ಬೆಂಗಳೂರು : ರಾಜ್ಯದ ಜನರಿಗೆ ಬಜೆಟ್ನಿಂದ ಯಾವುದೇ ಪ್ರಯೋಜನ ಆಗಿಲ್ಲ ಈ ಬಜೆಟ್ ಸಾಹಿತಿಗಳು ಬರೆದುಕೊಟ್ಟ ರೀತಿ ಕಾಣುತ್ತಿದೆ ಸಿಎಂ ಸಿದ್ದರಾಮಯ್ಯ ರಾಜ್ಯದ ಜನತೆಗೆ ಚಂಬು ನೀಡಿದ್ದಾರೆ ಎಂದು ವಿಧಾನಸೌಧದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆರೋಪಿಸಿದರು.
ಸಿದ್ದರಾಮಯ್ಯ ಸಾಲ ಮಾಡಿರುವುದೇ ದಾಖಲೆಯ ಸಾಧನೆಯಾಗಿದೆ. ಆಡಳಿತ ಪಕ್ಷದ ಸದಸ್ಯರಿಗೂ ಸಹ ಬಜೆಟ್ ನಲ್ಲಿ ಯಾವುದೇ ಆಸಕ್ತಿ ಇರಲಿಲ್ಲ. ಉತ್ತರ ಕರ್ನಾಟಕದ ಭಾಗದ ಬಗ್ಗೆ ಯಾವುದೇ ಕಾಳಜಿತವರು ಇಲ್ಲ. ಕರಾವಳಿ ಭಾಗದ ಬಗ್ಗೆಯೂ ಬಜೆಟ್ ನಲ್ಲಿ ಉಲ್ಲೇಖ ಮಾಡಿಲ್ಲ. ಕರ್ನಾಟಕವನ್ನು ಕುಡುಕರ ರಾಜ್ಯ ಮಾಡಲು ಹೊರಟಿದ್ದಾರೆ ಎಂದು ವಿಧಾನಸೌಧದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಬಜೆಟ್ ಕುರಿತು ಕಿಡಿಕಾರಿದರು.








