ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಪರಿಷ್ಕರಣಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಇದೀಗ ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದು, ರಾಜ್ಯದಲ್ಲಿ ಒಟ್ಟು 12 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ಸರ್ಕಾರ ರದ್ದು ಮಾಡಲು ಸಂಚು ರೂಪಿಸಿದೆ ಎಂದು ಗಂಭೀರವಾದಂತಹ ಆರೋಪ ಮಾಡಿದರು.
ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 12 ಲಕ್ಷ ಬಿಪಿಎಲ್ ಕಾರ್ಡ್ ರದ್ದುಗೊಳಿಸಲು ಸಂಚು ಮಾಡುತ್ತಿದ್ದಾರೆ. ಬಡವರ ರೇಷನ್ ಕಾರ್ಡ್ ರದ್ದಾಗುತ್ತಿರುವುದರಿಂದ ಕಾಂಗ್ರೆಸ್ ರಕ್ತ ಹೀರುವ ಸರ್ಕಾರವಾಗಿದೆ. ರೇಷನ್ ಕಾರ್ಡ್ ರದ್ದು ಮಾಡುವುದನ್ನು ಕೂಡಲೇ ನಿಲ್ಲಿಸಬೇಕು. ರೇಷನ್ ಕಾರ್ಡ್ ಕೊಡುವಾಗ ಅಧಿಕಾರಿಗಳು ಕತ್ತೆ ಕಾಯುತಿದ್ರ? ಅನರ್ಹರಿಗೆ ಬಿಪಿಎಲ್ ಕಾರ್ಡ್ ನೀಡಿದ್ದಾರೆ ಅಂತಹ ಅಧಿಕಾರಿಯನ್ನು ಅಮಾನತುಗೊಳಿಸಿ ಎಂದು ಆಗ್ರಹಿಸಿದ್ದಾರೆ.
ಇನ್ನು ಬಿಜೆಪಿ ಆರ್ ಎಸ್ ಎಸ್ ವಿಷ ಇದ್ದಂತೆ ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ತಿರುಗೇಟು ನೀಡಿದ ಅವರು, ಕಾಂಗ್ರೆಸ್ನವರು ಬರಿ ವಿಷ ಅಲ್ಲ ಕಾರ್ಕೋಟ ವಿಷವಿದ್ದಂತೆ.ಆರ್ ಎಸ್ ಎಸ್ ಇಲ್ಲದಿದ್ದರೆ ದೇಶವನ್ನು ಒಡೆದು ಕ್ಷೆದ್ರ ಛಿದ್ರ ಮಾಡಿ ಬಿಡುತ್ತಿದ್ದರು ಭಾರತವನ್ನು ಮತ್ತೊಂದು ಪಾಕಿಸ್ತಾನವನ್ನಾಗಿ ಮಾಡಿಬಿಡುತ್ತಿದ್ದರು. ಮಲ್ಲಿಕಾರ್ಜುನ ಖರ್ಗೆ ವಯಸ್ಸಾದಂತೆ ರೆಬೆಲ್ ಆಗುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಈಗ ದೇಶವನ್ನು ಒಗ್ಗೂಡಿಸುತ್ತಿದ್ದಾರೆ.