ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಬೇಗೆಗೆ ಜನರು ತತ್ತರಿಸಿ ಹೋಗಿದ್ದಾರೆ. ಇದರ ನಡುವೆ ನೆಮ್ಮದಿಯ ಸುದ್ದಿ ಎನ್ನುವಂತೆ ಮಾರ್ಚ್.21ರಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವಂತ ಹವಾಮಾನ ಇಲಾಖೆಯು ಮಾರ್ಚ್.21ರಿಂದ ಎರಡು ದಿನಗಳ ಕಾಲ ರಾಜ್ಯದ 17 ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂಬುದಾಗಿ ತಿಳಿಸಿದೆ.
ಇನ್ನೂ ಕಲಬುರ್ಗಿ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿದನ ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ಕೋಲಾರ, ತುಮಕೂರು, ಹಾಸನ, ಕೊಡಗ ಜಿಲ್ಲೆಯಲ್ಲೂ ಮಳೆಯ ಮುನ್ಸೂಚನೆ ನೀಡಿದೆ.
ರಾಜ್ಯದ ಇತರೆ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ. ಮಾರ್ಚ್.21ರ ನಂತ್ರ ಇನ್ನಷ್ಟು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
‘ವೋಟರ್ ಲೀಸ್ಟ್’ನಲ್ಲಿ ನಿಮ್ಮ ಹೆಸರು ತೆಗೆದು ಹಾಕಲಾಗಿದೆಯೇ? ಜಸ್ಟ್ ಹೀಗೆ ಮಾಡಿ, ಮತ್ತೆ ಸೇರಿಸಿ
‘ಚುನಾವಣಾ ಬಾಂಡ್’ ಅಂಕಿಅಂಶ ಬಹಿರಂಗ: ಯಾವ ಪಕ್ಷ? ಎಷ್ಟು ‘ದೇಣಿ’ಗೆ ಸ್ವೀಕಾರ? ಇಲ್ಲಿದೆ ಮಾಹಿತಿ | Electoral bonds