ಬೆಂಗಳೂರು : ಮೈಸೂರಿನ ಕೆ.ಆರ್ ನಗರದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದು, ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಶಿಕ್ಷೆಯ ಪ್ರಮಾಣದ ಕುರಿತು ವಿಚಾರಣೆ ನಡೆಯಿತು. ವಿಚಾರಣೆಯ ಬಳಿಕ ಸಂತೋಷ್ ಗಜಾನನ ಭಟ್ ಅವರು, ಪ್ರಕರಣದ ಆದೇಶವನ್ನು ಕಾಯ್ದಿರಿಸಿ 2:45 ಕ್ಕೆ ಆದೇಶ ನೀಡುವುದಾಗಿ ತಿಳಿಸಿದರು.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಶಿಕ್ಷ ಪ್ರಮಾಣದ ಕುರಿತು ವಿಚಾರಣೆ ನಡೆಯಿತು. ಮೊದಲಿಗೆ ಪ್ರಾಸಿಕ್ಯೂಷನ್ ಪರ ವಾದಿಸಲು ಕೋರ್ಟ್ ಸೂಚನೆ ನೀಡಿತು ಪ್ರಾಸಿಕ್ಯೂಷನ್ ಪರವಾಗಿ ಎಸ್ಪಿಪಿ ಬಿ.ಎನ್ ಜಗದೀಶ್ ವಾದ ಆರಂಭ ಮಾಡಿದರು. ಗರಿಷ್ಠ ಶಿಕ್ಷಕನಿಷ್ಠ ಶಿಕ್ಷೆ ಎಷ್ಟು ಎಂದು ಸ್ಪಷ್ಟವಾಗಿದೆ ಕೇವಲ ಅತ್ಯಾಚಾರ ಆಗಿದ್ದರೆ 10 ವರ್ಷದಿಂದ ಜೀವಾವಧಿ ಶಿಕ್ಷೆ ವಿಧಿಸಲು ಅವಕಾಶವಿತ್ತು. ಆದರೆ ಇಲ್ಲಿ ಪದೇ ಪದೇ ಅತ್ಯಾಚಾರವಾಗಿದೆ.
ಕನಿಷ್ಠ 10 ವರ್ಷ ಗರಿಷ್ಠ ಜೀವನ ಪರ್ಯಂತ ಸೆರೆವಾಸದ ಅವಕಾಶ ಇದೆ, ಮಹಿಳೆ ಶಿಕ್ಷಿತಳಲ್ಲ, ಬಡ ಕೂಲಿ ಕೆಲಸದ ಮಹಿಳೆ ಆಕೆಯ ಮೇಲೆ ಅಧಿಕಾರಯುತ ಸ್ಥಿತಿಯಲ್ಲಿ ಅತ್ಯಾಚಾರ ನಡೆಸಿರುವಂತಹ ಅಪರಾಧ ಸಾಬೀತಾಗಿದೆ. ದುರಾದೃಷ್ಟವಶಾತ್ ಆಕೆಗೆ ಯಾವುದೇ ಸ್ಥಾನಮಾನವಿಲ್ಲ ವಿಡಿಯೋ ನೋಡಿದರೆ ಕೃತ್ಯದ ತೀವ್ರತೆ ಸ್ಪಷ್ಟವಾಗಿದೆ 10 ಸಾವಿರ ಸಂಬಳಕ್ಕೆ ಇವರು ಕೆಲಸ ಮಾಡುತ್ತಿದ್ದರು ಎಂದು ಬಿಎನ್ ಜಗದೀಶ್ ವಾದಿಸಿದರು.
ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಮಾಡಿದ್ದಾರೆ.ಹೀಗಾಗಿ ಮಹಿಳೆ ಕೆಲಸ ಬಿಟ್ಟು ಓಡಿ ಹೋಗುವ ಸ್ಥಿತಿ ನಿರ್ಮಾಣವಾಗಿತ್ತು.ತನ್ನ ಬಟ್ಟೆಗಳನ್ನು ಬಿಟ್ಟು ಮನೆಗೆ ಓಡುವಂತಾಯಿತು. ಅಪರಾಧಿಯ ಕೈಯಲ್ಲಿ ಆಕೆ ಸುಲಭದ ಬಲಿಯಾಗಿದ್ದಳು ಅತ್ಯಾಚಾರಕ್ಕೆ ದೇಹದ ಮೇಲಲ್ಲ ಮನಸ್ಸಿನ ಮೇಲು ಆಗಿದೆ. ವಿಡಿಯೋ ನೋಡಿದ ಬಳಿಕ ಆಕೆ ಆತ್ಮಹತ್ಯೆಗೆ ನಿರ್ಧರಿಸಿದ್ದಳು ಜೀವಕ್ಕಿಂತ ಹೆಚ್ಚಿನ ಹಾನಿ ಸಂತ್ರಸ್ತ ಮಹಿಳೆಗೆ ಆಗಿದೆ ಎಂದು ಬಿಎನ್ ಜಗದೀಶ್ ವಾದಿಸಿದರು.
