ಮೈಸೂರು: 2025 ರ ದಸಾರ ಉದ್ಘಾಟನೆ ಯನ್ನು ಬೂಕರ್ ಪ್ರಶಸ್ತಿ ಪಡೆದ ಕನ್ನಡದ ಮೊದಲ ಸಾಹಿತಿ ಬಾನು ಮುಷ್ತಾಕ್ ಅವರಿಂದ ಮಾಡಿಸಲು ಸರ್ಕಾರಕ್ಕೆ ತೇಜಸ್ವಿ ಮನವಿ ಮಾಡಿದ್ದಾರೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, 2025 ರ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಯನ್ನು ಬೂಕರ್ ಪ್ರಶಸ್ತಿ ಪಡೆದ ಕನ್ನಡದ ಮೊದಲ ಸಾಹಿತಿ ” ಬಾನು ಮುಷ್ತಾಕ್ ” ಅವರಿಂದ ಮಾಡಿಸ ಬೇಕೆಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಕನ್ನಡ ದ ಪ್ರಮುಖ ಲೇಖಕಿ ಎಸ್, ಕೆ, ಬಾನು ಮುಷ್ತಾಕ್ ಅವರ ‘ಹಾರ್ಟ ಲ್ಯಾಂಪ್ ‘ ಕೃತಿಗೆ ವಿಶ್ವದ ಮೇರು ಸಾಹಿತ್ಯ ಪ್ರಶಸ್ತಿಯಾದ 2025 ನೇ ಸಾಲಿನ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಒಲಿದಿದೆ. ಲಂಡನ್ ನಲ್ಲಿ 2025 ಮೇ 20 ರಂದು ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕೃತಿಯ ಅನುವಾದಕರಾದ ದೀಪ ಭಸ್ತಿ ಅವರೊಂದಿಗೆ ಬಾನು ಮುಷ್ತಾಕ್ ಅವರು ಈ ಪ್ರಶಸ್ತಿಯನ್ನು ಸ್ವೀಕರಿಸಿದ್ದರು ಎಂದಿದ್ದಾರೆ.
ಬಾನು ಅವರು ‘ ಎದೆಯ ಹಣತೆ ‘ ಶೀರ್ಷಿಕೆಯಡಿ ಬರೆದಿದ್ದ ಈ ಕೃತಿಯನ್ನು ದೀಪಾ ಭಸ್ತಿಯವರು ‘ ಹಾರ್ಟ್ ಲ್ಯಾಂಪ್ ‘ ಹೆಸರಿನಲ್ಲಿ ಅನುವಾದಿಸಿದ್ದಾರೆ. ಬೂಕರ್ ಪ್ರಶಸ್ತಿಯು ಕನ್ನಡ ಸಾಹಿತ್ಯಕ್ಕೆ ಸಿಕ್ಕ ಗೆಲುವು ಎಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ಸಂತಸ ವ್ಯಕ್ತಪಡಿಸಿದ್ದಾರೆ.
ಬಾನು ಮುಷ್ತಾಕ್ ಅವರು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ 2025 ರ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಯನ್ನು ಬೂಕರ್ ಪ್ರಶಸ್ತಿ ಪಡೆದ ಮೊದಲ ಕನ್ನಡ ಸಾಹಿತಿ ಬಾನು ಮುಷ್ತಾಕ್ ಅವರಿಂದ ಉದ್ಘಾಟನೆ ಮಾಡಿಸುವ ಮೂಲಕ ಗೌರವ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ತೇಜಸ್ವಿ ಮನವಿ ಮಾಡಿದ್ದಾರೆ.