇಲೂರು ರವಿ, ಸಮೃದ್ಧಿ ಮಂಜುನಾಥ್, ಬಿ.ಎಂ.ಫಾರೂಕ್, ಭೋಜೇಗೌಡ, ಸ್ವರೂಪ್ ಪ್ರಕಾಶ್, ಟಿ.ಎ.ಶರವಣ, ಇಂಚರ ಗೋವಿಂದರಾಜು, ಕೆ.ಆರ್. ಪೇಟೆ ಮಂಜುನಾಥ್, ಹನೂರು ಮಂಜುನಾಥ್, ಹರೀಶ್ ಗೌಡ, ರಾಜೂ ಗೌಡ ಪಾಟೀಲ ಸೇರಿದಂತೆ ಪಕ್ಷದ ಎಲ್ಲಾ ಶಾಸಕರು ಉಪಸ್ಥಿತರಿದ್ದರು.

BIG NEWS: ರಾಜ್ಯದ ಸರ್ಕಾರಿ ಕಚೇರಿಯಲ್ಲಿ ‘ಬಸವಣ್ಣ’ನ ಭಾವಚಿತ್ರ ಹಾಕುವುದು ಕಡ್ಡಾಯ – ಸಿಎಂ ಸಿದ್ಧರಾಮಯ್ಯ ಆದೇಶ

ಫೆ.25ರಂದು 1137 ಸಿವಿಲ್ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗೆ ‘ಲಿಖಿತ ಪರೀಕ್ಷೆ’, ಈ ‘ನಿಯಮ’ಗಳ ಪಾಲನೆ ಕಡ್ಡಾಯ

Share. Facebook Twitter LinkedIn WhatsApp Email

Related Posts

ನಾಳೆ ಮುಷ್ಕರದಲ್ಲಿ ‘ಸಾರಿಗೆ ನೌಕರ’ರು ಪಾಲ್ಗೊಳ್ಳಬಾರದು: ‘KSRTC, BMTC ಎಂಡಿ’ ಮನವಿ

04/08/2025 8:34 PM1 Min Read

ನಾಳೆ ಮುಷ್ಕರದಲ್ಲಿ ಪಾಲ್ಗೊಳ್ಳದಂತೆ ‘ಸಾರಿಗೆ ನೌಕರ’ರಿಗೆ ‘KSRTC ಎಂಡಿ ಅಕ್ರಂ ಪಾಷಾ’ ಮನವಿ

04/08/2025 8:26 PM1 Min Read

ಮಳೆಗಾಲದ ವೇಳೆ ರಸ್ತೆಗಳು ಜಲಾವೃತವಾಗುವುದನ್ನು ತಪ್ಪಿಸಿ: BBMP ಮುಖ್ಯ ಆಯುಕ್ತ ಮಹೇಶ್ವರ್ ರಾವ್

04/08/2025 8:13 PM1 Min Read
Recent News

“ರಷ್ಯಾ ತೈಲವನ್ನ ಭಾರತ ಮರು ಮಾರಾಟ ಮಾಡಿ ದೊಡ್ಡ ಲಾಭ ಪಡೆಯುತ್ತಿದೆ” : ಭಾರತ ಮೇಲೆ ‘ಟ್ರಂಪ್’ ಮತ್ತಷ್ಟು ಸುಂಕ ಏರಿಕೆ ಪ್ರತಿಜ್ಞೆ

04/08/2025 9:17 PM

‘ಭಗವಂತ ಶ್ರೀಕೃಷ್ಣ ಮೊದಲ ಮಧ್ಯವರ್ತಿ’ ; ದೇವಸ್ಥಾನ ಪ್ರಕರಣದ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಹೇಳಿಕೆ

04/08/2025 8:44 PM

ಮತ್ತಷ್ಟು ಭಾರತದ ಸರಕುಗಳ ಮೇಲೆ ಸುಂಕ ಹೆಚ್ಚಿಸುವುದಾಗಿ US ಅಧ್ಯಕ್ಷ ಟ್ರಂಪ್ ಘೋಷಣೆ

04/08/2025 8:39 PM

ನಾಳೆ ಮುಷ್ಕರದಲ್ಲಿ ‘ಸಾರಿಗೆ ನೌಕರ’ರು ಪಾಲ್ಗೊಳ್ಳಬಾರದು: ‘KSRTC, BMTC ಎಂಡಿ’ ಮನವಿ

04/08/2025 8:34 PM
State News
KARNATAKA

ನಾಳೆ ಮುಷ್ಕರದಲ್ಲಿ ‘ಸಾರಿಗೆ ನೌಕರ’ರು ಪಾಲ್ಗೊಳ್ಳಬಾರದು: ‘KSRTC, BMTC ಎಂಡಿ’ ಮನವಿ

By kannadanewsnow0904/08/2025 8:34 PM KARNATAKA 1 Min Read

ಬೆಂಗಳೂರು: ಸಾರಿಗೆ ಸಂಸ್ಥೆಗಳು ಸಾರ್ವಜನಿಕ ಅಗತ್ಯ ಸೇವಾ ಸಂಸ್ಥೆಯಾಗಿರುವ ಸಾರಿಗೆ ಸಂಸ್ಥೆಯ ನೌಕರರು ನಾಳಿನ‌ ಮುಷ್ಕರದಲ್ಲಿ ಪಾಲ್ಗೊಳ್ಳಬಾರದೆಂದು ಕೆ ಎಸ್…

ನಾಳೆ ಮುಷ್ಕರದಲ್ಲಿ ಪಾಲ್ಗೊಳ್ಳದಂತೆ ‘ಸಾರಿಗೆ ನೌಕರ’ರಿಗೆ ‘KSRTC ಎಂಡಿ ಅಕ್ರಂ ಪಾಷಾ’ ಮನವಿ

04/08/2025 8:26 PM

ಮಳೆಗಾಲದ ವೇಳೆ ರಸ್ತೆಗಳು ಜಲಾವೃತವಾಗುವುದನ್ನು ತಪ್ಪಿಸಿ: BBMP ಮುಖ್ಯ ಆಯುಕ್ತ ಮಹೇಶ್ವರ್ ರಾವ್

04/08/2025 8:13 PM

ಕೆರೆಗಳಿಗೆ ಕೊಳಚೆ ನೀರು ಬರುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಿ: ಮಹೇಶ್ವರ್ ರಾವ್

04/08/2025 8:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.