ಬೆಂಗಳೂರು: ನಾಳೆ ರಾಜ್ಯದಲ್ಲಿ ಸರ್ಕಾರಿ ರಜೆ ಇಲ್ಲ ಸರ್ಕಾರಿ ರಜೆಯನ್ನು ನೀಡುವುದಿಲ್ಲ ಅಂತ ಸಿಎಂ ಸಿದ್ದರಾಮಯ್ಯ ಅವರು ಮಾಹಿತಿ ನೀಡಿದ್ದಾರೆ. ಅವರು ಇಂದು ತುಮಕೂರಿನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಅವರು ಮಾತನಾಡಿ, ನಾಳೆ ಮುಜುರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಪೂಜೆ ಮಾಡುವುದಕ್ಕೆ ಅವಕಾಶ ನೀಡಲಾಗಿದೆ ಅಂತ ಹೇಳಿದರು.
ಇನ್ನೂ ಇದಕ್ಕೂ ಮುನ್ನ ಸಿದ್ದಗಂಗಾ ಪಠದಲ್ಲಿ ಹಮ್ಮಿಕೊಂಡಿದ್ದ ಶ್ರೀಗಳ 5ನೇ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ನಂಜುಂಡಪ್ಪ ಅವರ ವರದಿಯಂತೆ ಸರ್ಕಾರ ಕೆಲಸ ಮಾಡುತ್ತಿದೆ. ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ದಕ್ಷಿಣ ಮತ್ತು ಉತ್ತರ ಕರ್ನಾಟಕ ನಡುವಿನ ಅಭಿವೃದ್ಧಿಯ ತಾರತಮ್ಯವನ್ನು ಹೋಗಲಾಡಿಸಲು ಸರ್ಕಾರ ಶ್ರಮಿಸುತ್ತಿದೆ. ಶಿಕ್ಷಣದ ಮೂಲಕ ತಾರತಮ್ಯ ಮತ್ತು ಅಸಮಾನ ಪ್ರಜ್ಞೆಯನ್ನು ಅಳಿಸಲು ಸಾಧ್ಯವಿದೆ. ಬಸವಾದಿ ಶರಣರ ತತ್ವಾದರ್ಶಗಳು ಸಮಾಜದಲ್ಲಿ ಜಾರಿ ಆದಾಗ ಮಾತ್ರ ಸಮಾನ ಅವಕಾಶಗಳು ಸೃಷ್ಟಿಯಾಗಲು ಸಾಧ್ಯ ಅಂತ ತಿಳಿಸಿದರು.