ಬೆಂಗಳೂರು : ಐಪಿಎಲ್ ಸೀಸನ್ 18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ನಿನ್ನೆ ಪಂಜಾಬ್ ವಿರುದ್ಧ ನಡೆದ ಮೊದಲ ಕ್ವಾಲಿಫೈಯರ್ ನಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಫೈನಲ್ ತಲುಪಿದ್ದು, ಈ ನಡುವೆ ಆರ್ ಸಿಬಿ ಕಪ್ ಗೆದ್ದರೆ ಆ ದಿನವನ್ನು ಆರ್ ಸಿಬಿ ಫ್ಯಾನ್ಸ್ ಹಬ್ಬದ ದಿನವನ್ನಾಗಿ ಘೋಷಣೆ ಮಾಡುವಂತೆ ಅಭಿಮಾನಿಯೊಬ್ಬರು ಸಿಎಂ ಸಿದ್ದರಾಮಯ್ಯಗೆ ವಿಶೇಷ ಪತ್ರ ಬರೆದಿದ್ದಾರೆ.
ಹೌದು, . ಗೋಕಾಕ ಮೂಲದ ಯುವಕ ಶಿವಾನಂದ ಮಲ್ಲನ್ನವರ್ ಎಂಬ ಯುವಕ ಸಿಎಂಗೆ ಪತ್ರ ಬರೆದಿದ್ದು ರಾಜ್ಯೋತ್ಸವದ ರೀತಿಯಲ್ಲಿ ಆರ್‌ಸಿಬಿ ಫ್ಯಾನ್ಸ್ ಹಬ್ಬದ ರೀತಿಯಲ್ಲಿ ಆಚರಣೆಗೆ ಅವಕಾಶ ನೀಡಿ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.
ಆರ್‌ಸಿಬಿ ಕಪ್ ಗೆದ್ದರೆ ಆದ ದಿನವನ್ನ ʻಆರ್‌ಸಿಬಿ ಫ್ಯಾನ್ಸ್ ಹಬ್ಬʼದ (RCB Fans Festival) ದಿನನ್ನಾಗಿ ಘೋಷಿಸಿ. ಜೊತೆಗೆ ಒಂದು ದಿನ ಸಾರ್ವತ್ರಿಕ ರಜೆ ಘೋಷಣೆ ಮಾಡುವಂತೆ ಸಿಎಂಗೆ ಪತ್ರದಲ್ಲಿ ಮನವಿ ಮಾಡಲಾಗಿದೆ. ಈ ಪತ್ರ ಸೋಷಿಯಲ್ ಮೀಡಿಯಾದಲ್ಲೂ ವೈರಲ್ ಆಗಿದೆ.









