Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಮಾ.27ರಂದು ಸಾಗರದಲ್ಲಿ ‘ಆರ್‌ಬಿಡಿ ಕೋ-ಆಪರೇಟಿವ್ ಸೊಸೈಟಿ’ ಉದ್ಘಾಟನೆ: ಮಾಲೀಕ ಜಲೀಲ್

23/03/2026 12:15 PM

BREAKING : ಬೆಂಗಳೂರಲ್ಲಿ ಅಪ್ರಾಪ್ತೆ ಕತ್ತು ಸೀಳಿ ಹತ್ಯೆ ಕೇಸ್ : ಪರಾರಿಯಾಗಿದ್ದ ಆರೋಪಿ ಅಜ್ಮಿರ್ ನಲ್ಲಿ ಅರೆಸ್ಟ್!

23/03/2026 12:12 PM

ರೂಪಾಯಿ ಮೌಲ್ಯ ಪಾತಾಳಕ್ಕೆ: ಇತಿಹಾಸದಲ್ಲೇ ಮೊದಲ ಬಾರಿಗೆ ಡಾಲರ್ ಎದುರು 93.94ಕ್ಕೆ ಕುಸಿತ

23/03/2026 12:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Good News: ರಾಜ್ಯದಲ್ಲಿ ಬೇಸಿಗೆಯಲ್ಲಿ ‘ವಿದ್ಯುತ್ ಕಡಿತ’ ಇರುವುದಿಲ್ಲ: ಇಂಧನ ಸಚಿವ ಕೆಜೆ ಜಾರ್ಜ್
KARNATAKA

Good News: ರಾಜ್ಯದಲ್ಲಿ ಬೇಸಿಗೆಯಲ್ಲಿ ‘ವಿದ್ಯುತ್ ಕಡಿತ’ ಇರುವುದಿಲ್ಲ: ಇಂಧನ ಸಚಿವ ಕೆಜೆ ಜಾರ್ಜ್

By kannadanewsnow0901/03/2025 6:16 PM

ಬೆಂಗಳೂರು: ಬೇಸಿಗೆಯಲ್ಲಿ ವಿದ್ಯುತ್‌ ಬೇಡಿಕೆಯು ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ 2,000 ಮೆಗಾವ್ಯಾಟ್‌ ಅಧಿಕ ಇದೆ. ವಿದ್ಯುತ್‌ ಕೊರತೆ ಆಗದಂತೆ ಉತ್ತರ ಪ್ರದೇಶ, ಪಂಜಾಬ್‌ನಿಂದ ವಿನಿಮಯ ಆಧಾರದಲ್ಲಿ ವಿದ್ಯುತ್‌ ಪಡೆಯಲು ಒಪ್ಪಂದ ಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ವಿದ್ಯುತ್‌ ಕಡಿತ ಇರುವುದಿಲ್ಲ ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್‌ ಅವರು ತಿಳಿಸಿದ್ದಾರೆ. 

ಬೇಸಿಗೆಯಲ್ಲಿ ವಿದ್ಯುತ್‌ ಬೇಡಿಕೆಯು ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ 2,000 ಮೆಗಾವ್ಯಾಟ್‌ ಅಧಿಕ ಇದೆ. ವಿದ್ಯುತ್‌ ಕೊರತೆ ಆಗದಂತೆ ಉತ್ತರ ಪ್ರದೇಶ, ಪಂಜಾಬ್‌ನಿಂದ ವಿನಿಮಯ ಆಧಾರದಲ್ಲಿ ವಿದ್ಯುತ್‌ ಪಡೆಯಲು ಒಪ್ಪಂದ ಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ವಿದ್ಯುತ್‌ ಕಡಿತ ಇರುವುದಿಲ್ಲ ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್‌ ಅವರು… pic.twitter.com/qbOpU4Vu0y

