ದಾವಣಗೆರೆ: ಸಿಗ್ನಲ್ ಜಂಪ್ ಮಾಡೋದು ಇತ್ತೀಚಿನ ದಿನದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರಿಂದ ಹಲವು ಮಂದಿ ವಾಹನ ಸವಾರರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿರುವುದನ್ನು ನಾವು ಕಾಣಬಹುದಾಗಿದೆ.
ಈ ನಡುವೆ ಬೈಕ್ ಸವಾರನೊಬ್ಬ ಸಿಗ್ನಲ್ ಜಂಪ್ ಮಾಡಲು ಹೋಗಿ ಎದುರಿಗೆ ಬಂದ ಟಾಟಾ ಏಸ್‍ಗೆ ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ದಾವಣಗೆರೆಯ ಡಿಸಿ ಆಫೀಸ್ ಸರ್ಕಲ್‍ನಲ್ಲಿ ನಡೆದಿದೆ.ಸಾವಿಗೀಡಾದ ಯುವಕನನ್ನು ಮೈಕಲ್ ಕುಮಾರ್ (24) ಎಂದು ಗುರುತಿಸಲಾಗಿದೆ ಅಪಘಾತದಲ್ಲಿ ಬೈಕ್‍ನ ಹಿಂಬದಿ ಸವಾರನಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಉತ್ತರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