ಬೆಳಗಾವಿ:ಬೆಳಗಾವಿ ಸುವರ್ಣಸೌಧದಲ್ಲಿ ಪಂಚಮಸಾಲಿ 2ಎ ಮೀಸಲಾತಿ ಒತ್ತಾಯಿಸಿ ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ಪಂಚಮಸಾಲಿ ಸಮಾಜದಿಂದ ವಿರಾಟ್ ಸಮಾವೇಶ ಆರಂಭವಾಗಿದೆ.
ಈ ಸಮಾವೇಶದಲ್ಲಿ ಬಂದಿದ್ದವರ 25 ಮೊಬೈಲ್ ಫೋನ್ಗಳನ್ನು ಕಳ್ಳರು ಎಗರಿಸಿದ್ದಾರೆ. ಮೊಬೈಲ್ ವಾಪಸ್ ನೀಡುವಂತೆ ಆಯೋಜಕರಿಂದ ಮನವಿ ಮಾಡಲಾಗಿದೆ.
ಇನ್ನು ಮೀಸಲಾತಿಗಾಗಿ ಆಗ್ರಹಿಸಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವ ಮುನ್ನ ಕೂಡಲಸಂಗಮ ಪಂಚಮಸಾಲಿ ಬಸವಜಯ ಮೃತ್ಯುಂಜಯ ಸ್ವಾಮೀಜನಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯದ ವಿರಾಟ್ ಸಮಾವೇಶ ಆರಂಭವಾಗಿದೆ. ಸಂಪುಟ ಸಭೆ ಬಳಿಕ ಸಿಎಂ ಬೊಮ್ಮಾಯಿ ಮೀಸಲಾತಿ ಘೋಷಣೆ ಮಾಡಲಿದ್ದಾರಾ..? ಪಂಚಮಸಾಲಿ ಹೋರಾಟ ಯಾವ ರೀತಿ ಕೊನೆಯಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಅಧಿವೇಶನದಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಲು ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಸುವರ್ಣಸೌಧ ಮುಂಭಾಗ ನೂರು ಎಕರೆ ಪ್ರದೇಶದಲ್ಲಿ ಸಮಾವೇಶ ವೇದಿಕೆ ಸಿದ್ದತೆ ಮಾಡಲಾಗಿದೆ. 20 ಲಕ್ಷಕ್ಕೂ ಹೆಚ್ಚು ಜನರು ಸೇರುವುದರಿಂದ ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