Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಗೊರಕೆ’ ಸಾಮಾನ್ಯ ಸಮಸ್ಯೆಯಲ್ಲ, ಇದು ದೇಹಕ್ಕೆ ಅಪಾಯದ ಸೂಚನೆ, ಇವುಗಳನ್ನ ತಿನ್ನಿ!

02/02/2026 10:04 PM

BREAKING : ವ್ಯಾಪಾರ ಉದ್ವಿಗ್ನತೆ ನಡುವೆ ‘ಪ್ರಧಾನಿ ಮೋದಿ’ ಜೊತೆ ಅಮೆರಿಕಾ ಅಧ್ಯಕ್ಷ ‘ಟ್ರಂಪ್’ ಮಾತುಕತೆ!

02/02/2026 9:35 PM

ನಿಮ್ಗೆ ಹೊಟ್ಟೆ ನೋವು ಆಗುತ್ತಾ.? ಜಾಗರೂಕರಾಗಿರಿ, ಇದು ಅಪಾಯಕಾರಿ ಕಾಯಿಲೆಯಾಗಿರ್ಬೋದು!

02/02/2026 9:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇದು ಕೇವಲ ಉಪಚುನಾವಣೆಯಲ್ಲ. ನನಗೆ, ನನ್ನ ಸರ್ಕಾರಕ್ಕೆ ಭಾರೀ ಮಹತ್ವದ್ದು, ಶಕ್ತಿ ನೀಡಿ: ಸಿಎಂ ಸಿದ್ಧರಾಮಯ್ಯ ಮನವಿ
KARNATAKA

ಇದು ಕೇವಲ ಉಪಚುನಾವಣೆಯಲ್ಲ. ನನಗೆ, ನನ್ನ ಸರ್ಕಾರಕ್ಕೆ ಭಾರೀ ಮಹತ್ವದ್ದು, ಶಕ್ತಿ ನೀಡಿ: ಸಿಎಂ ಸಿದ್ಧರಾಮಯ್ಯ ಮನವಿ

By kannadanewsnow0904/11/2024 8:43 PM

ಹಾವೇರಿ: ಇದು ಕೇವಲ ಉಪಚುನಾವಣೆಯಲ್ಲ. ನನಗೆ, ನನ್ನ ಸರ್ಕಾರಕ್ಕೆ ಹೆಚ್ಚಿನ ಶಕ್ತಿ ನೀಡುವ ಮಹತ್ವದ ಚುನಾವಣೆ. ಆದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಗೆಲ್ಲಿಸಿ ನನಗೆ ಶಕ್ತಿ ನೀಡಿ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಮನವಿ ಮಾಡಿದ್ದಾರೆ.

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ನಾವು ನುಡಿದಂತೆ ನಡೆದಿದ್ದೇವೆ. ಸರ್ಕಾರ ಬಂದ 8 ತಿಂಗಳಲ್ಲೇ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಇಡೀ ರಾಜ್ಯದ ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುತ್ತಿದ್ದೇವೆ. ಇದಕ್ಕಾಗಿ ಗ್ಯಾರಂಟಿ ಯೋಜನೆಗಳಿಗಾಗಿ 56 ಸಾವಿರ ಕೋಟಿ ರೂಪಾಯಿಯನ್ನು ನೇರವಾಗಿ ರಾಜ್ಯದ ಜನರಿಗೆ ತಲುಪಿಸಿದ್ದೇವೆ ಎಂದಿದ್ದಾರೆ.

ಬಸವರಾಜ ಬೊಮ್ಮಾಯಿ ಅವರು ಕೃಷಿ ಸಚಿವರಾಗಿ, ಗೃಹ ಸಚಿವರಾಗಿ, ಮುಖ್ಯಮಂತ್ರಿಯಾಗಿ ಕ್ಷೇತ್ರಕ್ಕೆ ಏನು ನೀಡಿದ್ದಾರೆ? ಕ್ಷೇತ್ರಕ್ಕೆ ಏನೂ ಕೆಲಸ ಮಾಡದ ಬೊಮ್ಮಾಯಿ ಅವರ ಪುತ್ರನಿಗೆ ಮತ ಹಾಕುವುದರಲ್ಲಿ ಅರ್ಥವೇ ಇಲ್ಲ ಎಂದು ತಿಳಿಸಿದ್ದಾರೆ.