— DIPR Karnataka (@KarnatakaVarthe) March 1, 2025

ಬೇಸಿಗೆಯಲ್ಲಿ 19,000 ಮೆಗಾ ವ್ಯಾಟ್‌ನಷ್ಟು ವಿದ್ಯುತ್ ಬೇಡಿಕೆಯನ್ನು ಈಡೇರಿಸಲು ಇಂಧನ ಇಲಾಖೆ ಸಿದ್ಧವಾಗಿದ್ದು, ಯಾವುದೇ ಸಂದರ್ಭದಲ್ಲೂ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

“ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ ಎಸ್ಕಾಂಗಳ ಅಧ್ಯಕ್ಷರು ಸೇರಿದಂತೆ ಇಂಧನ ಇಲಾಖೆ ಹಿರಿಯ ಅಧಿಕಾರಿಗಳೊಂದಿಗಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬೇಸಿಗೆಯಲ್ಲಿ ರೈತರ ಕೃಷಿ ಪಂಪ್ ಸೆಟ್‌ಗಳಿಗೆ ದಿನ 7 ಗಂಟೆ ಮತ್ತು ಇತರ ಉದ್ದೇಶಗಳಿಗೆ ದಿನದ 24 ಗಂಟೆ ವಿದ್ಯುತ್ ಪೂರೈಸುವ ವಾಗ್ಧಾನವನ್ನು ಈಡೇರಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ”, ಎಂದು ತಿಳಿಸಿದರು.

“ರಾಜ್ಯದಲ್ಲಿ ಬೇಡಿಕೆ ಇರುವಷ್ಟು ವಿದ್ಯುತ್ ಲಭ್ಯವಿದೆ. ಸ್ಥಳೀಯವಾಗಿ ತಾಂತ್ರಿಕ ಕಾರಣಗಳಿಂದ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಬಹುದೇ ಹೊರತು ಲೋಡ್ ಶೆಡ್ಡಿಂಗ್ ಮಾಡುವ ಸಂದರ್ಭ ಉದ್ಭವವಾಗುವುದಿಲ್ಲ.ವಿದ್ಯುತ್ ಬೇಡಿಕೆ ಹೆಚ್ಚುತ್ತಿದೆ ಎಂದರೆ, ರಾಜ್ಯವು ಅಭಿವೃದ್ಧಿ ಪಥದಲ್ಲಿ ಮುಂದುವರಿಯುತ್ತಿದೆ. ಹೆಚ್ಚಿನ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ ಎಂದು ಅರ್ಥ”, ಎಂದು ತಿಳಿಸಿದರು.

ಇಂಧನ ಭದ್ರತೆಗೆ ಪಂಪ್ಡ್‌ ಸ್ಟೋರೇಜ್‌, ಬ್ಯಾಟರಿ ಸ್ಟೋರೇಜ್

“ರಾಜ್ಯದಲ್ಲಿ ಬೇಡಿಕೆಗಿಂತ ಹೆಚ್ಚು ವಿದ್ಯುತ್‌ ಉತ್ಪಾದನೆ ಆದರೂ, ಸಂಗ್ರಹಣೆಗೆ ಅವಕಾಶ ಇಲ್ಲ. ಹೀಗಾಗಿ, ಶರಾವತಿ ಪಂಪ್ಡ್‌ ಸ್ಟೋರೇಜ್‌ ಮೂಲಕ 2000 ಮೆ.ವ್ಯಾ. ವಾರಾಹಿ ಪಂಪ್ಡ್‌ ಸ್ಟೋರೇಜ್‌ ಮೂಲಕ 1600 ಮೆ.ವ್ಯಾ. ಪಾವಗಡದಲ್ಲಿ 1000 ಮೆ.ವ್ಯಾ.ಸಾಮರ್ಥ್ಯ ಹಾಗೂ ರ‍್ಯಾಪ್ಟೆಯಲ್ಲಿ 2000 ಮೆ.ವ್ಯಾ. ಸಾಮರ್ಥ್ಯದ ಬ್ಯಾಟರಿ ಸ್ಟೋರೇಜ್‌ ಯೋಜನೆಗಳನ್ನು ಅನುಷ್ಠಾನಗೊಳಿಸಲು ತೀರ್ಮಾನಿಸಿದೆ. ಇದರಿಂದ ರಾಜ್ಯದಲ್ಲಿ ವಿದ್ಯುತ್‌ ಕೊರತೆಯಾಗದಂತೆ ನೋಡಿಕೊಳ್ಳಬಹುದು,”ಎಂದರು.

