ಮಹಾರಾಷ್ಟ್ರ: ಕರ್ನಾಟಕ – ಮಹಾರಾಷ್ಟ್ರ ಗಡಿ ವಿಷಯದಲ್ಲಿ ಈಗ ಯಾವುದೇ ರಾಜಕೀಯ ಮಾಡಬಾರದು ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.
ಇಂದಿನಿಂದ ಶುರುವಾದ ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವಿನ ಅಂತರರಾಜ್ಯ ಗಡಿ ವಿವಾದಕ್ಕೆ ಕೇಂದ್ರ ಗೃಹ ಸಚಿವರು ಇದೇ ಮೊದಲ ಬಾರಿಗೆ ಮಧ್ಯಸ್ಥಿಕೆ ವಹಿಸಿದ್ದಾರೆ. ಈ ವಿಷಯದಲ್ಲಿ ಈಗ ಯಾವುದೇ ರಾಜಕೀಯ ಬೇಡ, ಗಡಿ ನಿವಾಸಿಗಳೊಂದಿಗೆ ನಾವು ಒಟ್ಟಾಗಿ ನಿಲ್ಲಬೇಕು ಎಂದು ಮುಖ್ಯಮಂತ್ರಿ ಶಿಂಧೆ ಹೇಳಿದರು.ಇದಕ್ಕೂ ಮುನ್ನ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಂಧೆ ಅವರೊಂದಿಗೆ ದೂರವಾಣಿ ಮೂಲಕ ಸಂಭಾಷಣೆ ನಡೆಸಿದ್ದಾರೆ. ಎರಡೂ ರಾಜ್ಯಗಳಲ್ಲಿ ಶಾಂತಿ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ನಾವಿಬ್ಬರೂ ಒಪ್ಪಿಕೊಂಡಿದ್ದೇವೆ ಎಂದು ಬೊಮ್ಮಾಯಿ ಟ್ವೀಟ್ನಲ್ಲಿ ತಿಳಿಸಿದ್ದಾರೆ.