ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಧಿಯಲ್ಲೇ ಘೋಷಣೆಯಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದಲೇ ಲೋಕಾರ್ಪಣೆಗೊಂಡ ಯೋಜನೆಯ ಪಕ್ಷಿ ನೋಟವನ್ನು ಮುಂದಿದೆ ಓದಿ.
• ದೇಶದ ಮೂರನೇ ಅತಿದೊಡ್ಡ ನಗರವಾಗಿರುವ ಬೃಹತ್ ಬೆಂಗಳೂರಿಗೆ ಜೀವಜಲವನ್ನು ಒದಗಿಸುವ ಮಹತ್ವದ ಕಾರ್ಯದಲ್ಲಿ ಬೆಂಗಳೂರು ನೀರು ಸರಬರಾಜು ಹಾಗೂ ಜಲಮಂಡಳಿ ತೊಡಗಿಕೊಂಡಿದೆ.
• ದಿನೇ ದಿನೇ ಬೆಳೆಯುತ್ತಿರುವ ನಗರಕ್ಕೆ ಸಮರ್ಪಕ ನೀರು ಸರಬರಾಜು ಹಾಗೂ ಉತ್ತಮ ಕೊಳಚೆ ನೀರು ನಿರ್ವಹಣೆಯ ನಿಟ್ಟಿನಲ್ಲಿ ಹಂತಗಳಲ್ಲಿ ಅನೇಕ ಯೋಜನೆಗಳನ್ನು ಕೈಗೊಂಡಿದ್ದೇವೆ.
ಸರಬರಾಜು ಹಿಂದೇನಿತ್ತು? ಈಗ ಹೇಗಿದೆ?
• 1896 ನೇ ಇಸವಿಯವರೆಗೆ ಬೆಂಗಳೂರಿನ ನೀರಿನ ಅಗತ್ಯವನ್ನು ಧರ್ಮಾಂಬುಧಿ, ಸಂಪಂಗಿ, ಹಲಸೂರು, ಸ್ಯಾಂಕಿ ಕೆರೆಗಳಂತಹ ಕೆರೆಗಳು ಪೂರೈಸುತ್ತಿದ್ದವು.
• ಇವಕ್ಕೆ ಪೂರಕವಾಗಿ ಸ್ಥಳೀಯ ಬಾವಿ ಮತ್ತು ಕಲ್ಯಾಣಿಗಳಂತಹ ಜಲಮೂಲಗಳೂ ಇದ್ದವು. ಈ ಮೂಲಗಳಿಂದ ದೊರೆಯುತ್ತಿದ್ದ ನೀರು ಬೆಂಗಳೂರಿನ ಆಗತ್ಯ ಪೂರೈಸಲು ಸಾಲದ್ದರಿಂದ ಹೊಸ ಜಲಸಂಪನ್ಮೂಲದ ಹುಡುಕಾಟ ಆರಂಭವಾಯಿತು.
• ನಗರದ ಬಳಿಯಿದ್ದ ಆರ್ಕಾವತಿ ನದಿ ಜಲ ಮೂಲವಾಗಬಹುದೆಂದು ತಿಳಿದು ಇಲ್ಲಿಂದ ನಗರಕ್ಕೆ ಸೋಸಿದ ನೀರು ಪೂರೈಸುವ ಕೆಲಸ 1896ನೇ ವರ್ಷದಲ್ಲಿ ಪ್ರಾರಂಭವಾಯಿತು.
• ಬೆಂಗಳೂರಿನ ನಿರಂತರ ಬೆಳವಣಿಗೆ ಮತ್ತು ಜನಸಂಖ್ಯೆಯ ಹೆಚ್ಚಳದಿಂದಾಗಿ ಹೊಸ ಸಂಪನ್ಮೂಲಗಳ ಹುಡುಕಾಟದ ಅವಶ್ಯಕತೆ ಕಂಡು ಬಂದಿತ್ತು. ಆಗ ಹೊಳೆದದ್ದೆ ಕಾವೇರಿ ನದಿಯ ಜಲ ಮೂಲ.
• ಕಾವೇರಿ ನದಿಯ ನೀರನ್ನು ಬೆಂಗಳೂರಿನ ಬೇಡಿಕೆಗೆ ಬಳಸಿ ಕೊಳ್ಳಲು ಕರ್ನಾಟಕ ಸರ್ಕಾರ ಅನುಮತಿ ಹೀಗಾಗಿ 1974 ರಿಂದೀಚೆಗೆ ನೀರು ಪೂರೈಕೆಗಾಗಿ ಕಾವೇರಿ ಜಲಮೂಲವನ್ನು ಹಂತಹಂತವಾಗಿ, ಘಟ್ಟಗಳಲ್ಲಿ ಬಳಸಿ ಕೊಳ್ಳವುದು ಪ್ರಾರಂಭವಾಯಿತು.