ವಿದ್ಯುತ್‌ ಉತ್ಪಾದನೆ ವಿವರ

“ಫೆಬ್ರವರಿ 27ರ ಮಾಹಿತಿ ಪ್ರಕಾರ, ಕೆಪಿಸಿಎಲ್ ನ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ 3,300 ಮೆ.ವ್ಯಾ., ಜಲ ವಿದ್ಯುತ್ ಘಟಕಗಳಲ್ಲಿ 2000 ಮೆ.ವ್ಯಾ. ವಿದ್ಯುತ್ ಉತ್ಪಾದನೆಯಾಗಿದೆ. ಅದೇ ರೀತಿ ಯುಪಿಸಿಎಲ್ ನಿಂದ 1,26 ಮೆ.ವ್ಯಾ., ಸೋಲಾರ್ ಮೂಲಕ 6,655 ಮೆ.ವ್ಯಾ., ಪವನ ಮೂಲಕ 1940 ಮೆ.ವ್ಯಾ. ವಿದ್ಯುತ್ ಉತ್ಪಾದನೆ ಮಾಡಲಾಗಿದೆ. ಇದಲ್ಲದೆ, ಸಿಜಿಎಸ್ (ಸೆಂಟ್ರಲ್ ಜೆನರೇಟಿಂಗ್ ಸ್ಟೇಷನ್ಸ್)ನಿಂದ 6,183 ಮೆ.ವ್ಯಾ. ವಿದ್ಯುತ್ ಬಂದಿದ್ದರೆ,ಕೇಂದ್ರ ಗ್ರಿಡ್ ನಿಂದ 600 ಮೆಗಾವ್ಯಾಟ್ ವಿದ್ಯುತ್ ಖರೀದಿಸಲಾಗಿದೆ. ಪಂಜಾಬ್ ಮತ್ತು ಉತ್ತರಪ್ರದೇಶದಿಂದ ವಿನಿಮಯ ಆಧಾರದ ಮೇಲೆ 700 ಮೆಗಾ ವ್ಯಾಟ್ ವಿದ್ಯುತ್ ಪಡೆಯಲಾಗಿದೆ”, ಎಂದು ತಿಳಿಸಿದರು.

“ಇದಲ್ಲದೆ, ವಿದ್ಯುತ್ ಬೇಡಿಕೆ ಪೂರೈಸಲು ಶನಿವಾರ (ಮಾ. 1) ಕೂಡ್ಗಿಯಿದ ಹೆಚ್ಚುವರಿಯಾಗಿ 310 ಮೆಗಾವ್ಯಾಟ್ ವಿದ್ಯುತ್ ಪಡೆಯಲಾಗುತ್ತದೆ. ಜತೆಗೆ ಬೇಡಿಕೆ ಆಧರಿಸಿ ವಿನಿಮಯ ಆಧಾರದ ಮೇಲೆ ಉತ್ತರ ಪ್ರದೇಶದಿಂದ ದಿನಕ್ಕೆ 100ರಿಂದ 1,275 ಮೆ.ವ್ಯಾ. ಮತ್ತು ಪಂಜಾಬ್‌ನಿಂದ 300 ಮೆ.ವ್ಯಾ. ವಿದ್ಯುತ್ ತೆಗೆದುಕೊಳ್ಳಲಾಗುವುದು. ಅಲ್ಲದೆ, ಜೂನ್ ಮೊದಲ ವಾರದವರೆಗೆ ಪ್ರತಿನಿತ್ಯ 1000 ಮೆ.ವ್ಯಾ. ವಿದ್ಯುತ್ ಖರೀದಿಸಲಾಗುವುದು”, ಎಂದು ಮಾಹಿತಿ ನೀಡಿದರು.

