ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ಹಾಗೂ ಜೆಡಿಎಸ್ ಪಾದಯಾತ್ರೆ ಹಮ್ಮಿಕೊಂಡಿದ್ದು, ಸಿಎಂ ಸಿದ್ದರಾಮಯ್ಯ ಪದತ್ಯಾಗಕ್ಕೆ ಆಗ್ರಹಿಸಿ ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿವೆ. ಇನ್ನು ಈ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮಾತನಾಡಿದ್ದು ಈ ಒಂದು ಹೋರಾಟ ಯಾವುದೇ ವ್ಯಕ್ತಿಯ ವಿರುದ್ಧ ಅಲ್ಲ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮುಡಾ ಸೈಟ್ ಹಗರಣ ಖಂಡಿಸಿ ಮೈಸೂರಿಗೆ ಪಾದಯಾತ್ರೆ ವಿಚಾರವಾಗಿ ಬಿಜೆಪಿ ರಾಜ್ಯಧ್ಯಕ್ಷ ಬಿವೈ ವಿಜಯೇಂದ್ರ ಚಾಮುಂಡಿ ಬೆಟ್ಟಕ್ಕೆ ತೆರಳುವ ಮುನ್ನ ಹೇಳಿಕೆ ನೀಡಿದ್ದು,ಚಾಮುಂಡಿ ಸಲ್ಲಿಸಿ ಪಾದಯಾತ್ರೆಯಲ್ಲಿ ಭಾಗಿಯಾಗುತ್ತೇನೆ. ಕಾಂಗ್ರೆಸ್ ಹಗರಣಗಳ ವಿರುದ್ಧ ಹೋರಾಟ ಯಶಸ್ವಿಯಾಗಬೇಕು. ನಮ್ಮ ಕಾರ್ಯಕರ್ತರು ಪಾದಯಾತ್ರೆಗೆ ಎಲ್ಲಾ ವ್ಯವಸ್ಥೆ ಮಾಡಿದ್ದಾರೆ.
ನಮ್ಮ ನಿರೀಕ್ಷೆಗೂ ಮೀರಿ ಜನ ಬರುತ್ತಿದ್ದಾರೆ.ಪಾದಯಾತ್ರೆ ಯಶಸ್ವಿಗೆ ಮೈಸೂರು ಭಾಗದ ಜನರ ಬೆಂಬಲವೂ ಬೇಕು. ಈ ಹೋರಾಟ ಯಾವುದೇ ವ್ಯಕ್ತಿಯ ವಿರುದ್ಧವಲ್ಲ. ಅಹಿಂದ ಹೆಸರಲ್ಲಿ ಸಿದ್ದರಾಮಯ್ಯ ಸರಕಾರ ಅಧಿಕಾರ ಹಿಡಿದಿದೆ ಆದರೆ ಅಹಿಂದ ವರ್ಗಗಳಿಗೆ ಅನ್ಯಾಯ ಮಾಡಿದ್ದಾರೆ. ಮುಖ್ಯಮಂತ್ರಿಗಳು ಓಡಿ ಹೋಗುವ ಕೆಲಸ ಮಾಡಿದ್ದಾರೆ ಎಂದು ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.
ಪಾದಯಾತ್ರೆಗೆ ಕಾಂಗ್ರೆಸ್ ನಿಂದ ಕೌಂಟರ್ ಸಮಾವೇಶ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ವಿಜಯೇಂದ್ರ ಈ ಬೆದರಿಕೆ, ಕುತಂತ್ರಕ್ಕೆ ನಾವು ಬಗ್ಗುವ ಪ್ರಶ್ನೆ ಇಲ್ಲ. ಕುತಂತ್ರದಿಂದ ಹೋರಾಟ ಮಾಡಿಸುವ ದುರುದ್ದೇಶ ಸಾಧ್ಯವಿಲ್ಲ. ವಿಜಯೇಂದ್ರ ಹೆಚ್‍ಡಿ ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿಕೆ ವಾಗ್ದಾಳಿ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅಧಿಕಾರ ಶಾಶ್ವತ ಎನ್ನುವ ಭ್ರಮೆಯಲ್ಲಿ ಇದ್ದಾರೆ. ಇದಕ್ಕೆಲ್ಲದಕ್ಕೂ ಕೂಡ ಉತ್ತರ ಕೊಡುತ್ತೇವೆ ಎಂದರು.