ಒಪ್ಪಿಗೆ ಇಲ್ಲದೆ ಲೈಂಗಿಕ ಕ್ರಿಯೆಯ ಚಿತ್ರೀಕರಣ ಮಾಡಲಾಗಿದೆ. ಆಕೆಯನ್ನು ಬ್ಲಾಕ್ಮೇಲ್ ಮಾಡಿ ಅತ್ಯಾಚಾರ ಮಾಡಲಾಗಿದೆ. ಅತ್ಯಾಚಾರದ ರೀತಿ ಆತನ ವಕ್ರ ಮನಸ್ಥಿತಿ ತೋರಿಸುತ್ತದೆ. ಪ್ರಜ್ವಲ್ ಸಂಸದನಾಗಿದ್ದು ಇಂತಹ ದುಷ್ಕೃತ್ಯ ಎಸಗಿದ್ದಾನೆ. ಕಾನೂನು ತಿಳಿದಿದ್ದರೂ ಕೂಡ ಇಂತಹ ನೀಚ ಕೃತ್ಯ ಎಸಗಿದ್ದಾನೆ. ಈತನ ಮೇಲೆ ಈ ರೀತಿಯ ಇನ್ನಷ್ಟು ಕೆಎಸ್ ಗಳಿವೆ. ಬಹಳಷ್ಟು ಜನರ ಅಶ್ಲೀಲ ವಿಡಿಯೋ ಮಾಡಿದ್ದಾನೆ. ವಿಡಿಯೋ ಚಿತ್ರೀಕರಿಸಿದ್ದು ಗಂಭೀರವಾದ ಅಪರಾಧವಾಗಿದೆ. ಪ್ರಜ್ವಲ್ ಗೆ ಗರಿಷ್ಠ ಶಿಕ್ಷೆ ವಿಧಿಸಿ. ಇದು ಇತರರಿಗೂ ಎಚ್ಚರಿಕೆಯಾಗಬೇಕು.
ಜೀವನಪರ್ಯಂತ ಸೆರೆವಾಸ ಶಿಕ್ಷೆ ನೀಡಿ. ನೋಡೋಣ ಕಿಡ್ನ್ಯಾಪ್ ಮಾಡಿ ಆಕೆ ಹೇಳಿಕೆ ಪಡೆದಿದ್ದಾರೆ ಸಾಕ್ಷಾಧಾರ ನಾಶಪಡಿಸಲು ಯತ್ನಿಸಿರುವುದು ಕೂಡ ಗಂಭೀರ ಅಪರಾಧವಾಗಿದೆ ತಪ್ಪಿಗೆ ಪಶ್ಚಾತಾಪ ತೋರಿಲ್ಲ ಈತನಿಗೆ ಕಠಿಣ ಶಿಕ್ಷೆ ನೀಡಿ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಬೇಕು. ಹಣ ಅಧಿಕಾರ ಇರುವ ಇವರಿಗೆ ಕಡಿಮೆ ಶಿಕ್ಷೆ ಆಗಬಾರದು. ತನಗಿರುವ ಸ್ಥಾನಮಾನವನ್ನು ಈತ ದುರುಪಯೋಗಪಡಿಸಿಕೊಂಡಿದ್ದಾನೆ. ಹಾಗಾಗಿ ಗರಿಷ್ಠ ಶಿಕ್ಷೆ ವಿಧಿಸಬೇಕು ಎಂದು ಎಸ್ಪಿಪಿ ಬಿಎನ್ ಜಗದೀಶ್ ಮನವಿ ಮಾಡಿದರು.
ಸುಪ್ರೀಂ ಕೋರ್ಟ್ ತೀರ್ಪು ಉಲ್ಲೇಖಿಸಿ ಜಗದೀಶ್ ವಾದ ಮಂಡಿಸಿದರು. ಕಡಿಮೆ ಶಿಕ್ಷ ವಿಧಿಸಿದಾಗ ಸುಪ್ರೀಂ ಕೋರ್ಟ್ ಶಿಕ್ಷೆ ಹೆಚ್ಚಿಸಿದೆ. ಸುಪ್ರೀಂ ಕೋರ್ಟ್ ಶಿಕ್ಷೆ ಹೆಚ್ಚಿಸಿದ ಉದಾಹರಣೆಗಳು ಕೂಡ ಇವೆ. ಅಪರಾಧಿಯ ವಕ್ರ ಮನಸ್ಥಿತಿ ಗಮನದಲ್ಲಿ ಇಡಬೇಕು.ಇಂತಹ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆಯೇ ವಿಧಿಸಬೇಕು ಎಂದು ಬಿ.ಎನ್ ಜಗದೀಶ್ ತಮ್ಮ ವಾದವನ್ನು ಅಂತ್ಯಗೊಳಿಸಿದರು.