ಲಿಂಕ್‌ಲೈನ್ ಮೂಲಕ ಬೇಡಿಕೆ ಈಡೇರಿಸಲು ಕ್ರಮ

“ರಾಜ್ಯದ ಕೆಲವು ಸಬ್ ಸ್ಟೇಷನ್ ಗಳ ವ್ಯಾಪ್ತಿಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾಗಿ ಓವರ್ ಲೋಡ್ ಆಗುತ್ತಿದೆ. ಇನ್ನು ಕೆಲವು ಉಪ ಕೇಂದ್ರಗಳ ವ್ಯಾಪ್ತಿಯಲ್ಲಿ ಬೇಡಿಕೆಗಿಂತ ಹೆಚ್ಚು ವಿದ್ಯುತ್ ಲಭ್ಯವಿದ್ದು, ಅಂಡರ್ ಲೋಡ್ ಆಗುತ್ತಿದೆ. ಈ ಸಮಸ್ಯೆ ತಪ್ಪಿಸಲು ಅಂಡರ್ ಲೋಡ್ ಇರುವ ಉಪಕೇಂದ್ರಗಳಿಂದ ಓವರ್ ಲೋಡ್ ಇರುವ ಉಪಕೇಂದ್ರಗಳಿಗೆ ವಿದ್ಯುತ್ ಒದಗಿಸಲು ಲಿಂಕ್ ಲೈನ್ ವ್ಯವಸ್ಥೆಗೆ ಆದ್ಯತೆ ನೀಡಲಾಗುತ್ತಿದೆ. ಈಗಾಗಲೇ ಕೆಲವು ಕಡೆ ಲಿಂಕ್ ಲೈನ್ ಕಲ್ಪಿಸುವ ಪ್ರಕ್ರಿಯೆ ಪೂರ್ಣಗೊಂಡಿದೆ”, ಎಂದು ಹೇಳಿದರು.

“ರಾಜ್ಯದಲ್ಲಿ ಸಾಕಷ್ಟು ವಿದ್ಯುತ್ ಲಭ್ಯವಿದ್ದರೂ ಅದರ ಪ್ರಸರಣ ಮತ್ತು ವಿತರಣೆಯೇ ಸಮಸ್ಯೆಯಾಗಿದೆ. ಇದನ್ನು ತಪ್ಪಿಸಲು ಸಬ್ ಸ್ಟೇಷನ್ ಗಳ ಸಂಖ್ಯೆ ಹೆಚ್ಚಿಸಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ 100 ಹೊಸ ಸಬ್ ಸ್ಟೇಷನ್ ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಮುಂದಿನ ಎರಡು ವರ್ಷದಲ್ಲಿ ಪ್ರಸರಣ ಮತ್ತು ವಿತರಣೆಯಲ್ಲಿ ಇರುವ ಸಮಸ್ಯೆಗಳನ್ನು ಬಹುತೇಕ ಬಗೆಹರಿಸಲು ಕ್ರಮ ವಹಿಸಲಾಗುತ್ತಿದೆ”, ಎಂದು ತಿಳಿಸಿದರು.