40 ವರ್ಷದಲ್ಲಿ ಸಣ್ಣ ಕಪ್ಪು ಚುಕ್ಕೆ ಕೂಡ ಇಲ್ಲದ ನನ್ನನ್ನು ಕೇವಲ ಷಡ್ಯಂತ್ರದಿಂದ ಕೆಳಗಿಳಿಸಲು ಪಿತೂರಿ ಮಾಡುತ್ತಿದ್ದಾರೆ. ಇದಕ್ಕೆ ನೀವು ಅವಕಾಶ ನೀಡ್ತೀರಾ? ಬಿಜೆಪಿ ಷಡ್ಯಂತ್ರ ಸೋಲಿಸಬೇಕೆಂದರೆ ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಬೇಕು ಎಂದಿದ್ದಾರೆ.ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡ್ತಾರೆಂದು ವಿಜಯೇಂದ್ರ, ಆರ್.ಅಶೋಕ, ಯತ್ನಾಳ್ ಎಲ್ಲರೂ ಬೊಬ್ಬೆ ಹೊಡೆಯುತ್ತಿದ್ದಾರೆ. ರಾಜ್ಯದ ಜನರ ನೈತಿಕ‌ ಶಕ್ತಿ ನನ್ನ ಜೊತೆಗೆ ಇರುವವರೆಗೂ ನಾನು ಬಿಜೆಪಿ ಪರಿವಾರದ ಷಡ್ಯಂತ್ರಕ್ಕೆ ಹೆದರುವ, ಬೆದರುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಐದಕ್ಕೆ ಐದೂ ವರ್ಷ ಪೂರೈಸುವುದು ಶತಸಿದ್ದ ಎಂದು ಹೇಳಿದ್ದಾರೆ.

ವಕ್ಫ್ ಆಸ್ತಿ ಸರ್ಕಾರದ ಆಸ್ತಿ ಅಲ್ಲ. ಅದು ವಕ್ಫ್ ಬೋರ್ಡ್ ಗೆ ಸೇರಿದ ಆಸ್ತಿ. ಈ ಆಸ್ತಿ ಒತ್ತುವರಿ ಮಾಡಿದವರನ್ನು ತೆರವುಗೊಳಿಸಲು ಯಡಿಯೂರಪ್ಪ, ಬೊಮ್ಮಾಯಿ, ಕುಮಾರಸ್ವಾಮಿ ಅವಧಿಯಲ್ಲೂ ನೋಟಿಸ್ ನೀಡಿದ್ದಾರೆ, ಒತ್ತುವರಿ ತೆರವುಗೊಳಿಸಿದ್ದಾರೆ. ಆದರೆ ನಮ್ಮ‌ ಸರ್ಕಾರದಿಂದ ಯಾವುದೇ ರೈತರಿಗೂ ತೊಂದರೆ ಆಗುವುದಿಲ್ಲ. ನೋಟಿಸ್ ವಾಪಾಸ್ ಪಡೆಯಲು ಸ್ಪಷ್ಟ ನಿರ್ದೇಶನ ನೀಡಿದ್ದೇನೆ ಎಂದಿದ್ದಾರೆ.

ಅಜ್ಜಂಪೀರ್ ಖಾದ್ರಿ ಅವರಿಗೆ ಒಳ್ಳೆ ಸ್ಥಾನ ಕೊಡುತ್ತೇವೆ. ಶಿಗ್ಗಾಂವ್ ನಲ್ಲಿ ಪಠಾಣ್ ಅವರನ್ನು ಗೆಲ್ಲಿಸಿ ನನಗೆ ಶಕ್ತಿ ನೀಡಿ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮನವಿ ಮಾಡಿದ್ದಾರೆ.

ಇದು ಕೇವಲ ಉಪಚುನಾವಣೆಯಲ್ಲ. ನನಗೆ, ನನ್ನ ಸರ್ಕಾರಕ್ಕೆ ಹೆಚ್ಚಿನ ಶಕ್ತಿ ನೀಡುವ ಮಹತ್ವದ ಚುನಾವಣೆ. ಆದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಗೆಲ್ಲಿಸಿ ನನಗೆ ಶಕ್ತಿ ನೀಡಿ.