ಕಾವೇರಿ 5 ನೇ ಘಟ್ಟ
• ಕಾವೇರಿ ನೀರು ಸರಬರಾಜು ಯೋಜನೆಯ 4 ನೇ ಘಟ್ಟ 2 ನೇ ಹಂತವನ್ನು ಪೂರ್ಣಗೊಳಿಸಿದ ನಂತರವೂ ಹೊಸದಾಗಿ ಬಿಬಿಎಂಪಿ ವ್ಯಾಪ್ತಿಗೆ ಸೇರಿಸಲ್ಪಟ್ಟ 110 ಹಳ್ಳಿಗಳಿಗೆ ನೀರು ಪೂರೈಸಲು ಮಂಡಳಿಗೆ ಕಷ್ಟವಾಗುತ್ತಿತ್ತು.
• ಬಿಬಿಎಂಪಿ ವ್ಯಾಪ್ತಿಗೆ ಹೊಸದಾಗಿ ಸೇರ್ಪಡೆಯಾಗಿರುವ 110 ಹಳ್ಳಿಗಳಿಗೆ ಸಮರ್ಪಕ ನೀರು ಪೂರೈಕೆ ಮಾಡಲು 2,200 ಎಂ.ಎಲ್.ಡಿ ನೀರಿನ ಅವಶ್ಯಕತೆಯಿದೆ. ಆದರೆ, ಪ್ರಸ್ತುತ ಇರುವ ನಾಲ್ಕೂ ಹಂತಗಳ ಮೂಲಕ ನಮಗೆ ಲಭ್ಯವಾಗುತ್ತಿರುವುದು ಕೇವಲ 1450 ಎಂ.ಎಲ್.ಡಿಗಳಷ್ಟು ಮಾತ್ರ.
• ಇದನ್ನ ಮನಗೊಂಡ ಕರ್ನಾಟಕ ಸರಕಾರ ನಗರಾಭಿವೃದ್ದಿ ಇಲಾಖೆಯ ಆದೇಶದ ಅನ್ವಯ ಬೆಂಗಳೂರು ನಗರಕ್ಕೆ ಹೆಚ್ಚುವರಿಯಾಗಿ 10 ಟಿಎಂಸಿ (ಪ್ರತಿದಿನ 775 ಮಿಲಿಯನ್ ಲೀಟರ್) ನೀರನ್ನು ಮಂಜೂರು ಮಾಡಿತ್ತು.
• ನಗರದ ನೀರಿನ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ಕಾವೇರಿ 5 ನೇ ಘಟ್ಟವನ್ನು 2 ಹಂತಗಳಲ್ಲಿ ಜಪಾನ್ ಇಂಟರ್‌ನ್ಯಾಷನಲ್ ಕೋ-ಆಪರೇಷನ್ ಏಜೆನ್ಸಿ – ಜೈಕಾ ಆರ್ಥಿಕ ನೆರವಿನಿಂದ 2014 ರಲ್ಲಿ ಯೋಜನೆಯನ್ನು ಪ್ರಾರಂಭಿಸಲಾಗಿತ್ತು.
• ಈ ಮಹತ್ವಾಕಾಂಕ್ಷಿ, ಬೃಹತ್ ಹಾಗೂ ದೇಶದಲ್ಲೆ ಅತಿದೊಡ್ಡ ಯೋಜನೆಯನ್ನು ಅನುಷ್ಠಾನಗೊಳಿಸಲು 4,333 ಕೋಟಿ ರೂಪಾಯಿಗಳ ಯೋಜನಾ ವೆಚ್ಚವನ್ನು ನಿಗದಿಪಡಿಸಲಾಯಿತು. ಇದಕ್ಕೆ ಜಪಾನ್ ಇಂಟರ್ನ್ಯಾಷನಲ್ ಕೋಆಪರೇಷನ್ ಏಜೆನ್ಸಿ (JICA) ನಿಂದ ಹಣಕಾಸು ಬೆಂಬಲ ದೊರೆಯಿತು.
• ಜೈಕಾ ಶೇಕಡಾ 84ರಷ್ಟು ಹಣವನ್ನು ಓದಗಿಸಿದರೆ, ಉಳಿದ ಶೇಕಡಾ 16ರಷ್ಟು ಮೊತ್ತವನ್ನು ಕರ್ನಾಟಕ ಸರ್ಕಾರ ಮತ್ತು ಬೆಂಗಳೂರು ಜಲಮಂಡಳಿಯ ವತಿಯಿಂದ ಭರಿಸಲು ನಿರ್ಧರಿಸಲಾಯಿತು. ಇದಕ್ಕೆ ಪೂರಕವಾಗಿ 2018 ರಲ್ಲಿ JICA ಜತೆ ಔಪಚಾರಿಕ ಸಾಲ ಒಪ್ಪಂದಕ್ಕೆ ಸಹಿ ಮಾಡಲಾಯಿತು.