ಸಿಂಗಲ್ ಫೇಸ್ ನಲ್ಲಿ ಐಪಿ ಸೆಟ್ ಹಾಕಬೇಡಿ

“ಗೃಹ ಬಳಕೆಗೆ ದಿನದ 24 ಗಂಟೆಯೂ ವಿದ್ಯುತ್ ಪೂರೈಸಬೇಕು ಎಂಬ ಉದ್ದೇಶದಿಂದ ಸಿಂಗಲ್ ಫೇಸ್ ವಿದ್ಯುತ್ ಒದಗಿಸಲು ರಾಜ್ಯ ಸರ್ಕಾರ ನಿರಂತರ ಜ್ಯೋತಿ ಯೋಜನೆ ಜಾರಿಗೆ ತಂದಿದೆ. ಅಲ್ಲದೆ, ತೋಟದ ಮನೆಗಳಲ್ಲಿ ವಾಸಿಸುವವರು ಅನುಕೂಲಕ್ಕಾಗಿ ರಾತ್ರಿ ವೇಳೆ ಸಿಂಗಲ್ ಫೇಸ್ ವಿದ್ಯುತ್ ಪೂರೈಸಲಾಗುತ್ತಿದೆ. ಆದರೆ, ಸಿಂಗಲ್ ಫೇಸ್ ವಿದ್ಯುತ್ ಪೂರೈಸುವ ಸಂದರ್ಭದಲ್ಲಿ ರೈತರು ಕನ್ವರ್ಟರ್‌ಗಳನ್ನು ಬಳಸಿ ಕೃಷಿ ಪಂಪ್‌ಸೆಟ್‌ಗಳನ್ನು ಬಳಸುತ್ತಿದ್ದಾರೆ. ಇದರಿಂದ ಟ್ರಿಪ್ ಆಗಿ ಇಡೀ ಪ್ರದೇಶದಲ್ಲೇ ವಿದ್ಯುತ್ ಪೂರೈಕೆ ಸ್ಥಗಿತಗೊಂಡು ಜನರು ತೊಂದರೆಗೊಳಗಾಗುತ್ತಾರೆ. ಆದ್ದರಿಂದ ಯಾವುದೇ ಕಾರಣಕ್ಕೂ ಸಿಂಗಲ್ ಫೇಸ್ ವಿದ್ಯುತ್ ಪೂರೈಕೆಗೆ ಕನ್ವರ್ಟರ್ ಅಳವಡಿಸಿ ಐಪಿ ಸೆಟ್ ಗಳನ್ನು ಬಳಸಬಾರದು”, ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಮನವಿ ಮಾಡಿದರು.

ರಾಜ್ಯದಲ್ಲಿ ಕಳಪೆ ಔಷಧಗಳ ಕಡಿವಾಣಕ್ಕೆ ಪ್ರತ್ಯೇಕ ನೀತಿ ಜಾರಿ: ಸಚಿವ ದಿನೇಶ್ ಗುಂಡೂರಾವ್

ರಾಜ್ಯದ ‘ಸರ್ಕಾರಿ ಶಾಲಾ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ಇನ್ಮುಂದೆ ‘AI ಕಲಿಕೆ’- ಸಚಿವ ಎನ್ ಎಸ್ ಭೋಸರಾಜು

Share. Facebook Twitter LinkedIn WhatsApp Email

Related Posts

​ಮಾ.27ರಂದು ಸಾಗರದಲ್ಲಿ ‘ಆರ್‌ಬಿಡಿ ಕೋ-ಆಪರೇಟಿವ್ ಸೊಸೈಟಿ’ ಉದ್ಘಾಟನೆ: ಮಾಲೀಕ ಜಲೀಲ್

23/03/2026 12:15 PM2 Mins Read

BREAKING : ಬೆಂಗಳೂರಲ್ಲಿ ಅಪ್ರಾಪ್ತೆ ಕತ್ತು ಸೀಳಿ ಹತ್ಯೆ ಕೇಸ್ : ಪರಾರಿಯಾಗಿದ್ದ ಆರೋಪಿ ಅಜ್ಮಿರ್ ನಲ್ಲಿ ಅರೆಸ್ಟ್!

23/03/2026 12:12 PM1 Min Read

BREAKING : ರಾಜ್ಯದಲ್ಲಿ ಒಂದೇ ದಿನ 2 ಡಿಜಿಟಲ್ ಅರೆಸ್ಟ್ ಕೇಸ್ : ಇಬ್ಬರು ವೃದ್ಧರಿಂದ 20 ಕೋಟಿ ದೋಚಿದ ಸೈಬರ್ ವಂಚಕರು!

