ಬೆಂಗಳೂರು: ಇಂದು ಸಿಎಂ ಸಿದ್ಧರಾಮಯ್ಯ ಮಂಡಿಸುತ್ತಿರುವಂತ ರಾಜ್ಯ ಬಜೆಟ್ 2025-26 ಅವರ ಕೊನೆಯ ಬಜೆಟ್ ಆಗಿದೆ ಎಂಬುದಾಗಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ಧಾಳಿ ನಡೆಸಿದ್ದಾರೆ.
ಇಂದು ಬಜೆಟ್ ಮಂಡನೆಗೂ ಮುನ್ನಾ ವಿಧಾನಸೌಧದ ಗಾಂಧಿ ಪ್ರತಿಮೆಯ ಬಳಿಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಪ್ರತಿಭಟನೆ ನಡೆಸಿದರು. ಅನುದಾನ ಕೊಡದ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಯನ್ನು ಕೂಗಿದರು.
ಈ ವೇಳೆ ಮಾತನಾಡಿದಂತ ವಿಪಕ್ಷ ನಾಯಕ ಆರ್ ಅಶೋಕ್ ಅವರು ಇದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಕೊನೆಯ ಬಜೆಟ್ ಆಗಿದೆ. ಸದ್ಯದಲ್ಲೇ ಈ ಕಾಂಗ್ರೆಸ್ ಸರ್ಕಾರ ಬಿದ್ದೋಗುತ್ತೆ. ಅಷ್ಟರಲ್ಲಿ ಎಷ್ಟು ಬಾಚಿಕೊಳ್ಳಬೇಕೋ ಅಷ್ಟು ಬಾಚಿಕೊಳ್ಳಬೇಕು ಅಂದುಕೊಂಡಿದ್ದಾರೆ ಎಂಬುದಾಗಿ ಕಿಡಿಕಾರಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಪಾಪರ್ ಆಗಿದೆ. ಮನೆ ಹಾಳ ಸಿದ್ಧರಾಮಯ್ಯ ಅವರದ್ದು ಇದು ಕೊನೆಯ ಬಜೆಟ್ ಆಗಿದೆ ಎಂಬುದಾಗಿ ತಿಳಿಸಿದರು.
BUDGET BREAKING: ಸಿಎಂ ಸಿದ್ಧರಾಮಯ್ಯ ಬಜೆಟ್ ಮಂಡನೆಗೆ ವಿಶೇಷ ಸಚಿವ ಸಂಪುಟ ಸಭೆ ಅನುಮೋದನೆ
ರಾಜ್ಯದಲ್ಲಿ ಗಲಭೆ ಸೃಷ್ಟಿಸಿದರೇ ಸ್ವಯಂಪ್ರೇರಿತ ಕೇಸ್ ದಾಖಲು: ಗೃಹ ಸಚಿವ ಡಾ.ಜಿ ಪರಮೇಶ್ವರ್ ಎಚ್ಚರಿಕೆ