• ದೇಶದ ಅತಿದೊಡ್ಡ ನೀರು ಸರಬರಾಜು ಯೋಜನೆಯ ಹಿಂದೆ ಒಂದು ಭಗೀರಥ ಪ್ರಯತ್ನವಿದೆ.
• ಈ ಮಹತ್ವಾಕಾಂಕ್ಷಿ ಯೋಜನೆ ಬೃಹತ್ ಬೆಂಗಳೂರು ನಗರದ ನೀರಿನ ಬೇಡಿಕೆಯನ್ನ ಗಣನೀಯವಾಗಿ ನಿಭಾಯಿಸುವ ಸಾಮರ್ಥ್ಯ ಪಡೆದುಕೊಳ್ಳಲಿದೆ. ಅಲ್ಲದೇ, ಬೆಂಗಳೂರಿನ ಪ್ರತಿ ಮೂಲೆ ಮೂಲೆಗೂ, ಮನೆ ಮನೆಯ ಬಾಗಿಲಿಗೂ ಜೀವ ಜಲ ಕಾವೇರಿಯನ್ನು ತಲುಪಿಸಲಿದೆ.
• ಕಾವೇರಿ 5ನೇ ಹಂತದ ಯೋಜನೆಯಿಂದ ಯಶವಂತಪುರ, ಬೆಂಗಳೂರು ದಕ್ಷಿಣ, ಬ್ಯಾಟರಾಯನಪುರ, ಟಿ.ದಾಸರಹಳ್ಳಿ, ಮಹದೇವಪುರ, ಯಲಹಂಕ, ರಾಜರಾಜೇಶ್ವರಿನಗರ ಹಾಗೂ ಬೊಮ್ಮನಹಳ್ಳಿ ವಲಯದ ವಿವಿಧ ಹಳ್ಳಿಗಳ ಮನೆ ಮನೆಗೂ ಸೇರಿದಂತೆ ಬೆಂಗಳೂರಿನ ಮೂಲೆ ಮೂಲೆಗೂ ಕಾವೇರಿ ನೀರು ಸರಬರಾಜು ಆಗಲಿದೆ.
• ಕಾವೇರಿ 5ನೇ ಹಂತದ ಯೋಜನೆ ಅನುಷ್ಠಾನದಿಂದ ಬೆಂಗಳೂರಿಗೆ ಹೆಚ್ಚುವರಿಯಾಗಿ 775 ಎಂಎಲ್‌ಡಿ ನೀರು ದೊರೆಯಲಿದೆ. ಇದು ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ನೀಡಲಿದೆ.
• ಜಲ ಮಂಡಳಿಯಿಂದ ಬೆಂಗಳೂರು ನಗರದಲ್ಲಿ 10.64 ಲಕ್ಷ ಕಾವೇರಿ ನೀರಿನ ಸಂಪರ್ಕ ನೀಡಲಾಗಿದೆ. ಕಾವೇರಿ 5ನೇ ಹಂತದ ಯೋಜನೆ ಜಾರಿ ಬಳಿಕ 4 ಲಕ್ಷ ಹೊಸ ಸಂಪರ್ಕ ನೀಡಲಾಗುತ್ತಿದೆ. ಇದರಿಂದ ಜಲಮಂಡಳಿಯ ಆದಾಯ ಹೆಚ್ಚಲಿದೆ.
• ಇದುವರೆಗೆ ಪ್ರತಿ ತಿಂಗಳು ಬೆಂಗಳೂರಿನಲ್ಲಿ 1.58 ಟಿಎಂಸಿ ಕುಡಿಯುವ ನೀರು ಪೂರೈಕೆಯಾಗುತ್ತಿತ್ತು. ಕಾವೇರಿ 5ನೇ ಹಂತದ ಯೋಜನೆ ಅನುಷ್ಠಾನ ಬಳಿಕ ಮಾಸಿಕವಾಗಿ 2.4 ಟಿಎಂಸಿ ನೀರು ಸರಬರಾಜು ಆಗಲಿದೆ.
2026ರ ವೇಳೆಗೆ ಕೆಎಫ್‌ಡಿ ಲಸಿಕೆ ಲಭ್ಯ: ಐಸಿಎಂಆರ್ ನಿರ್ದೇಶಕರನ್ನ ಭೇಟಿ ಮಾಡಿ ಚೆರ್ಚಿಸಿದ ಸಚಿವ ದಿನೇಶ್ ಗುಂಡೂರಾವ್