ಬೆಂಗಳೂರು: ಕೊಡಗಿನ ಕೋಟೆಬೆಟ್ಟದಲ್ಲಿ ಪ್ರವಾಸಿಗರ ಮೇಲೆ ಹಲ್ಲೆ ನಡೆಸಿದ್ದು, ಘಟನೆಯಲ್ಲಿ ಪ್ರವಾಸಿಗರ ಚಿನ್ನದ ಸರ ಎಗರಿಸಿ ಪರಾರಿಯಾಗಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಮಕ್ಕಳು, ಮಹಿಳೆಯರು ಸೇರಿದಂತೆ ಪುತ್ತೂರಿನಿಂದ ಕುಟುಂಬವೊಂದು ಕೋಟೆಬೆಟ್ಟ ಪ್ರವಾಸಿ ತಾಣಕ್ಕೆ ಆಗಮಿಸಿದ ಸಂದರ್ಭ ಬೈಕಿನಲ್ಲಿ ಬಂದ ಇಬ್ಬರು ಪುಂಡರು ಹಲ್ಲೆ ನಡೆಸಿ, ಚಿನ್ನದ ಸರ ಎಗರಿಸಿ ಬೈಕನ್ನು ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಮಾದಾಪುರ ಉಪ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ ಎನ್ನಲಾಗಿದೆ.