ಹುಬ್ಬಳ್ಳಿ : ಒಂದೆಡೆ ಜಗದೀಶ್ ಶೆಟ್ಟರ್ ದೆಹಲಿಯಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಮತ್ತೆ ಬಿಜೆಪಿ ಪಕ್ಷಕ್ಕೆ ಮರಳಲಿದ್ದಾರೆ ಹಾಗೂ ಇಂದು ಸಂಜೆ ಅಧಿಕೃತವಾಗಿ ಬಿಜೆಪಿ ಪಕ್ಷ ಸೇರ್ಪಡೆ ಕುರಿತಂತೆ ಘೋಷಿಸಲಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ.
ಆದರೆ ಇದರ ಮಧ್ಯ ಹುಬ್ಬಳ್ಳಿಯಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ಜಗದೀಶ್ ಶೆಟ್ಟರ್ ಬಿಜೆಪಿಗೆ ಅನಿವಾರ್ಯವಲ್ಲ ಅವರನ್ನು ಪಕ್ಷಕ್ಕೆ ಕರೆತರುವ ಬಗ್ಗೆ ಎಲ್ಲಿಯೂ ಕೂಡ ಚರ್ಚೆ ನಡೆದಿಲ್ಲ. ಶೆಟ್ಟರ್ ಪಕ್ಷಕ್ಕೆ ಸೇರ್ಪಡೆ ಕುರಿತಂತೆ ಯಾವುದೇ ರೀತಿಯಾಗಿ ಮಾತುಕತೆ ಆಗಿಲ್ಲ ಎಂದು ಹುಬ್ಬಯಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ತಿಳಿಸಿದರು.
ಈಗಾಗಲೇ ಹೈಕಮಾಂಡ್ ಜೊತೆ ಜಗದೀಶ್ ಶೆಟ್ಟರ್ ಅವರನ್ನು ಪಕ್ಷಕ್ಕೆ ಕರೆತರುವ ಕುರಿತಂತೆ ಮಾತನಾಡಿದ್ದೇನೆ. ಆದರೆ ಅವರು ಮೋದಿಯನ್ನ ಭೇಟಿಯಾಗಲಿಕ್ಕೆ ಹೋಗಿದ್ದು ಸತ್ಯಕ್ಕೆ ದೂರವಾಗಿದೆ. ನಮ್ಮ ಪಕ್ಷಕ್ಕೆ ಶೆಟ್ಟರ್ ಅವರನ್ನು ಕರೆತರುವ ಯಾವುದೇ ಬೆಳವಣಿಗೆ ಆಗಿಲ್ಲ ಎಂದು ತಿಳಿಸಿದ್ದಾರೆ.