ಬೆಂಗಳೂರು : ರಾಜ್ಯದಲ್ಲಿ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಈಗಾಗಲೇ ಆರಂಭವಾಗಿದ್ದು ಆರಂಭದಲ್ಲಿ ಸರ್ವರ್ ಸಮಸ್ಯೆ ಹಾಗೂ ಕೆಲವು ತಾಂತ್ರಿಕ ದೋಷಗಳಿಂದ ತುಂಬ ಸಮಸ್ಯೆ ಆಗಿತ್ತು. ಇದೀಗ ಸಮೀಕ್ಷೆ ವೇಗ ಪಡೆದುಕೊಂಡಿದ್ದು, ಈ ವಿಚಾರವಾಗಿ ವಿಪಕ್ಷ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದು ಇದು ಯಾವುದೇ ಜಾತಿ ಧರ್ಮಗಳಿಗೆ ಸೀಮಿತ ಅಲ್ಲ ರಾಜ್ಯದ 7 ಕೋಟಿ ಜನರ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಾಗಿದೆ ಎಂದು ತಿಳಿಸಿದರು.
ಬೆಂಗಳೂರಲ್ಲಿ ಮಾತನಾಡಿದ ಅವರು, ಜಾತಿ ಗಣತಿಯನ್ನು ವಿರೋಧಿಸಿದ ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ಇದೀಗ ತಿರುಗೇಟು ನೀಡಿದ್ದಾರೆ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಸಮೀಕ್ಷೆ ಆಗಿದ್ದು, ಯಾವುದೇ ಒಂದು ಜಾತಿ ಧರ್ಮಗಳಿಗೆ ಇದು ಸೀಮಿತ ಅಲ್ಲ, 7 ಕೋಟಿ ಜನರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯಾಗಿದೆ. ಇದು ಯಾರ ವಿರುದ್ಧವಾದ ಸಮೀಕ್ಷೆ ಅಲ್ಲವೇ ಅಲ್ಲ ಇದು ಎಲ್ಲರ ಪರವಾಗಿರುವ ಸಮೀಕ್ಷೆ ಎಂದು ತಿಳಿಸಿದ್ದಾರೆ.