ನಾವು ನುಡಿದಂತೆ ನಡೆದಿದ್ದೇವೆ. ಸರ್ಕಾರ ಬಂದ 8 ತಿಂಗಳಲ್ಲೇ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ.
ಇಡೀ ರಾಜ್ಯದ… pic.twitter.com/NuwzyBIo6L

— Siddaramaiah (@siddaramaiah) November 4, 2024

ಬೆಂಗಳೂರಿನ ‘ನಮ್ಮ ಮೆಟ್ರೋ ನಿಲ್ದಾಣ’ಗಳಲ್ಲಿ ‘ಕಿಲೋಮೀಟರ್ ಕ್ಯೂ’ ಬಗ್ಗೆ ಈ ಸ್ಪಷ್ಟನೆ ಕೊಟ್ಟ ‘BMRCL’ | Namma Metro

ಸೆನ್ಸೆಕ್ಸ್ 1,400 ಅಂಕಗಳ ಕುಸಿತ, ಹೂಡಿಕೆದಾರರಿಗೆ 8 ಲಕ್ಷ ಕೋಟಿ ರೂ. ನಷ್ಟ | Share Market Updates

BREAKING : ‘ತೀವ್ರ ಕಳವಳ’ : ಕೆನಡಾದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರಕ್ಕೆ ‘ಭಾರತ’ ಖಂಡನೆ

Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 11 ತಹಶೀಲ್ದಾರ್ ವರ್ಗಾವಣೆ | Tahashildar Transfer

02/02/2026 8:31 PM1 Min Read

BREAKING: ರಾಜ್ಯದ 3,862 ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ‘ಸ್ಮಾರ್ಟ್ ಕ್ಲಾಸ್ ರೂಂ’ ಸ್ಥಾಪಿಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ

02/02/2026 8:13 PM2 Mins Read

ಫೆ.5ರಿಂದ ಪಿಜಿ ವೈದ್ಯಕೀಯಕ್ಕೆ ಆಪ್ಷನ್ಸ್ ಎಂಟ್ರಿ ಆರಂಭ: ಕೆಇಎ

02/02/2026 8:12 PM1 Min Read
Recent News

‘ಗೊರಕೆ’ ಸಾಮಾನ್ಯ ಸಮಸ್ಯೆಯಲ್ಲ, ಇದು ದೇಹಕ್ಕೆ ಅಪಾಯದ ಸೂಚನೆ, ಇವುಗಳನ್ನ ತಿನ್ನಿ!

02/02/2026 10:04 PM

BREAKING : ವ್ಯಾಪಾರ ಉದ್ವಿಗ್ನತೆ ನಡುವೆ ‘ಪ್ರಧಾನಿ ಮೋದಿ’ ಜೊತೆ ಅಮೆರಿಕಾ ಅಧ್ಯಕ್ಷ ‘ಟ್ರಂಪ್’ ಮಾತುಕತೆ!

02/02/2026 9:35 PM

ನಿಮ್ಗೆ ಹೊಟ್ಟೆ ನೋವು ಆಗುತ್ತಾ.? ಜಾಗರೂಕರಾಗಿರಿ, ಇದು ಅಪಾಯಕಾರಿ ಕಾಯಿಲೆಯಾಗಿರ್ಬೋದು!

02/02/2026 9:28 PM

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 11 ತಹಶೀಲ್ದಾರ್ ವರ್ಗಾವಣೆ | Tahashildar Transfer

02/02/2026 8:31 PM
State News
KARNATAKA

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 11 ತಹಶೀಲ್ದಾರ್ ವರ್ಗಾವಣೆ | Tahashildar Transfer

By kannadanewsnow0902/02/2026 8:31 PM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 11 ಮಂದಿ ತಹಶೀಲ್ದಾರ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ…

BREAKING: ರಾಜ್ಯದ 3,862 ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ‘ಸ್ಮಾರ್ಟ್ ಕ್ಲಾಸ್ ರೂಂ’ ಸ್ಥಾಪಿಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ

02/02/2026 8:13 PM

ಫೆ.5ರಿಂದ ಪಿಜಿ ವೈದ್ಯಕೀಯಕ್ಕೆ ಆಪ್ಷನ್ಸ್ ಎಂಟ್ರಿ ಆರಂಭ: ಕೆಇಎ

02/02/2026 8:12 PM

JOB ALERT: 10ನೇ ಕ್ಲಾಸ್ ಪಾಸ್ ಆದವರೇ ಗಮನಿಸಿ: ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

02/02/2026 6:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.