ಮೈಸೂರು: ಗಣರಾಜೋತ್ಸವ ಪರೇಡ್ನಲ್ಲಿ ಈ ಬಾರಿ ರಾಜ್ಯದ ಸ್ತಬ್ಧ ಚಿತ್ರಕ್ಕೆ ಅವಕಾಶ ಸಿಗುತ್ತೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ವರ್ಷ ಬೇರೆ ಬೇರೆ ರಾಜ್ಯಗಳಿಗೆ ಅವಕಾಶ ಕೊಡಲಾಗುತ್ತದೆ. ಈ ವರ್ಷವೂ ಭಾಗವಹಿಸಲು ಅವಕಾಶ ಕೊಡಿ ಅಂತ ಕೇಳುತ್ತೇವೆ. ಈ ವರ್ಷವೂ ರಾಜ್ಯದ ಸ್ತಬ್ಧ ಚಿತ್ರಕ್ಕೆ ಅವಕಾಶ ಸಿಗಲಿದೆ ಎಂದರು.
ಕಳೆದ 13 ವರ್ಷಗಳಿಂದ ಸತತವಾಗಿ ಗಣರಾಜ್ಯೋತ್ಸವ ಪರೇಡ್ ನಲ್ಲಿ ಪಾಲ್ಗೊಳ್ಳುತ್ತಿದ್ದ ರಾಜ್ಯದ ಸ್ತಬ್ಧಚಿತ್ರಕ್ಕೆ ಈ ಬಾರಿ ಮನ್ನಣೆ ನೀಡಿಲ್ಲ. ಈಗ 13 ವರ್ಷಗಳ ಬಳಿಕ ಕರ್ನಾಟಕ ಅವಕಾಶ ಕಳೆದುಕೊಂಡಿದ್ದು, ಕೇಂದ್ರ ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತವಾಗಿದೆ. ಪ್ರತಿಬಾರಿ ರಾಜ್ಯದ ಸ್ತಬ್ಧಚಿತ್ರ ಗಣರಾಜ್ಯೋತ್ಸವ ಪರೇಡ್ ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಾ ಬಂದಿತ್ತು. ಹಲವು ಬಾರಿ ರಾಜ್ಯ ತಂಡ ಪ್ರಶಸ್ತಿಯನ್ನೂ ಗೆದ್ದಿತ್ತು. ಆದ್ರೀಗ ರಾಜ್ಯವನ್ನು ಕಡೆಗಣಿಸಿರುವ ಕ್ರಮಕ್ಕೆ ಆಕ್ರೋಶ ವ್ಯಕ್ತವಾಗಿದೆ