ಸುಭಾಷಿತ :

Tuesday, February 18 , 2020 1:52 PM

ಸಂಕ್ರಾಂತಿ ಹಬ್ಬದ ಆಚರಣೆಯ ಆರಂಭವಾಗಿದ್ದು ಹೀಗೆ


Tuesday, January 14th, 2020 3:33 pm

ಸ್ಪೆಷಲ್ ಡೆಸ್ಕ್: ಹಬ್ಬಗಳಲ್ಲಿ ಮೊದಲನೆಯದಾಗಿ ಬರುವಂತಹ ಹಬ್ಬ ಎಂದರೆ ಅದು ಸಂಕ್ರಾಂತಿ. ಇದನ್ನು ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಗುತ್ತದೆ. ಸಂಕ್ರಾಂತಿ ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ಆಚರಿಸಲಾಗುವ ಒಂದು ಹಬ್ಬ.

ಪೈರು ತೆಗೆಯುವ ಸಂದರ್ಭದಲ್ಲಿ ಆಚರಿಸಲಾಗುವ ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತ. ಸಂಕ್ರಾಂತಿಯನ್ನು ಧಾರ್ಮಿಕ ತತ್ವಗಳಿಂದ ಸ್ವತಂತ್ರವಾಗಿ ಆಚರಿಸಲಾಗುತ್ತದೆಯಾದರೂ ವೇದಾಂಗ ಜ್ಯೋತಿಷ್ಯ ಶಾಸ್ತ್ರದ ತಳಹದಿ ಹೊಂದಿರುವುದರಿಂದ ಮುಖ್ಯವಾಗಿ ಹಿಂದೂ ಧರ್ಮದವರಿಂದ ಆಚರಿಸಲ್ಪಡುತ್ತದೆ. ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡುಗಳ ಮುಖ್ಯ ಹಬ್ಬಗಳಲ್ಲಿ ಸಂಕ್ರಾಂತಿಯೂ ಒಂದು.

ಖಗೋಳ ವಿಜ್ಞಾನದ ಪ್ರಕಾರ ಸೂರ್ಯನ ಚಲನೆಯನ್ನು ಆಧರಿಸಿ ಒಂದು ವರ್ಷದ ಲೆಕ್ಕ ಹಾಕಲಾಗುತ್ತದೆ. ಪ್ರತಿ ತಿಂಗಳೂ ದಿಗಂತದಲ್ಲಿ ಕಾಣುವ ನಕ್ಷತ್ರಗಳನ್ನು ಆಧರಿಸಿ ರಾಶಿಗಳನ್ನಾಗಿ, ಅದೇ ಪ್ರಕಾರ ಹನ್ನೆರಡು ತಿಂಗಳುಗಳಾಗಿ ವಿಂಗಡಿಸಲಾಗಿದೆ. ಈ ದಿನದಂದು ಸೂರ್ಯನು ಮಕರ ರಾಶಿಗೆ ಚಲಿಸುತ್ತಾನೆ.

ಸೂರ್ಯನು ನಿರ್ಯಾಣ ಮಕರರಾಶಿಯನ್ನು ಪ್ರವೇಶಿಸಿದಾಗ, ‘ಮಕರ ಸಂಕ್ರಾಂತಿ’ಯಾಗುತ್ತದೆ. ಈ ಕಾಲವು ಪ್ರತಿವರ್ಷ ಗ್ರೆಗೋರಿಯನ್ ಪಂಚಾಂಗದ ಜನವರಿ 14 ರ ಸುಮಾರಿಗೆ ಬೀಳುತ್ತದೆ. ಹಿಂದೆ, ಈ ಕಾಲವೇ ಉತ್ತರಾಯಣ ಅಥವಾ ಸೂರ್ಯನ ಉತ್ತರದಿಕ್ಕಿನ ಪಯಣದ ಆರಂಭವನ್ನು ಸೂಚಿಸುವ ಕಾಲವೂ ಆಗಿತ್ತಾದ್ದರಿಂದ ಭೂಮಿಯ ಉತ್ತರಾರ್ಧಗೋಳದಲ್ಲಿ ಚಳಿ-ಬೆಚ್ಚನೆಯ ವಾತಾವರಣ ಆರಂಭವಾಗಿ, ಬೆಳೆ ಕಟಾವಿನ ಕಾಲವೂ ಆಗಿತ್ತು. ಈಗ ಉತ್ತರಾಯಣ ಡಿಸೆಂಬರ್ 22 ಕ್ಕೇ ಆದರೂ, ಹಿಂದಿನಂತೆಯೇ ಜನವರಿ 14 ರಂದು ನಡೆಯುವ ಮಕರಸಂಕ್ರಾಂತಿಯಂದೇ ಉತ್ತರಾಯಣದ ಆಚರಣೆಯೂ ನಡೆಯುತ್ತದೆ ಇದೆಲ್ಲವನ್ನು ಒಟ್ಟಾಗಿ ಈ ದಿನವನ್ನು ಹಬ್ಬವನ್ನಾಗಿ ಆಚರಣೆ ಮಾಡಲಾಗುತ್ತದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions