ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಪೊಲೀಸ್ ಮನೆಯ ಮೇಲೆ ಕಳ್ಳರು ದಾಳಿ ನಡೆಸಿದ್ದಾರೆ. ಈ ವೇಳೆ ತಡೆಯಲು ಬಂದ ಪೊಲೀಸ್ ಹಾಗೂ ಅವರ ಮಗನಿಗೆ ಶೂಟೌಟ್ ಮಾಡಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ನಡೆದಿದೆ.
BIGG NEWS : ಜ್ಞಾನವಾಪಿ ಮಸೀದಿ ಪ್ರಕರಣ : ಸುಪ್ರೀಂ ಕೋರ್ಟ್ನಲ್ಲಿ ಇಂದು ಮಹತ್ವದ ವಿಚಾರಣೆ | Gyanvapi Mosque Case
ಚಿಕ್ಕಬಳ್ಳಾಪುರ ತಾಲೂಕಿನ ಪೇರೇಸಂದ್ರ ಗ್ರಾಮದ ಎಎಸ್ಐ ನಾರಾಯಣಸ್ವಾಮಿ ಮನೆ ಮೇಲೆ ಕಳ್ಳರು ದಾಳಿ ನಡೆಸಿದ್ದಾರೆ. ಹಣ ದೋಚಲು ಯತ್ನಿಸುತ್ತಿದ್ದ ಕಳ್ಳರನ್ನು ತಡೆಯಲು ನಾರಾಯಣಸ್ವಾಮಿ ಹಾಗೂ ಅವರ ಮಗ ಪ್ರಯತ್ನಿಸಿದ್ದಾರೆ. ಈ ವೇಳೆ ಕಳ್ಳರು ಶೂಟೌಟ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾರಾಯಣ್ಸ್ವಾಮಿ ಹಾಗೂ ಅವರ ಪುತ್ರ ಶರತ್ ಎಂಬವರಿಗೆ ಗುಂಡು ತಗುಲಿದೆ.
BIGG NEWS : ಜ್ಞಾನವಾಪಿ ಮಸೀದಿ ಪ್ರಕರಣ : ಸುಪ್ರೀಂ ಕೋರ್ಟ್ನಲ್ಲಿ ಇಂದು ಮಹತ್ವದ ವಿಚಾರಣೆ | Gyanvapi Mosque Case
ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ನಾರಾಯಣಸ್ವಾಮಿ ಎಎಸ್ಐ ಆಗಿ ಕೆಲಸ ಮಾಡುತ್ತಿದ್ದಾರೆ. ಘಟನೆಗೆ ಸಂಬಂಧಿಸಿ ಪೇರೇಸಂದ್ರ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನೂ ಗಂಭೀರವಾಗಿ ಗಾಯಗೊಂಡಿರುವ ಶರತ್ನನ್ನು ಹಾಗೂ ಎಎಸ್ಐ ನಾರಾಯಣ ಸ್ವಾಮಿ ಅವರನ್ನು ಚಿಕ್ಕಬಳ್ಳಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.