23/03/2026 11:57 AM2 Mins Read
Recent News

​ಮಾ.27ರಂದು ಸಾಗರದಲ್ಲಿ ‘ಆರ್‌ಬಿಡಿ ಕೋ-ಆಪರೇಟಿವ್ ಸೊಸೈಟಿ’ ಉದ್ಘಾಟನೆ: ಮಾಲೀಕ ಜಲೀಲ್

23/03/2026 12:15 PM

BREAKING : ಬೆಂಗಳೂರಲ್ಲಿ ಅಪ್ರಾಪ್ತೆ ಕತ್ತು ಸೀಳಿ ಹತ್ಯೆ ಕೇಸ್ : ಪರಾರಿಯಾಗಿದ್ದ ಆರೋಪಿ ಅಜ್ಮಿರ್ ನಲ್ಲಿ ಅರೆಸ್ಟ್!

23/03/2026 12:12 PM

ರೂಪಾಯಿ ಮೌಲ್ಯ ಪಾತಾಳಕ್ಕೆ: ಇತಿಹಾಸದಲ್ಲೇ ಮೊದಲ ಬಾರಿಗೆ ಡಾಲರ್ ಎದುರು 93.94ಕ್ಕೆ ಕುಸಿತ

23/03/2026 12:12 PM

BREAKING : ರಾಜ್ಯದಲ್ಲಿ ಒಂದೇ ದಿನ 2 ಡಿಜಿಟಲ್ ಅರೆಸ್ಟ್ ಕೇಸ್ : ಇಬ್ಬರು ವೃದ್ಧರಿಂದ 20 ಕೋಟಿ ದೋಚಿದ ಸೈಬರ್ ವಂಚಕರು!

23/03/2026 11:57 AM
State News
KARNATAKA

​ಮಾ.27ರಂದು ಸಾಗರದಲ್ಲಿ ‘ಆರ್‌ಬಿಡಿ ಕೋ-ಆಪರೇಟಿವ್ ಸೊಸೈಟಿ’ ಉದ್ಘಾಟನೆ: ಮಾಲೀಕ ಜಲೀಲ್

By kannadanewsnow0923/03/2026 12:15 PM KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ ಪ್ರತಿಷ್ಠಿತ ಆರ್‌ಬಿಡಿ ಬಿಲ್ಡರ್ಸ್‌ ಸಂಸ್ಥೆಯ ವತಿಯಿಂದ ನೂತನವಾಗಿ ಆರಂಭಿಸಲಾಗಿರುವ ‘ಆರ್‌ಬಿಡಿ ಕೋ-ಆಪರೇಟಿವ್ ಸೊಸೈಟಿ’ ಯ…

BREAKING : ಬೆಂಗಳೂರಲ್ಲಿ ಅಪ್ರಾಪ್ತೆ ಕತ್ತು ಸೀಳಿ ಹತ್ಯೆ ಕೇಸ್ : ಪರಾರಿಯಾಗಿದ್ದ ಆರೋಪಿ ಅಜ್ಮಿರ್ ನಲ್ಲಿ ಅರೆಸ್ಟ್!

23/03/2026 12:12 PM

BREAKING : ರಾಜ್ಯದಲ್ಲಿ ಒಂದೇ ದಿನ 2 ಡಿಜಿಟಲ್ ಅರೆಸ್ಟ್ ಕೇಸ್ : ಇಬ್ಬರು ವೃದ್ಧರಿಂದ 20 ಕೋಟಿ ದೋಚಿದ ಸೈಬರ್ ವಂಚಕರು!

23/03/2026 11:57 AM

BREAKING : ರಾಜ್ಯದ ಜನತೆಗೆ ಗುಡ್ ನ್ಯೂಸ್ : ಕೇಂದ್ರದಿಂದ ಪ್ರತಿನಿತ್ಯ 10 ಸಾವಿರ ಸಿಲಿಂಡರ್ ಪೂರೈಕೆ : ಕೆ.ಎಚ್ ಮುನಿಯಪ್ಪ

23/03/2026 11:28 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.